ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಪ್ರೊಫೆಸರ್ ಮತ್ತು ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

0
167

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಪ್ರೊಫೆಸರ್ ಮತ್ತು ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 25,2019 ರ ಒಳಗೆ ಅರ್ಜಿ ಸಲ್ಲಿಸಬೇಕು.

Also read: ಭಾರತೀಯ ಆಹಾರ ನಿಗಮದಲ್ಲಿ 330 ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು: ಪ್ರೊಫೆಸರ್ ಮತ್ತು ಅಸೋಸಿಯೇಟ್ ಪ್ರೊಫೆಸರ್

ವಿದ್ಯಾರ್ಹತೆ: ಪ್ರೊಫೆಸರ್ ಮತ್ತು ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗೆ ಸಂಬಂಧಪಟ್ಟ ವಿಷಯದಲ್ಲಿ ಪಿ.ಹೆಚ್‌ಡಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಶೇ 50%ರಷ್ಟು ಅಂಕಗಳೊಂದಿಗೆ ಹೊಂದಿರಬೇಕು. ವೃತ್ತಿಯಲ್ಲಿ ಅನುಭವ ಪಡೆದ ಅಭ್ಯರ್ಥಿಗಳಿಗೆ ಹೆಚ್ಚು ಆದ್ಯತೆ ನೀಡಲಾಗುವುದು.

ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಗರಿಷ್ಟ 65 ವರ್ಷ ವಯೋಮಿತಿಯೊಳಗಿರಬೇಕು. ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ಓದಿ ತಿಳಿಯಬಹುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ /ಓಬಿಸಿ / ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 1,500/ – ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಪ್ರಮುಖ ದಿನಾಂಕ:

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಅಕ್ಟೋಬರ್ 1,2019
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್ 25,2019
ಅರ್ಜಿ ಪ್ರತಿಯನ್ನು ಕಚೇರಿಗೆ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 4,2019

ಅರ್ಜಿ ಸಲ್ಲಿಸುವ ವಿಧಾನ:

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್‌ https://www.cuk.ac.in/ ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಕ ಅಕ್ಟೋಬರ್ 25,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ: https://www.cuk.ac.in/ ಕ್ಲಿಕ್ ಮಾಡಿ.