ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ 357 ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

0
138

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) 357 ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಮೂಲಕ ಡಿಸೆಂಬರ್ 16,2019ರೊಳಗೆ ಅರ್ಜಿ ಸಲ್ಲಿಸಬೇಕು.

Also read: ಕೇಂದ್ರ ಸಶಸ್ತ್ರ ಭದ್ರತಾ ಪಡೆ 300 ಹೆಡ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಗಳ ಹೆಸರು (Name Of The Posts): ಅಸಿಸ್ಟೆಂಟ್ ಸೆಕ್ರೆಟರಿ, ಅನಾಲಿಸ್ಟ್, ಜ್ಯೂನಿಯರ್ ಹಿಂದಿ ಟ್ರಾನ್ಸ್‌ಲೇಟರ್, ಸೀನಿಯರ್ ಅಸಿಸ್ಟೆಂಟ್, ಸ್ಟೆನೋಗ್ರಾಫರ್, ಅಕೌಂಟೆಂಟ್, ಜ್ಯೂನಿಯರ್ ಅಸಿಸ್ಟೆಂಟ್, ಜ್ಯೂನಿಯರ್ ಅಕೌಂಟೆಂಟ್

ಸಂಸ್ಥೆ (Organisation): ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ)

ವಿದ್ಯಾರ್ಹತೆ (Educational Qualification): ಪದವಿ, ಬಿ.ಇ/ಬಿ.ಟೆಕ್ / ಎಂ.ಎಸ್ಸಿ ಎಂಸಿಎ, ಸ್ನಾತಕೋತ್ತರ ಪದವಿ,12ನೇ ತರಗತಿ/ದ್ವಿತೀಯ ಪಿಯುಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಉದ್ಯೋಗ ಸ್ಥಳ (Job Location): ಭಾರತದೆಲ್ಲೆಡೆ

ವಯೋಮಿತಿ: ಹುದ್ದೆಗಳಿಗನುಸಾರ ಕನಿಷ್ಟ 18 ರಿಂದ ಗರಿಷ್ಟ 27,30,35 ಮತ್ತು 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಸಾಮಾನ್ಯ / ಓಬಿಸಿ /ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು ಗ್ರೂಪ್-ಎ ಹುದ್ದೆಗಳಿಗೆ 1500/-ರೂ ಮತ್ತು ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ 800/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಅಂಗವಿಕಲ/ ಮಾಜಿ ಸೈನಿಕ/ಮಹಿಳಾ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ)ಯ ಅಧಿಕೃತ ವೆಬ್‌ಸೈಟ್‌ http://cbse.nic.in/newsite/index.html ಗೆ ಭೇಟಿ ನೀಡಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 16,2019ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ: http://cbse.nic.in/newsite/index.html ಕ್ಲಿಕ್ ಮಾಡಿ.