ನಾಲ್ಕು ದಶಕದ ಹೋರಾಟಕ್ಕೆ ಜಯ; ಮಹದಾಯಿ ಕಳಸಾ ಬಂಡೂರಿ ಯೋಜನೆಗೆ ಕೇಂದ್ರ ಸರ್ಕಾರದಿಂದ ಕೊನೆಗೂ ಅಧಿಸೂಚನೆ, ರಾಜ್ಯಕ್ಕೆ ಏನೇನು ಸಿಕ್ಕಿದೆ?

0
123

ಉತ್ತರ ಕರ್ನಾಟಕದ ಬಹುದಿನದ ಬೇಡಿಕೆಯಾದ ಮಹದಾಯಿ ವಿಚಾರಕ್ಕೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಹಲವು ವರ್ಷದಿಂದ ಹೋರಾಟಕ್ಕೆ ಇಳಿದ ಜನರಿಗೆ ಜಯ ಸಿಕ್ಕಿದೆ. ಅದರಂತೆ ಮಹದಾಯಿ ಕಳಸಾ ಬಂಡೂರಿ ಯೋಜನೆಗೆ ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಶನ್ ಹೊರಡಿಸಿದೇ ಇದರ ಅನ್ವಯ ಕರ್ನಾಟಕ ಮಹದಾಯಿ ನದಿಯಿಂದ 13.05 ಟಿಎಂಸಿ ನೀರು ಬಳಸಬಹುದಾಗಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಯಡಿಯೂರಪ್ಪ ಉತ್ತರ ಕರ್ನಾಟಕ ಭಾಗದ ಜನರ ಕನಸು ನನಸಾದ ಕ್ಷಣ. ಇನ್ನು ರಾಜ್ಯ ಸರಕಾರದ ಜವಾಬ್ದಾರಿ ಹೆಚ್ಚಿದ್ದು, ಕೂಡಲೇ ಈ ಯೋಜನೆ ಅನುಷ್ಠಾನಕ್ಕೆ ಬರುತ್ತೆ ಎಂದು ಹೇಳಿದ್ದಾರೆ.

ಹೌದು ಕುಡಿಯುವ ನೀರಿಗಾಗಿ ಹೋರಾಟ ಮಾಡುತ್ತಿದ್ದ ಉತ್ತರ ಕರ್ನಾಟಕ ಜನರ ಬೇಡಿಕೆ ತಣಿಸುವ ಕಾಲ ಬಂದಿದೆ. ಈ ಸಂಬಂಧ ಕೊನೆಗೂ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಇದರ ಅನ್ವಯ ಕರ್ನಾಟಕ ಮಹದಾಯಿ ನದಿಯಿಂದ 13.05 ಟಿಎಂಸಿ ನೀರು ಬಳಸಬಹುದಾಗಿದೆ. ಕೇಂದ್ರದ ನಿರ್ಧಾರದಿಂದ ಉತ್ತರ ಕರ್ನಾಟಕ ಭಾಗಕ್ಕೆ ಅದರಲ್ಲೂ ಮಹದಾಯಿ ಅಚ್ಚುಕಟ್ಟು ವ್ಯಾಪ್ತಿಯ ಜನಕ್ಕೆ ಸಿಹಿ ಸುದ್ದಿ ಸಿಕ್ಕಂತಾಗಿದೆ. ಕೆಲ ದಿನಗಳ ಹಿಂದೆ ಮಹದಾಯಿ ನದಿ ನೀರು ಹಂಚಿಕೆ ಕುರಿತು ತೀರ್ಪು ಪ್ರಕಟವಾಗಿತ್ತು. ಈ ತೀರ್ಪಿನ ಅನ್ವಯ ಕೇಂದ್ರ ಸರ್ಕಾರ ಗೆಜೆಟ್ ಪ್ರಕಟಣೆ ಹೊರಡಿಸಿದೆ. ಮೊನ್ನೆಯಷ್ಟೇ ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್​ ಸೇಖಾವತ್​​​ರನ್ನು ಭೇಟಿ ಮಾಡಿದ್ದ ರಾಜ್ಯ ಬಿಜೆಪಿ ನಾಯಕರು ಅಧಿಸೂಚನೆ ಹೊರಡಿಸುವಂತೆ ಒತ್ತಡ ಹೇರಿದ್ದರು. ಇದರ ಬೆನ್ನಲ್ಲೇ ಮಹಾ ಹೋರಾಟಕ್ಕೆ ಕೇಂದ್ರ ಸರ್ಕಾರ ಮಣಿದಿದೆ.

ರಾಜ್ಯದಲ್ಲಿವೂ, ಕೇಂದ್ರದಲ್ಲಿ ಮುಖ್ಯವಾಗಿ ಗೋವಾದಲ್ಲಿ ಕೂಡ ಬಿಜೆಪಿ ಸರ್ಕಾರ ಅಧಿಕಾರದಲ್ಲಿರುವ ಕಾರಣ ರಾಜ್ಯದ ರೈತರಿಗೆ ಸಂತಸ ತಂದಿದೆ. ಈ ಮೂಲಕ ಮಾತನಾಡಿದ ಸಚಿವ ಶೆಟ್ಟರ್ ಅವರು, ಸುಮಾರು ದಿನಗಳ ಹೋರಾಟಕ್ಕೆ ಬಂದಿರುವ ಜಯವಾಗಿದೆ. ಎರಡು ದಿನದ ಹಿಂದೆ ರಾಜ್ಯ ಹಾಗೂ ಕೇಂದ್ರ ಸಚಿವರು ಕೂಡಿಕೊಂಡು ಕೇಂದ್ರ ನೀರಾವರಿ ಸಚಿವ ಶೇಕಾವತ್ ಅವರನ್ನು ಭೇಟಿಯಾಗಿ ಮಾತನಾಡಿದ್ದೆವು. ಅವರು ಕೂಡ ಭರವಸೆಯನ್ನು ನೀಡಿದ್ದರು. ಆ ಭರವಸೆಯಂತೆ ಅವರು ಒಂದೇ ದಿನದಲ್ಲಿ ಗೆಜೆಟ್ ನೋಟಿಫಿಕೇಶನ್ ಹೊರಡಿಸಿರುವುದು ಸ್ವಾಗತಾರ್ಹವಾಗಿದೆ ಎಂದರು. ಇದೇ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಹಾಗೂ ನೀರಾವರಿ ಸಚಿವ ಶೇಕಾವತ ಅವರಿಗೆ ಸಚಿವ ಶೆಟ್ಟರ್ ಅಭಿನಂದನೆ ಸಲ್ಲಿಸಿದರು.

ಅಧಿಸೂಚನೆ ರಾಜ್ಯಕ್ಕೆ ಏನೇನು ಸಿಕ್ಕಿದೆ?

– ಕೊತ್ತನಿ ಬಳಿ ಮಹದಾಯಿ ಜಲ ವಿದ್ಯುತ್‌ ಯೋಜನೆಗೆ 8.02 ಟಿಎಂಸಿ ನೀರು
– ಬಂಡೂರಿ ನಾಲಾಗೆ 2.18 ಟಿಎಂಸಿ ನೀರು
– ಕಳಸಾ ನಾಲಾಗೆ 1.72 ಟಿಎಂಸಿ ನೀರು
– ಕುಡಿಯುವ ನೀರು ಮತ್ತು ನೀರಾವರಿಗೆ 1.5 ಟಿಎಂಸಿ ನೀರು
– ಒಟ್ಟು ಕರ್ನಾಟಕದ ಪಾಲಿಗೆ 13.42 ಟಿಎಂಸಿ ನೀರು ಸಿಕ್ಕಿದೆ.

1 ಸಾವಿರ ಕೋಟಿ ರೂ. ಮೀಸಲು?

ಇದು ಉತ್ತರ ಕರ್ನಾಟಕ ಭಾಗದ ಜನರ ಕನಸು ನನಸಾದ ಕ್ಷಣ. ಇನ್ನು ರಾಜ್ಯ ಸರಕಾರದ ಜವಾಬ್ದಾರಿ ಹೆಚ್ಚಿದ್ದು, ಕೂಡಲೇ ಈ ಯೋಜನೆ ಅನುಷ್ಠಾನಕ್ಕೆ ಸಿಎಂ ಯಡಿಯೂರಪ್ಪ ಪ್ರಸಕ್ತ ಬಜೆಟ್‌ನಲ್ಲಿ 1 ಸಾವಿರ ಕೋಟಿ ರೂ. ಮೀಸಲಿಡಬೇಕು. ಎಂದು ಹೇಳಿದ್ದಾರೆ. ಇನ್ನ ಪ್ರಹ್ಲಾದ್​ ಜೋಷಿ ಟ್ವೀಟ್​ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ. ಬಹು ನಿರೀಕ್ಷಿತ ಮಹಾದಾಯಿ ನದಿ ನೀರಿನ ಹಂಚಿಕೆಯ ತೀರ್ಪನ್ನು ಕೇಂದ್ರ ಸರ್ಕಾರ ಗೆಜೆಟ್ ಪ್ರಕಟಣೆ ಹೊರಡಿಸಿದೆ. ಮೊನ್ನೆ ಕೇಂದ್ರ ಜಲ ಶಕ್ತಿ ಸಚಿವರನ್ನು ಭೇಟಿ ಮಾಡಿ ಇದರ ಬಗ್ಗೆಯೇ ಚರ್ಚಿಸಿದ್ದೆವು. ಕರ್ನಾಟಕದ ಮನವಿಗೆ ಸ್ಪಂದಿಸಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಜಲಸಂಪನ್ಮೂಲ ಸಚಿವರಿಗೆ ವಂದನೆಗಳು ಎಂದು ಟ್ವೀಟ್​ ಮಾಡಿದ್ದಾರೆ.

Also read: ಭಾರತ, ಅಮೆರಿಕ ಒಪ್ಪಂದಕ್ಕೆ ಇಡಿ ಜಗತ್ತೇ ಬೆರಗು; ಮೂರು ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ಮೋದಿ-ಟ್ರಂಪ್‌.!