ಬಿಗ್ ಬ್ರೇಕಿಂಗ್; ಸಂಜೆಯೊಳಗೆ ರಾಜ್ಯದ ರೈತರ ಮೇಲೆ ದಾಖಲಾಗಿರುವ ಕೇಸ್‌ ವಾಪಾಸ್ ಪಡೆಯುವಂತೆ ಸಿಎಂ ಯಡಿಯೂರಪ್ಪ ಆದೇಶ.!

0
273

ರಾಜ್ಯ ಬಿಜೆಪಿ ಸರ್ಕಾರದಿಂದ ರೈತರಿಗೆ ಸಿಹಿ ಸುದ್ದಿ ತಿಳಿಸಿದ್ದು, ರಾಜ್ಯದ ಎಲ್ಲ ಭಾಗಗಳಲ್ಲಿ ರೈತರ ಮೇಲೆ ದಾಖಲಾಗಿರುವ ಕೇಸ್ ತಕ್ಷಣವೇ ಅಂದರೆ ಸಂಜೆ ಒಳಗೆ ಹಿಂಪಡೆಯಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ. ಮೊದಲೇ ಒಂದು ಕಡೆ ಮಳೆಯಾಗದೆ ಬರ ಇದೆ, ಮತ್ತೊಂದು ಕಡೆ ನೆರೆ ಹಾವಳಿ ಉಂಟಾಗಿ ರೈತರು ಸಂಕಷ್ಟದಲ್ಲಿದ್ದಾರೆ. ಇಂತಹ ಸಮಯದಲ್ಲಿ ಮೊಕದ್ದಮೆಗಳಿಗೆ ಅಲೆಯಲು ಅವರಿಗೆ ಹಣಕಾಸಿನ ತೊಂದರೆಯಾಗುತ್ತೆ ಎನ್ನುವ ಬೆನ್ನಲೆಯಲ್ಲಿ ಈ ಆದೇಶವನ್ನು ಹೊರಡಿಸಲಾಗಿದೆ.

ರೈತರ ಕೇಸ್ ಕುಲ್ಲಾ?

ಹೌದು ಗೃಹ ಕಚೇರಿ ಕೃಷ್ಣಾದಲ್ಲಿಂದು ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರು ರೈತ ಸಂಘಟನೆಗಳ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘದ ಮುಖಂಡರ ಜತೆ ಸುದೀರ್ಘ ಸಭೆ ನಡೆಸಿ ರೈತ ಮುಖಂಡರ ಮನವಿ ಹಿನ್ನೆಲೆಯಲ್ಲಿ ರೈತ ಹೋರಾಟಗಾರರ ಮೇಲಿನ ಮೊಕದ್ದಮೆಗಳ ವಾಪಸ್ ಪಡೆಯುವಂತೆ ಅಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಈ ಬಗ್ಗೆ ಅಧಿಕಾರಿಗಳಿಂದಲೂ ಮಾಹಿತಿ ಪಡೆದ ಬಿಎಸ್‌ವೈ ಇಂದು ಸಂಜೆ ಒಳಗೆ ವಿವಿಧ ಠಾಣೆಗಳಲ್ಲಿ ದಾಖಲಾಗಿರುವ ಮೊಕದ್ದಮೆಗಳನ್ನು ವಾಪಸ್‌ ಪಡೆಯುವ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ರೈತ ಮುಖಂಡರು ಮೊದಲೇ ಒಂದು ಕಡೆ ಮಳೆಯಾಗದೆ ಬರ ಇದೆ, ಮತ್ತೊಂದು ಕಡೆ ನೆರೆ ಹಾವಳಿ ಉಂಟಾಗಿ ರೈತರು ಸಂಕಷ್ಟದಲ್ಲಿದ್ದಾರೆ. ಇಂತಹ ಸಮಯದಲ್ಲಿ ಮೊಕದ್ದಮೆಗಳಿಗೆ ಅಲೆಯಲು ಅವರಿಗೆ ಹಣಕಾಸಿನ ನೆರವು ಯಾರು ಕೊಡುತ್ತಾರೆ. ತಿಂಗಳಿಗೆ ಎರಡೆರಡು ಬಾರಿ ಪೊಲೀಸ್ ಠಾಣೆ, ನ್ಯಾಯಾಲಯಕ್ಕೆ ಅಲೆದಾಡುತ್ತಾ ಇದ್ದರೆ ರೈತರ ಪಾಡು ಏನಾಗಬಾರದು ಎಂದು ಪ್ರಶ್ನಿಸಿದರು. ಹೀಗಾಗಿ ರೈತರ ಮೇಲೆ ದಾಖಲಾಗಿರುವ ಮೊಕದ್ದಮೆಗಳನ್ನು ತಕ್ಷಣವೇ ಹಿಂಪಡೆಯುವಂತೆ ಮುಖಂಡರು ಮನವಿ ಮಾಡಿದೆವು. ಇದಕ್ಕೆ ಸಿಎಂ ಯಡಿಯೂರಪ್ಪ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಇದಕ್ಕಾಗಿ ನಾವು ಅವರಿಗೆ ವಿಶೇಷ ಅಭಿನಂದನೆ ತಿಳಿಸುವುದಾಗಿ ಹೇಳಿದರು.

ಈ ಹಿಂದೆಯೇ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಅಂದಿನ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ರೈತರ ಮೇಲಿನ ಮೊಕದ್ದಮೆ ಹಿಂಪಡೆಯುವಂತೆ ಮನವಿ ಮಾಡಿದ್ದೆವು. ಆದರೆ ಅವರು ತಮ್ಮ ತಮ್ಮ ಪಕ್ಷದ ಕಾರ್ಯಕರ್ತರ ಮೇಲೆ ದಾಖಲಿಸಿದ್ದ ಮೊಕದ್ದಮೆಗಳನ್ನು ಹಿಂಪಡೆದರೆ ಹೊರತು, ರೈತರ ಒಂದೇ ಒಂದು ಪ್ರಕರಣವನ್ನು ಹಿಂಪಡೆಯಲಿಲ್ಲ. ಇದು ರೈತರ ಮೇಲೆ ಸಮ್ಮಿಶ್ರ ಸರ್ಕಾರಕ್ಕೆ ಇದ್ದ ಬದ್ಧತೆ ಎಂದು ವ್ಯಂಗ್ಯವಾಡಿದರು.

ಅಷ್ಟೇ ಅಲ್ಲದೆ ಉತ್ತರ ಕರ್ನಾಟದ ಸೇರಿ ಪ್ರವಾಹದಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಹಾಗೂ ಬೆಳೆ ನಾಶ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಈ ವೇಳೆ ಬೆಳೆ ನಾಶವಾಗಿರುವ ರೈತರಿಗೆ ಸೂಕ್ತ ಪರಿಹಾರ ಸರ್ಕಾರ ನೀಡುವಂತೆ ಮನವಿ ರೈತ ಮುಖಂಡರು ಮನವಿ ಮಾಡಿದ್ದಾರೆ. ಇದಕ್ಕೆ ಸಕಾರಾತ್ಮಕ ಸ್ಪಂದನೆ ನೀಡಿದ ಸಿಎಂ ಯಾವ ಯಾವ ಭಾಗಗಳಲ್ಲಿ ರೈತರ ಮೇಲೆ ಮೊಕದ್ದಮೆಗಳನ್ನು ದಾಖಲಿಸಲಾಗಿದೆಯೋ ಅವುಗಳನ್ನು ತತ್‍ಕ್ಷಣವೇ ವಾಪಸ್ ಪಡೆಯಬೇಕೆಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಲ್ಲದೆ ರೈತ ಹೋರಾಟದ ವೇಳೆ ರಾಜ್ಯದ ವಿವಿಧೆಡೆ ದಾಖಲಾದ ಪ್ರಕರಣವನ್ನು ಸಹ ತಕ್ಷಣ ಹಿಂಪಡೆಯುವಂತೆ ಆದೇಶಿಸಿದ್ದಾರೆ.

Also read: ಪ್ರವಾಹದಿಂದ ಲಕ್ಷಾಂತರ ರಾಜ್ಯದ ಜನರು ಬೀದಿಯಲ್ಲಿ ನಿಂತರೆ ಬಿಜೆಪಿಯ ಹೊಸ ಸಚಿವರಿಗೆ ಇನ್ನೋವಾ ಬದಲು ದುಬಾರಿ ಫಾರ್ಚೂನರ್ ಕಾರೇ ಬೇಕಂತೆ..