SSLC ಪಾಸಾದವರಿಗೆ, ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ..

0
199

SSLC ಪಾಸಾದ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) 914 ಕಾನ್ಸ್‌ಟೇಬಲ್ / ಟ್ರೇಡ್ಸ್‌ಮೆನ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 22,2019ರೊಳಗೆ ಅರ್ಜಿ ಸಲ್ಲಿಸಬೇಕು.

Also read: ಡಿಆರ್‌ಡಿಓ ಶೀಘ್ರಲಿಪಿಗಾರ ಮತ್ತು ಆಡಳಿತ ಸಹಾಯಕ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಕಾನ್ಸ್‌ಟೇಬಲ್ / ಟ್ರೇಡ್ಸ್‌ಮೆನ್

ಸಂಸ್ಥೆ (Organisation): ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್)

ವಿದ್ಯಾರ್ಹತೆ (Educational Qualification): ಹತ್ತನೇ ತರಗತಿ / ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ನಿಂದ ಹೊಂದಿರುವ ಅಭ್ಯರ್ಥಿಗಳು
ಅರ್ಜಿಯನ್ನು ಸಲ್ಲಿಸಬಹುದು.

ವೇತನ ವಿವರ: (Salary Scale): ತಿಂಗಳಿಗೆ 21,700/- ರಿಂದ 69,100/-ರೂ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (Application End Date): October 22, 2019

ವಯೋಮಿತಿ: ಆಗಸ್ಟ್ 1,2019ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 23 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಪಿಇಟಿ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ
ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ /ಮಾಜಿ ಸೈನಿಕ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಯ ಅಧಿಕೃತ ವೆಬ್‌ಸೈಟ್‌ https://www.cisf.gov.in/ ಗೆ ಹೋಗಿ
ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಕೇಳಲಾಗಿರುವ ಮಾಹಿತಿ ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಅಕ್ಟೋಬರ್
22,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ: https://www.cisf.gov.in/ ಕ್ಲಿಕ್ ಮಾಡಿ.