ಸೆಂಟ್ರಲ್ ಕೋಲ್​ಫೀಲ್ಡ್​ ಲಿಮಿಟೆಡ್​ನ ಹಲವಾರು ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

0
280

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ರಾಂಚಿಯ ಸೆಂಟ್ರಲ್ ಕೋಲ್​ಫೀಲ್ಡ್​ ಲಿಮಿಟೆಡ್​ನ 750 ಅಪ್ರೆಂಟಿಸ್​ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 15, 2019 ರೊಳಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು.

Also read: ಕರೂರ್ ವೈಶ್ಯ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ವಿದ್ಯಾರ್ಹತೆ:

ಫಿಟ್ಟರ್‌: ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ 10 ನೇ ಪಾಸ್ ಆಗಿರಬೇಕು. ಹಾಗೆಯೇ ಫಿಟ್ಟರ್ ವಿಭಾಗದಲ್ಲಿ ಐಟಿಐ ಡಿಪ್ಲೊಮಾ ಮಾಡಿರಬೇಕು.

ವೆಲ್ಡರ್: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಹತ್ತನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ವೆಲ್ಡರ್ ವಿಭಾಗದಲ್ಲಿ ಐಟಿಐ ಡಿಪ್ಲೊಮಾ ಪ್ರಮಾಣ ಪತ್ರ ಹೊಂದಿರಬೇಕು.

ಎಲೆಕ್ಟ್ರೀಷಿಯನ್: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿ 10 ನೇ ಪಾಸ್ ಆಗಿರಬೇಕು . ಹಾಗೆಯೇ ಐಟಿಐ ಪ್ರಮಾಣಪತ್ರ ಹೊಂದಿರಬೇಕು.

ಮೆಕ್ಯಾನಿಕ್: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿ ಮೆಕ್ಯಾನಿಕ್ ಅರ್ಥ್ ಮೂವಿಂಗ್ ಮೆಷಿನರಿ / ಮೆಕ್ಯಾನಿಕ್ ಮೋಟಾರ್ ವೆಹಿಕಲ್ / ಹೆವಿ ವೆಹಿಕಲ್ / ಡೀಸೆಲ್ ಮೆಕ್ಯಾನಿಕ್ / ಮೈನಿಂಗ್ ಮೆಷಿನರಿಗಳ ನಿರ್ವಹಣೆ ಮತ್ತು ದುರಸ್ತಿ / ಆಟೋಮೊಬೈಲ್ ಮೆಕ್ಯಾನಿಕ್ / ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ ಟ್ರೇಡ್​ನಲ್ಲಿ ಐಟಿಐ ಮಾಡಿರಬೇಕು.

ವಯೋಮಿತಿ: ಈ ಎಲ್ಲ ಹುದ್ದೆಗಳಿಗೆ 18 ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಎಸ್‌ಸಿ / ಎಸ್‌ಟಿಗೆ 5 ವರ್ಷ, ಒಬಿಸಿಗೆ ಮೂರು ವರ್ಷ ವಯಸ್ಸಿನ ವಯೋಮಿತಿ ವಿನಾಯಿತಿ ನೀಡಲಾಗಿದೆ.

ಶುಲ್ಕ ಮತ್ತು ಆಯ್ಕೆ: ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ವಿಧಿಸಲಾಗುವುದಿಲ್ಲ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ / ಕೌಶಲ್ಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಕೆಯ ವಿಧಾನ: ಸೆಂಟ್ರಲ್ ಕೋಲ್​ಫೀಲ್ಡ್​ ಲಿಮಿಟೆಡ್​ನ ಅಧಿಕೃತ ವೆಬ್​ಸೈಟ್​ www.centralcoalfields.in ಗೆ ಭೇಟಿ ನೀಡಿ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ: www.centralcoalfields.in ಕ್ಲಿಕ್ ಮಾಡಿ.