ಸಿಎಂ ಸಿದ್ದರಾಮಯ್ಯ ಮತ್ತು ಬಿಎಸ್ ಯಡಿಯೂರಪ್ಪ ಒಂದೇ ಕ್ಷೇತ್ರದಿಂದ ನಿಲ್ಲುತ್ತಾರಾ..? ನಿಂತರೆ ಯಾರು ಗೆಲ್ಲುವರು.?

1
1261

ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಶಿಕಾರಿಪುರ ಕ್ಷೇತ್ರವನ್ನು ಪುತ್ರ ಬಿ.ಎಸ್.ರಾಘವೇಂದ್ರ ಅವರಿಗೆ ಬಿಟ್ಟುಕೊಟ್ಟು, ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಅಥವಾ ಬಾಗಲಕೋಟೆ ಜಿಲ್ಲೆಯ ತೇರದಾಳ ಅಥವಾ ವಿಜಯಪುರ ನಗರ ವಿಧಾನಸಭಾ ಕ್ಷೇತ್ರದಿಂದ ಯಡಿಯೂರಪ್ಪ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ಮಾಧ್ಯಮಗಳ ಜೊತೆ ಮಾಜಿ ಸಿಎಂ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮಾತನಾಡಿದ್ದಾರೆ.

source: publictv.in

ಈ ವೇಳೆ ಸಿಎಂ ಸಿದ್ದರಾಮಯ್ಯ ಬೇಕಾದ್ರೆ ನನ್ನ ವಿರುದ್ಧ ಸ್ಪರ್ಧಿಸಲಿ. ಅದಕ್ಕೆ ನನ್ನ ಅಭ್ಯಂತರವಿಲ್ಲ ಅಂತ ಹೇಳಿದ್ದಾರೆ. ಹೈಕಮಾಂಡ್ ಸೂಚನೆ ಮೇರೆಗೆ ಕ್ಷೇತ್ರ ಅಯ್ಕೆಯಲ್ಲಿ ಚಿಂತನೆ ನಡೆಸಲಾಗುವುದು ಎಂದು ತಿಳಿಸಿದರು.

ಇನ್ನೇನು 7 ರಿಂದ 8 ತಿಂಗಳಲ್ಲಿ ಚುನಾವಣೆ ನಡೆಯಲಿದೆ. ಚುನಾವಣೆಗೆ ತಯಾರಿ ಎಲ್ಲಾ ಪಕ್ಷದಲ್ಲಿ ಈಗಾಗಲೇ ಆರಂಭವಾಗಿದೆ. ಈ ಹಿನ್ನಲೆಯಲ್ಲಿ ಹಲವು ಜಿಲ್ಲೆಗಳಿಗೆ ಪ್ರವಾಸ ಕೈಗೊಂಡಿದ್ದೇವೆ. ಈ ತಿಂಗಳ ಅಂತ್ಯದಲ್ಲಿ ಪ್ರತಿ ಜಿಲ್ಲೆಯಲ್ಲಿ ಸಹ ಜಿಲ್ಲಾ ಮಟ್ಟದ ಸಮಾವೇಶ ಮಾಡಲಾಗುವುದು. ನವೆಂಬರ್ 1 ರಾಜ್ಯೋತ್ಸವ ದಿನದಂದು ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಅಂದಿನಿಂದ ರಾಜ್ಯದಲ್ಲಿ ಪರಿವರ್ತನಾ ಯಾತ್ರೆ ಆರಂಭವಾಗುತ್ತದೆ ಎಂದು ಹೇಳಿದ್ದಾರೆ.

ಈ ವೇಳೆ ನಾಲ್ಕರಿಂದ ಐದು ಸಚಿವ ಮತ್ತು ಶಾಸಕರ ಹಗರಣದ ದಾಖಲೆ ಶೀಘ್ರ ಬಿಡುಗಡೆ ಮಾಡಲಾಗುವುದು ಎಂದು ಎಚ್ಚರಿಕೆ ಕೂಡ ನೀಡಿದ್ದಾರೆ. ಇದರಲ್ಲಿ ಸಿಎಂ ಕುಟುಂಬದ ಸಂಬಂಧಿಕರ ಹಗರಣ ಬಿಡುಗಡೆ ಮಾಡಲಾಗುವುದು. ಸಿದ್ದರಾಮಯ್ಯ ಘೋಷಣೆ ರಾಜಕೀಯಪ್ರೇರಿತ. ಜನವರಿ ನಂತರ ಯಾವ ಕಾರ್ಯಕ್ರಮ ಜಾರಿಯಗಲ್ಲ. ಹೊಸ ಘೋಷಣೆ ಮೂಲಕ ಜನರನ್ನು ಸಿಎಂ ಮರಳು ಮಾಡುತ್ತಿದ್ದಾರೆ ಅಂತ ಹೇಳಿದ್ದಾರೆ.