ಮೋದಿ ಬಜೆಟ್-ನಲ್ಲಿ ಬೆಂಗಳೂರಿಗೆ ಭಾರಿ ಗಿಫ್ಟ್; ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಬೀಳಲಿದೆ ಬ್ರೇಕ್!!!

1
569

ಬೆಂಗಳೂರಿಗರ ಬಹುದಿನಗಳ ಕನಸನ್ನು ಪ್ರಧಾನಿ ನರೇಂದ್ರ ಮೋದಿಯವರು ನೇತೃತ್ವದ ಕೇಂದ್ರ ಸರ್ಕಾರ ಇಂದು ಈಡೇರಿಸಿದೆ. ಇಂದು ಕೇಂದ್ರ ಬಜೆಟ್ ಮಂಡಿಸಿದ ಮಿತ್ತ ಸಚಿವ ಅರುಣ್ ಜೇಟ್ಲಿ ಅವರು ಉದ್ಯಾನ ನಗರಿಗೆ ಸಬ್ ಅರ್ಬನ್ ರೈಲು ಸೇವೆ ಒದಗಿಸಲು ಎಲ್ಲ ವ್ಯವಸ್ಥೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

ಹೌದು, ನೀವು ಕೀಳುತ್ತಿರುವುದು ನಿಜ ಸಿಲಿಕಾನ್ ಸಿಟಿ ಬೆಂಗಳೂರಿಗೆ ಮತ್ತೊಂದು ಗರಿ ಸಿಕ್ಕಿದೆ ಅದುವೇ ಸಬ್ ಅರ್ಬನ್ ರೈಲು ಸೇವೆ. ಇಂದು ಮಂಡಿಸಿದ ಬಜೆಟ್-ನಲ್ಲಿ, ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆಗೆ 17 ಸಾವಿರ ಕೋಟಿ ರೂ. ನೀಡಲಾಗುತ್ತಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ.

ಈ ಯೋಜನೆಯಿಂದ ಏನು ಲಾಭವಾಗಲಿದೆ ಅಂತೀರಾ? ಈ ಯೋಜನೆ ಪೂರ್ಣಗೊಂಡ ನಂತರ ಬೆಂಗಳೂರು ಮತ್ತು ನಗರದ ಸುತ್ತ-ಮುತ್ತಲಿನ ಉಪನಗರಗಳಿಗೆ ಸ್ಥಿರ ರೈಲು ಸಂಪರ್ಕ ಸಿಗಲಿದೆ, ಇದರಿಂದ ಟ್ರಾಫಿಕ್ ಸಮಸ್ಯೆಯಿಂದ ಬಳಲುತ್ತಿರುವ ಜನರಿಗೆ ಕೊಂಚ ರಿಲೀಫ್ ಸಿಗಲಿದೆ. ಅಲ್ಲದೆ, ಈ ರೈಲಿನಿಂದ ನಿತ್ಯ ನಗರಕ್ಕೆ ಬರುವ ಹೋಗುವವರಿಗೆ ಸೂಕ್ತ ಸಂಪರ್ಕ ವ್ಯವಸ್ಥೆ ಸಿಗಲಿದೆ.

ಈ ಯೋಜನೆಯ ಪ್ರಕಾರ ರಾಮನಗರ-ಬೆಂಗಳೂರು, ಬೆಂಗಳೂರು-ಮಂಡ್ಯ, ಕೇಂದ್ರ ರೈಲ್ವೇ ನಿಲ್ದಾಣ-ಯಶವಂತಪುರ, ಯಶವಂತಪುರ- ತುಮಕೂರು, ಯಲಹಂಕ-ಬೈಯಪ್ಪನಹಳ್ಳಿ, ಯಲಹಂಕ-ದೊಡ್ಡಬಳ್ಳಾಪುರ, ಯಲಹಂಕ-ಚಿಕ್ಕಬಳ್ಳಾಪುರ ನಡುವೆ ಬೆಂಗಳೂರು ಸಬ್ ಅರ್ಬನ್ ರೈಲು ಸೇವೆ ಒದಗಿಸಲಿದೆ.

ರಾಜಧಾನಿಯಲ್ಲಿ ಟ್ರಾಫಿಕ್ ಸಮಸ್ಯೆಯನ್ನು ಕಡಿಮೆ ಮಾಡಲು ಮತ್ತು ವಿಮಾನ ನಿಲ್ದಾಣಕ್ಕೆ ನೇರಸಂಪರ್ಕ ಕಲ್ಪಿಸುವ ಉದ್ದೇಶದಿಂದ ಬೆಂಗಳೂರಿಗೆ ಸಬ್ ಅರ್ಬನ್ ರೈಲು ಬರಬೇಕು ಎಂಬ ಪ್ರಸ್ತಾಪವನ್ನ 1996 ರಿಂದಲೇ ಈಗ ಕೇಂದ್ರ ಸಚಿವರಾಗಿರುವ ಅನಂತ್ ಕುಮಾರ್ ಅವರು ಸರ್ಕಾರಗಳನ್ನು ಒತ್ತಾಯ ಮಾಡುತ್ತಲೇ ಬಂದಿದ್ದರು. ಈಗ ಕೇಂದ್ರದಲ್ಲಿ ಅವರ ಬಿಜೆಪಿ ಪಕ್ಷದ ಸರ್ಕಾರ ಇರುವುದರಿಂದ ಸರ್ಕಾರವನ್ನು ಒತ್ತಾಯಿಸಿ, ಈ ಯೋಜನೆಯನ್ನು ಜಾರಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.

ಒಟ್ಟಿನಲ್ಲಿ ಸಬ್ ಅರ್ಬನ್ ರೈಲು ಸೇವೆ ಆದಷ್ಟು ಬೇಗ ಆರಂಭವಾಗಿ ಟ್ರಾಫಿಕ್ ಸಮಸ್ಯೆಗೆ ಬ್ರೇಕ್ ನೀಡಲಿ ಎನ್ನವುದೇ ನಮ್ಮ ಆಶಯ…!!