ರಾಜ್ಯ ಸರ್ಕಾರದ ವರದಿಯಲ್ಲಿ ನಷ್ಟದ ಪ್ರಮಾಣವನ್ನು ಬೇಕಾಬಿಟ್ಟಿ ಹೆಚ್ಚಿಸಲಾಗಿದೆ ಎಂದ ಕೇಂದ್ರ ಸರ್ಕಾರ; ಸರ್ಕಾರದ ಮೋದಿ ಸರ್ಕಾರಕ್ಕೆ ರಾಜ್ಯದ ಮೇಲೆ ನಂಬಿಕೆ ಇಲ್ವಾ??

0
170

ರಾಜ್ಯದ ಪ್ರವಾಹಕ್ಕೆ ಕೇಂದ್ರ ಸರ್ಕಾರ ಪರಿಹಾರ ನೀಡುತ್ತಿಲ್ಲ ಎನ್ನುವ ಕೂಗು ಎಲ್ಲೆಡೆ ಕೇಳಿ ಬರುತ್ತಿತ್ತು, ನಿನ್ನೆ ಕೂಡ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಲ್ಲಿಸಿದ ವರದಿಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದ್ದು, ನೆರೆ ಪರಿಹಾರ ನೀಡುವಲ್ಲಿ ಕ್ಯಾತೆ ತೆಗೆದಿದೆ ಎನ್ನಲಾಗಿದ್ದು, ಪ್ರವಾಹದಿಂದ ಉಂಟಾಗಿರುವ ನಷ್ಟಕ್ಕೆ ಪರಿಹಾರ ಕೋರಿ ಸಲ್ಲಿಸಲಾಗಿದ್ದ ಪ್ರಸ್ತಾವನೆಯನ್ನು ಶುಕ್ರವಾರ ತಿರಸ್ಕರಿಸಿದೆ. ಪ್ರವಾಹ ಪರಿಹಾರ ಕುರಿತು ರಾಜ್ಯದ ಬಳಿ ಕೆಲ ಸ್ಪಷ್ಟನೆ ಕೇಳಿರುವ ಕೇಂದ್ರ ಸರ್ಕಾರ, ನಷ್ಟದ ಪ್ರಮಾಣವನ್ನು ಅಧಿಕೃತವಾಗಿ ಪ್ರಮಾಣೀಕರಿಸುವಂತೆ ಸೂಚನೆ ನೀಡಿದೆ.

Also read: ಅಪಘಾತದಲ್ಲಿ ಮೇಕೆಯೊಂದು ಸತ್ತಿದ್ದಕ್ಕೆ ಕಂಪನಿಯೊಂದಕ್ಕೆ 2.68 ಕೋಟಿ ರೂ. ನಷ್ಟ ಉಂಟಾಗಿದೆ, ಮೇಕೆಗೂ ಕಂಪನಿಗೂ ಏನು ಸಂಬಂಧ??

ರಾಜ್ಯ ಸರ್ಕಾರದ ಮೇಲೆ ಕೇಂದ್ರ ನಂಬಿಕೆ ಇಲ್ವಾ?

ಹೌದು ರಾಜ್ಯ ಸರ್ಕಾರ ನೆರೆ ಸ್ಥಳಗಳಿಗೆ ಭೇಟಿ ನೀಡಿ ಸಮೀಕ್ಷೆ ನಡೆಸಿ ವರದಿಯನ್ನು ಸಿದ್ಧಪಡಿಸಿತ್ತು. ಇತ್ತ ಕೇಂದ್ರ ನೇಮಕ ಮಾಡಿದ್ದ ಅಧಿಕಾರಿಗಳು ಸಹ ಸಮೀಕ್ಷೆ ನಡೆಸಿ ವರದಿಯನ್ನು ಸಿದ್ಧಪಡಿಸಿಕೊಂಡಿದ್ದರು. ಇದೀಗ ರಾಜ್ಯ ನೀಡಿದ ವರದಿಯಲ್ಲಿ ಅಂಕಿ ಅಂಶಗಳು ತಪ್ಪಾಗಿದೆ. ಪ್ರಮಾಣೀಕರಿಸಿ ಮತ್ತೊಮ್ಮೆ ಹೊಸ ವರದಿ ನೀಡಿ ಎಂದು ಕಂದಾಯ ಇಲಾಖೆ ಕಾರ್ಯದರ್ಶಿ ಅನಿಲ್ ಕುಮಾರ್‍ಗೆ ಕೇಂದ್ರ ಗೃಹ ಸಚಿವಾಲಯದ ಅಧಿಕಾರಿಗಳು ಸಂದೇಶ ರವಾನಿಸಿದ್ದಾರೆ. ಈಗ ಮತ್ತೊಮ್ಮೆ ವರದಿ ನೀಡಲು ಇನ್ನೆಷ್ಟು ದಿನ ಬೇಕಾಗುತ್ತದೆ ಎಂಬ ಪ್ರಶ್ನೆಯೊಂದು ಪ್ರವಾಹ ಸಂತ್ರಸ್ತರಲ್ಲಿ ಮೂಡಿದೆ. ತಮ್ಮದೇ ಬಿಜೆಪಿ ಸರ್ಕಾರ ನೀಡಿದ ವರದಿಯನ್ನು ಕೇಂದ್ರ ತಿರಸ್ಕರಿಸಿದ್ದು ಯಾಕೆ? ರಾಜ್ಯ ಸರ್ಕಾರದ ನೀಡಿದ ವರದಿಯ ಮೇಲೆ ಕೇಂದ್ರಕ್ಕೆ ನಂಬಿಕೆ ಇಲ್ವಾ? ರಾಜ್ಯ ಸರ್ಕಾರ ಪರಿಹಾರದ ವರದಿಯನ್ನು ಸಿದ್ಧಪಡಿಸಲು ವಿಫಲವಾಯ್ತಾ ಎಂಬಿತ್ಯಾದಿ ಪ್ರಶ್ನೆಗಳಿಗೆ ಉತ್ತರ ಸಿಗಬೇಕಿದೆ.

Also read: ಗಾಂಧೀಯವರ 150ನೇ ಜನ್ಮಶತಮಾನೋತ್ಸವದ ಸ್ಮರಣಾರ್ಥ ರೂ.150 ಹೊಸ ನಾಣ್ಯ ಬಿಡುಗಡೆ.!

ರಾಜ್ಯ ವರದಿಯಲ್ಲಿರುವಷ್ಟು ಮನೆಗಳು ಬಿದಿಲ್ಲ?

ಈ ಹಿಂದೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದ ರಾಜ್ಯ ಸರ್ಕಾರ, ಪ್ರವಾಹದಿಂದಾದಿ ಅಂದಾಜು ರೂ.38,000 ಕೋಟಿಗೂ ಅಧಿಕ ಪ್ರಮಾಣದ ನಷ್ಟ ಉಂಟಾಗಿದೆ. ರಾಷ್ಟ್ರೀಯ ನೈಸರ್ಗಿಕ ವಿಪತ್ತು ಪರಿಹಾರ ನಿಯಮಾವಳಿ ಪ್ರಕಾರ ರೂ.3,500 ಕೋಟಿ ಪರಿಹಾರದ ನೆರವು ನೀಡಬೇಕೆಂದು ಪ್ರಸ್ತಾವನೆಯಲ್ಲಿ ತಿಳಿಸಿತ್ತು. ರಾಜ್ಯದ ಪ್ರಸ್ತಾವನೆ ಹಿನ್ನಲೆಯಲ್ಲಿ ಕೇಂದ್ರದ ತಂಡ ರಾಜ್ಯಕ್ಕೆ ಭೇಟಿ ನೀಡಿ ಅಧ್ಯಯನ ನಡೆಸಿ, ಕೇಂದ್ರಕ್ಕೆ ವರದಿ ಸಲ್ಲಿಸಿದೆ. ಇದೀಗ ಪರಿಹಾರ ನೀಡಲು ಕ್ಯಾತೆ ತೆಗೆದಿರುವ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಸಲ್ಲಿಸಿರುವ ವರದಿಗೂ ಕೇಂದ್ರ ತಂಡ ಅಧ್ಯಯನ ನಡೆಸಿರುವ ವರದಿಗೂ ತಾಳೆಯಾಗುತ್ತಿಲ್ಲ. ಕೂಡಲೇ ಈ ಕುರಿತು ಸ್ಪಷ್ಟೀಕರಣ ನೀಡಬೇಕೆಂದು ಸೂಚಿಸಿದೆ.

Also read: 2020 ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ; ಎಂದಿನಿಂದ ಪರೀಕ್ಷೆ ಇಲ್ಲಿದೆ ನೋಡಿ.!

ನಿಯಮಾವಳಿಗಳನ್ನು ಗಾಳಿಗೆ ತೂರಿ ನಷ್ಟವನ್ನು ಅಂದಾಜಿಸಲಾಗಿದೆ. ನಷ್ಟದ ಪ್ರಮಾಣವನ್ನು ಬೇಕಾಬಿಟ್ಟಿ ಹೆಚ್ಚಿಸಲಾಗಿದೆ. ಈ ಬಗ್ಗೆ ಸ್ಪಷ್ಟ ಮಾಹಿತಿ ನೀಡಿ ಎಂದು ಕೇಂದ್ರ ಗೃಹ ಇಲಾಖೆ ರಾಜ್ಯಕ್ಕೆ ಸೂಚನೆ ನೀಡಿದೆ. ನಿಮ್ಮ ಪ್ರಸ್ತಾವನೆಯಲ್ಲಿ ಒಟ್ಟು 2.50 ಲಕ್ಷ ಮನೆಗಳು ಸಂಪೂರ್ಣ ನೆಲಕಚ್ಚಿವೆ ಎಂಬ ವಿವರಗಳಿವೆ. ಆದರೆ, ಕೇಂದ್ರದ ಅಧ್ಯಯನ ತಂಡ ಸಲ್ಲಿಸಿರುವ ವರದಿಯ ಪ್ರಕಾರ ಈ ಪ್ರಮಾಣ ಕೇವಲ 1.15 ಲಕ್ಷ ಇವೆ. ಪ್ರತಿ ಮನೆಗೆ ರೂ.5 ಲಕ್ಷದಂತೆ ಪರಿಹಾರ ಕೋರಲಾಗಿದೆ. ನೆಲಕಚ್ಚಿದ ಮನೆಗಳೆಲ್ಲಾ ರೂ.5 ಲಕ್ಷ ಬೆಲೆ ಬಾಳುತ್ತಿದ್ದವೇ ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿರುವ ಕೇಂದ್ರ, ಈ ಬಗ್ಗೆ ಪ್ರಮಾಣೀಕರಿಸುವಂತೆ ಸೂಚಿಸಿದೆ. ಇದರಿಂದ ಎಲ್ಲಡೆ ಅಕ್ರೋಶ ವ್ಯಕ್ತವಾಗಿದ್ದು ಕೇಂದ್ರ ಪ್ರಕಾರ ಅರ್ಧ ಬಿದ್ದ ಮನೆಗೆ ಅರ್ಧ ಪರಿಹಾರ ಕೊಡುತ್ತೆ ಅನಿಸುತ್ತೆ ಎನ್ನುವ ಮಾತುಗಳು ಕೇಳಿಬರುತ್ತಿವೆ.