ಚಾಮರಾಜನಗರ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
348

ಉದ್ಯೋಗ ನಿರೀಕ್ಷೆಯಲ್ಲಿರುವವರಿಗೆ ಸುವರ್ಣಾವಕಾಶ. ಚಾಮರಾಜನಗರ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳ ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಮಾರ್ಚ್ 27.2019ರ ಒಳಗೆ ಅರ್ಜಿ ಸಲ್ಲಿಸಬೇಕು.

Also read: SSLC ಪಾಸಾದ ಅಭ್ಯರ್ಥಿಗಳಿಗೆ ಭಾರತೀಯ ನೇವಿಯಲ್ಲಿ 554 ಟ್ರೇಡ್ಸ್‌ಮ್ಯಾನ್ ಮೇಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು: (Name Of The Posts): ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು

ಸಂಸ್ಥೆ (Organisation): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

ವಿದ್ಯಾರ್ಹತೆ (Educational Qualification): ಅಂಗನವಾಡಿ ಕಾರ್ಯಕರ್ತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು.
ಅಂಗನವಾಡಿ ಸಹಾಯಕಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 4ನೇ ತರಗತಿ ತೇರ್ಗಡೆಯಾಗಿದ್ದು, ಗರಿಷ್ಠ 9ನೇ ತರಗತಿ ತೇರ್ಗಡೆಯಾಗಿರಬೇಕು. ಇದರಲ್ಲಿ ಹೆಚ್ಚಿನ ವಿದ್ಯಾರ್ಹತೆಯುಳ್ಳವರನ್ನು ಆಯ್ಕೆ ಮಾಡಲಾಗುತ್ತದೆ.( 9ನೇ ತರಗತಿಗಿಂತ ಹೆಚ್ಚಿನ ವಿದ್ಯಾರ್ಹತೆಯನ್ನು ಪರಿಗಣಿಸುವುದಿಲ್ಲ)

ಉದ್ಯೋಗ ಸ್ಥಳ (Job Location): ಚಾಮರಾಜನಗರ ಜಿಲ್ಲೆ (ಕರ್ನಾಟಕ)

ವಯೋಮಿತಿ: ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ವಯೋಮಿತಿಯ ಒಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (Application End Date): March 27, 2019

ಆಯ್ಕೆ ಮಾಡುವ ಬಗ್ಗೆ: ಅಂಗನವಾಡಿ ಕಾರ್ಯಕರ್ತೆ ಹುದ್ದೆ ಖಾಲಿಯಿರುವ/ ಹೊಸ ಕೇಂದ್ರ ಪ್ರಾರಂಭಿಸುತ್ತಿರುವ ಗ್ರಾಮದಲ್ಲಿ ವಾಸಿಸುತ್ತಿರುವ ಸಹಾಯಕಿಯರಿದ್ದು, ಅವರು ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿದ್ದು, ಕನಿಷ್ಠ 3ವ‍ರ್ಷ ಸೇವೆ ಸಲ್ಲಿಸಿದ್ದು, 45 ವರ್ಷ ವಯೋಮಿತಿಯೊಳಗಿದ್ದು, ಆ ಅಂಗನವಾಡಿ ಕೇಂದ್ರದಿಂದ 3 ಕಿ.ಮೀ. ವ್ಯಾಪ್ತಿಯೊಳಗೆ ವಾಸಿಸುತ್ತಿರುವರಿಗೆ ಅವಕಾಶವಿರುತ್ತದೆ. ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳಿಗೆ ವಿಧವೆಯರು ಅರ್ಜಿ ಸಲ್ಲಿಸಿದಾಗ ಇತರೆ ಎಲ್ಲಾ ಸ್ವೀಕೃತ ಅರ್ಜಿಗಳನ್ನು ಪರಿಗಣಿಸದೆ ನೇರವಾಗಿ ವಿಧವೆಯರನ್ನೇ ಆಯ್ಕೆ ಮಾಡಲಾಗುತ್ತದೆ. ಆದರೆ ಎಸ್ ಎಸ್ ಎಲ್ ಸಿ ಉತ್ತೀರ್ಣ, ಸ್ಥಳೀಯರು ಮತ್ತು ವಯೋಮಿತಿಯೊಳಗಿರಬೇಕಾಗಿರುವುದು ಕಡ್ಡಾಯ.

ಅರ್ಜಿ ಸಲ್ಲಿಸಲು https://anganwadirecruit.kar.nic.in/ ಕ್ಲಿಕ್ ಮಾಡಿ.

ಹೆಚ್ಚಿನ ಮಾಹಿತಿಗಾಗಿ: https://anganwadirecruit.kar.nic.in/docs/7306980922.pdf ಕ್ಲಿಕ್ ಮಾಡಿ.