ದಿಢೀರ್ ನಾಪತ್ತೆಯಾಗಿರುವ ಮಾಜಿ ಸಿಎಂ ಎಸ್ ಎಂ ಕೃಷ್ಣ ಅಳಿಯ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಬರೆದ ಪತ್ರದಲ್ಲಿದೇ ರೋಚಕ ವಿಷಯ.!!

0
383

ಖ್ಯಾತ ಉದ್ಯಮಿ ಮಾಜಿ ಮುಖ್ಯಮಂತ್ರಿ, ಎಸ್‌.ಎಂ.ಕೃಷ್ಣ ಅವರ ಅಳಿಯ ವಿ.ಜಿ.ಸಿದ್ಧಾರ್ಥ ಅವರು ದಿಢೀರ್‌ ನಾಪತ್ತೆಯಾಗಿದ್ದು, ಇಡಿ ದೇಶದಲ್ಲೇ ಚರ್ಚೆಯಾಗುತ್ತಿದ್ದು, ಹಲವಾರು ಅನುಮಾನಗಳನ್ನು ಹುತ್ತಿಹಾಕಿದೆ. ಸಿದ್ಧಾರ್ಥ್ ನಿನ್ನೆ ಸಂಜೆ ಚಿಕ್ಕಮಗಳೂರಿಗೆ ತೆರಳಿದ್ದರು. ಉದ್ಯಮಕ್ಕೆ ಸಂಬಂಧಿಸಿದ ಕೆಲಸ ಎಂದು ಹೇಳಿ ಡ್ರೈವರ್ ಬಸವರಾಜು ಜೊತೆ ಸಿದ್ಧಾರ್ಥ್​ ಮಂಗಳೂರಿಗೆ ತೆರಳುತ್ತಿದ್ದರು. ಕಾರಿನಲ್ಲಿ ತೆರಳುವಾಗ ಸಿದ್ಧಾರ್ಥ್​ ಮೊಬೈಲ್​ನಲ್ಲಿ ಮಾತನಾಡುತ್ತಲೇ ಇದ್ದರಂತೆ. ಮಂಗಳೂರಿನ ಉಳ್ಳಾಲ ಸಮೀಪ ಇರುವ ಒಂದು ಕಿ.ಮೀ ಉದ್ದದ ಬ್ರಿಡ್ಜ್​ ಮೇಲೆ ಅವರು ಇಳಿದಿದ್ದರು. ಮತ್ತೆ ವಾಪಸ್ ಬರಲೇ ಇಲ್ಲ ಎಂದು ಅವರ ಡ್ರೈವರ್ ತಿಳಿಸಿದ್ದಾರೆ.

ಸದ್ಯ ಈ ವಿಚಾರ ಸಾಕಷ್ಟು ಊಹಾಪೋಹಗಳಿಗೆ ಕಾರಣವಾಗಿದೆ. ಅಳಿಯ ಸಿದ್ಧಾರ್ಥ್ ನಾಪತ್ತೆ ಬೆನ್ನಲ್ಲೆ ಎಸ್.ಎಂ ಕೃಷ್ಣ ಸಾಕಷ್ಟು ಆತಂಕಗೊಂಡಿದ್ದಾರೆ. ನಿನ್ನೆ ರಾತ್ರಿಯಿಂದ ಮಂಗಳೂರಿನ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಸ್ಥಳೀಯ ಶಾಸಕರ ಜೊತೆ ಕೃಷ್ಣ ನಿರಂತರ ಸಂಪರ್ಕದಲ್ಲಿದ್ದಾರೆ. ಈ ಬಗ್ಗೆ ಅವರು ಕ್ಷಣ ಕ್ಷಣದ ಮಾಹಿತಿ ಪಡೆಯುತ್ತಿದ್ದಾರೆ. ಸಿದ್ಧಾರ್ಥ್​ ಕಾಣೆಯಾದ ಮಾಹಿತಿ ಸಿಗುತ್ತಿದ್ದಂತೆ, ಎಲ್ಲ ಕಡೆಗಳಲ್ಲಿ ಅವರಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಅವರು ಆಯ ತಪ್ಪಿ ನದಿಗೆ ಬಿದ್ದಿರುವ ಶಂಕೆ ಕೂಡ ಇದ್ದು, ನದಿಯಲ್ಲೂ ಮುಳುಗು ತಜ್ಞರು ಶೋಧ ಆರಂಭಿಸಿದ್ದಾರೆ. ಆದರೆ ಎರಡು ದಿನಗಳ ಹಿಂದೆ ತಾನೇ ಸಿದ್ಧಾರ್ಥ್ ಪತ್ರಯೊಂದನ್ನು ಬೇರೆದಿದ್ದರು, ಆ ಪತ್ರದಲ್ಲಿ.

ಸಿದ್ಧಾರ್ಥ ಪತ್ರದಲ್ಲಿ ಏನಿದೆ?

ನಾನು ಕಳೆದ 37 ವರ್ಷದಲ್ಲಿ ಕಠಿಣ ಪರಿಶ್ರಮದಿಂದ ಕೆಲಸ ಮಾಡಿದ್ದೇನೆ. ಕಾಫಿ ಡೇ ಮೂಲಕ 30 ಸಾವಿರ ಜನರಿಗೆ ಕೆಲಸ ಕೊಟ್ಟಿದ್ದೇನೆ. ಅಷ್ಟೇ ಅಲ್ಲದೆ ನನ್ನ ಐಟಿ ಕಂಪನಿ ಮೂಲಕ 20 ಸಾವಿರ ಜನರಿಗೆ ಕೆಲಸ ಕೊಟ್ಟಿದ್ದೇನೆ. ಆದರೆ ನನ್ನ ಪರಿಶ್ರಮದ ಹೊರತಾಗಿಯೂ ಆ ಎರಡೂ ಕಂಪನಿಗಳು ಲಾಭದಲ್ಲಿ ನಡೆಯಲಿಲ್ಲ. ನನಗೆ ಅನೇಕ ಕಡೆಯಿಂದ ಒತ್ತಡ ಹೆಚ್ಚಾಗಿದ್ದು, ಅದನ್ನು ಸಹಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಬರೆದಿದ್ದಾರೆ. ಕಂಪನಿಯಲ್ಲಿ ಷೇರ್ ಹೂಡಿದ್ದ ಖಾಸಗಿ ಪಾಟ್ನರ್ ಗಳು ತಮ್ಮ ಷೇರನ್ನು ವಾಪಸ್ ಕೊಡುವಂತೆ ಒತ್ತಾಯ ಹಾಕುತ್ತಿದ್ದಾರೆ. ಸ್ನೇಹಿತರೊಬ್ಬರ ಬಳಿ ನಾನು ದೊಡ್ಡ ಮಟ್ಟದಲ್ಲಿ ಸಾಲ ಮಾಡಿದ್ದೇನೆ. ಇತರೆ ಸಾಲಗಾರರ ಒತ್ತಡದಿಂದ ಇಂದು ನನಗೆ ಈ ಪರಿಸ್ಥಿತಿ ಬಂದಿದೆ. 6 ತಿಂಗಳ ಹಿಂದೆಯಷ್ಟೇ ಅಪಾರ ಪ್ರಮಾಣದಲ್ಲಿ ಸಾಲ ಪಡೆದಿದ್ದೇನೆ. ಸಾಲಗಾರರು ತುಂಬಾ ಕಿರುಕುಳ ಕೊಡುತ್ತಿದ್ದಾರೆ.

ಇನ್ನೊಂದೆಡೆ ಆದಾಯ ತೆರಿಗೆ ಇಲಾಖೆ ಅವರು ಕಿರುಕುಳ ನೀಡುತ್ತಿದ್ದಾರೆ. ಪತ್ರದಲ್ಲಿ ಈ ಹಿಂದಿನ ಐಟಿಯ ಡಿಜಿ ವಿರುದ್ಧ ನೇರವಾಗಿ ಆರೋಪ ಮಾಡಿದ್ದಾರೆ. ಎರಡು ಬಾರಿ ನನ್ನ ಕಂಪನಿಯ ಷೇರುಗಳನ್ನು ಜಪ್ತಿ ಮಾಡಿದ್ದರು. ಈ ಮೂಲಕ ಮೈಂಡ್ ಟ್ರೀ ಮಾರಾಟದ ಡೀಲ್‍ಗೆ ಅಡ್ಡಿಯಾದರು. ಅದಾದ ಬಳಿಕ ಕಾಫಿ ಡೇ ಷೇರಿಗೂ ಐಟಿ ಕಣ್ಣು ಹಾಕಿತ್ತು. ನನಗೆ ಖಾಸಗಿ ಕಂಪನಿ ಕಿರುಕುಳ ನೀಡುತ್ತಿದೆ. ನಾನು ಸಾಕಷ್ಟು ಹೋರಾಟ ಮಾಡಿದೆ. ಆದರೆ ಅವರ ಕಿರುಕುಳವನ್ನು ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ತಮ್ಮ ನೋವನ್ನು ಹಂಚಿಕೊಂಡಿದ್ದಾರೆ. ನಾನು ಮೋಸ ಹೋದೆ. ನಮಗೆ ಕೆಲವರು ನಂಬಿಕೆ ದ್ರೋಹ ಮಾಡಿದ್ದಾರೆ. ನಾನು ಸಿಬ್ಬಂದಿಯ ನಂಬಿಕೆ ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ. ಷೇರುಗಳನ್ನು ಮಾರಾಟ ಮಾಡಲು ಅವಕಾಶ ಮಾಡಿಕೊಟ್ಟಿಲ್ಲ. ಇದರಿಂದ ನಾನು ಖಾಸಗಿಯಿಂದ ಸಾಲ ತೆಗೆದುಕೊಂಡಿದ್ದೆ. ನಾನು ಯಾರಿಗೂ ಮೋಸ ಮಾಡಬೇಕೆಂದು ಈ ಪತ್ರ ಬರೆಯುತ್ತಿಲ್ಲ. ಓರ್ವ ಉದ್ದಿಮೆದಾರನಾಗಿ ನಾನು ಸೋತಿದ್ದೇನೆ ಎಂದಿದ್ದಾರೆ.