ಬಿಎಸ್ಎನ್ಎಲ್ ನಲ್ಲಿ ಸಾವಿರಾರು ಹುದ್ದೆಗಳಿಗೆ ಅರ್ಜಿ ಆಹ್ವಾನ!!!

0
5290

ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (ಬಿಎಸ್ಎನ್ಎಲ್) ಜೂನಿಯರ್ ಟೆಲಿಕಾಂ ಆಫೀಸರ್ಗಳ ನೇಮಕ ಪ್ರಕ್ರಿಯೆ ಆರಂಭಿಸಿದೆ. 2017ರ ‘ಗೇಟ್’ ಪರೀಕ್ಷೆಯಲ್ಲಿನ ಸಾಧನೆಯನ್ನು ಆಧರಿಸಿ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಟೆಲಿಕಾಂ, ಎಲೆಕ್ಟ್ರಿಕಲ್ ಮತ್ತು ಸಿವಿಲ್ ವಿಭಾಗದಲ್ಲಿ ಈ ನೇಮಕ ನಡೆಯಲಿದೆ.

ಗೇಟ್ ಪರೀಕ್ಷೆ ತೆಗೆದುಕೊಂಡಿರುವ ಎಂಜಿನಿಯರಿಂಗ್ ಪದವೀಧರರು 2017ರ ಜನವರಿ 1ರಿಂದ ಜನವರಿ 31ರ ತನಕ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ದೇಶಾದ್ಯಂತ ಖಾಲಿ ಇರುವ ಒಟ್ಟು ಹುದ್ದೆಗಳು 2,510

ಅರ್ಹತೆಗಳೇನು?
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಇ/ಬಿಟೆಕ್ ಓದಿರಬೇಕು ಅಥವಾ ಟೆಲಿಕಾಂ/ ಎಲೆಕ್ಟ್ರಾನಿಕ್ಸ್/ ರೇಡಿಯೋ/ ಕಂಪ್ಯೂಟರ್/ಎಲೆಕ್ಟ್ರಿಕಲ್/ಇನ್ಫಾರ್ಮೇಶನ್ ಟೆಕ್ನಾಲಜಿ ಅಥವಾ ಇನ್ಸ್ಟ್ರುಮೆಂಟೇಶನ್ ಎಂಜಿನಿಯರಿಂಗ್ನಲ್ಲಿ ತತ್ಸಮಾನ ಶಿಕ್ಷಣ ಪಡೆದಿರಬೇಕು. ಎಲೆಕ್ಟ್ರಾನಿಕ್ಸ್ ಅಥವಾ ಕಂಪ್ಯೂಟರ್ ಸೈನ್ಸ್ನಲ್ಲಿ ಎಂಎಸ್ಸಿ ವ್ಯಾಸಂಗ ಪೂರ್ಣಗೊಳಿಸಿರುವ ಅಭ್ಯರ್ಥಿಗಳೂ ಅರ್ಜಿ ಸಲ್ಲಿಸಲು ಅವಕಾಶವಿದೆ.

ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 2016ರ ಆಗಸ್ಟ್ 1ಕ್ಕೆ 18 ವರ್ಷ ಮತ್ತು ಗರಿಷ್ಠ ವಯೋಮಿತಿ 30 ವರ್ಷ. ಮೀಸಲಾತಿ ವ್ಯಾಪ್ತಿಗೆ ಒಳಪಡುವ ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳು, ಎಸ್ಸಿ ಮತ್ತು ಎಸ್ಟಿ ಅಭ್ಯರ್ಥಿಗಳಿಗೆ ಸರ್ಕಾರಿ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ.

ಅರ್ಜಿ ಶುಲ್ಕ: ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 1000 ರೂ. ಮತ್ತು ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 500 ರೂ. ಶುಲ್ಕ ನಿಗದಿಪಡಿಸಲಾಗಿದೆ. ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್ ಅಥವಾ ಇಂಟರ್ನೆಟ್ ಬ್ಯಾಂಕ್ ಮೂಲಕ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ: ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ

  • ಬಿಎಸ್ಎನ್ಎಲ್ ವೆಬ್ಸೈಟ್ಗೆ ಲಾಗಿನ್ ಆಗಿ
  • ರಿಕ್ರೂಟ್ಮೆಂಟ್ ವಿಭಾಗ ಕ್ಲಿಕ್ ಮಾಡಿ
  • ನೋಟಿಫಿಕೇಶನ್ ಓದಿ, ಅಪ್ಲೈ ಆನ್ಲೈನ್ ಲಿಂಕ್ ಕ್ಲಿಕ್ ಮಾಡಿ
  • ಅಪ್ಲಿಕೇಶನ್ ನೋಡಿ, ಭರ್ತಿ ಮಾಡಿದ ಬಳಿಕ, ಅಗತ್ಯವಿರುವ ದಾಖಲೆಗಳನ್ನು ಅಟ್ಯಾಚ್ ಮಾಡಿ ಸಬ್ಮೀಟ್ ಮಾಡಿ.

ಅರ್ಜಿ ಸಲ್ಲಿಕೆ ಪ್ರಕ್ರಿಯೆ: 2017ರ ಜನವರಿ 1ರಿಂದ ಜನವರಿ 31

ಸೂಚನೆ: 2017ರ ‘ಗೇಟ್’ ಪರೀಕ್ಷೆಯಲ್ಲಿ ಅಭ್ಯರ್ಥಿಗಳ ಸಾಧನೆಯನ್ನು ಆಧರಿಸಿ ಅಭ್ಯರ್ಥಿಗಳನ್ನು ನೇಮಕ ಮಾಡಲಾಗುತ್ತದೆ.