ಕೇಂದ್ರ ಸಶಸ್ತ್ರ ಭದ್ರತಾ ಪಡೆ 300 ಹೆಡ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

0
74

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಕೇಂದ್ರ ಸಶಸ್ತ್ರ ಭದ್ರತಾ ಪಡೆ ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್ ನಲ್ಲಿ 300 ಹೆಡ್ ಕಾನ್‌ಸ್ಟೇಬಲ್ (ಜನರಲ್ ಡ್ಯೂಟಿ) ಹೆಡ್ ಕಾನ್‌ಸ್ಟೇಬಲ್ ಹುದ್ದೆಗಳನ್ನು ಕ್ರೀಡಾ ಕೋಟದಡಿ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಡಿಸೆಂಬರ್ 17,2019ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.

Also read: ಐಐಟಿ ಧಾರವಾಡದಲ್ಲಿ ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ನೇರ ಸಂದರ್ಶನ.!

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಹೆಡ್ ಕಾನ್‌ಸ್ಟೇಬಲ್

ಸಂಸ್ಥೆ (Organisation): ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್

ವಿದ್ಯಾರ್ಹತೆ (Educational Qualification): ದ್ವಿತೀಯ ಪಿಯುಸಿ /10+2 ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಕ್ರೀಡೆಯಲ್ಲಿ ರಾಷ್ಟ್ರಮಟ್ಟ, ರಾಜ್ಯ ಮಟ್ಟ, ಅಂತರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಬೇಕು ಮತ್ತು ಪ್ರಮಾಣ ಪತ್ರವನ್ನು ಹೊಂದಿರಬೇಕು.

ವಯೋಮಿತಿ: ಆಗಸ್ಟ್ 1,2019ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 23 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವಿದ್ಯಾರ್ಹತೆ (Job Location): ಭಾರತದೆಲ್ಲೆಡೆ

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ದೈಹಿಕ ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಡಿಮ್ಯಾಂಡ್‌ ಡ್ರಾಫ್ಟ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಮಾಜಿ ಸೈನಿಕ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್ ನ ಅಧಿಕೃತ ವೆಬ್‌ಸೈಟ್‌ https://www.cisfrectt.in/ ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಿಕೊಂಡು ಅಲ್ಲಿ ನೀಡಲಾಗಿರುವ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಡಿಸೆಂಬರ್ 17,2019ರೊಳಗೆ ತಲುಪಿಸಬೇಕಿರುತ್ತದೆ.