ಬಡವರಿಗೆ ಮದುವೆ ಮಾಡಿಕೊಳ್ಳುವ ಚಿಂತೆ ಬೇಡ; ಇನ್ಮುಂದೆ ಸರ್ಕಾರವೇ ಮಾಡುತ್ತೆ ಬಡವರ ಮದುವೆ, ಏನಿದು ಹೊಸ ಯೋಜನೆ??

0
243

ಬಡವರಿಗೆ ಮದುವೆ ಮಾಡಿಕೊಳ್ಳುವುದೇ ದೊಡ್ಡ ಹೊರೆಯಾಗಿದ್ದು, ಹಳ್ಳಿಗಳಲ್ಲಿ ಮದುವೆಗೆ ಮಾಡಿದ ಸಾಲಕ್ಕಾಗಿಯೇ ಜಮೀನು, ಮನೆ ಒಡವೆಗಳನ್ನು ಮಾರಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಅದರಲ್ಲಿ ಕೆಲವು ರೈತರಂತೂ ಮಕ್ಕಳ ಮದುವೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ಹಲವು ಉದಾಹರಣೆಗಳಿವೆ. ಇದೆಲ್ಲವನ್ನು ಇಟ್ಟುಕೊಂಡು ನೆರೆ ಸಂತ್ರಸ್ತರಿಗೆ ಕಣ್ಣಿರು ಹಾಕಿಸುತ್ತಿರುವ ಬಿಜೆಪಿ ಸರ್ಕಾರ ಅಧಿಕಾರಕ್ಕೇರಿ 100 ದಿನಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಬಡವರ ಮದುವೆಯನ್ನು ಸರ್ಕಾರವೇ ಮಾಡುವ ಯೋಜನೆಯನ್ನು ಜಾರಿಗೆ ತರಲು ಮುಂದಾಗಿದೆ.

Also read: ಉದ್ಯೋಗದ ಭರವಸೆ ನೀಡಿ ಅಧಿಕಾರಕ್ಕೆ ಬಂದ ಮೋದಿ ಸರ್ಕಾರಕ್ಕೆ ಯುವಕರು ಕೆಲಸ ಕೇಳಿದರೆ ಚಂದ್ರನನ್ನು ತೋರಿಸುತ್ತಿದೆ; ರಾಹುಲ್ ಗಾಂಧಿ

ಸರ್ಕಾರವೇ ಮಾಡುತ್ತೆ ಬಡವರ ಮದ್ವೆ?

ಹೌದು ಆರ್ಥಿಕವಾಗಿ ಹಿಂದುಳಿದ ಬಡವರಿಗಾಗಿ ಉಚಿತ ಸಾಮೂಹಿಕ ವಿವಾಹ ಯೋಜನೆಯನ್ನು ಬಿಜೆಪಿ ಸರ್ಕಾರ ಜಾರಿಗೆ ತರುತ್ತಿದೆ. ಮುಜರಾಯಿ ಇಲಾಖೆ ನೇತೃತ್ವದಲ್ಲಿ ಪ್ರತಿ ವರ್ಷ 10 ಸಾವಿರ ಉಚಿತ ಸಾಮೂಹಿಕ ಮದುವೆ ಮಾಡಿಸುವ ನೂತನ ಯೋಜನೆ ಇದಾಗಿದ್ದು, ಇದರ ಸಿದ್ಧತೆಯೂ ಆರಂಭವಾಗಿದೆ. ಮುಜರಾಯಿ ಇಲಾಖೆಯ ಎ ದರ್ಜೆ ನೂರು ದೇವಾಲಯಗಳಲ್ಲಿ ಪ್ರತಿ ವರ್ಷ ಒಂದೊಂದು ದೇವಾಲಯದಲ್ಲಿ 100 ಜೋಡಿಗೆ ಮದುವೆ ಮಾಡಿಸುವ ಗುರಿ ಹೊಂದಲಾಗಿದೆ. ಹೀಗೆ ಪ್ರತಿ ವರ್ಷ 10 ಸಾವಿರ ಜೋಡಿಗೆ ಮದುವೆ ಮಾಡಿಸುವ ಯೋಜನೆ ಇದಾಗಿದೆ. ಯಾವುದೇ ಜಾತಿ-ಭೇದವಿಲ್ಲದೆ, ಎಲ್ಲಾ ವರ್ಗದ ಬಡವರಿಗಾಗಿ ಈ ಯೋಜನೆ ಜಾರಿಗೆ ತರಲಾಗುತ್ತಿದ್ದು, ಹಿಂದು ಸಂಪ್ರದಾಯದಂತೆ ವಿವಾಹ ನಡೆಯಲಿದೆ.

Also read: ಪಾಲಕರೇ ನಿಮ್ಮ ಮಕ್ಕಳನ್ನು ಅಡುಗೆ ಮನೆಗೆ ಕಳುಹಿಸುವ ಮುನ್ನ ಎಚ್ಚರ; ಅಮ್ಮನಿಗೆ ಮ್ಯಾಗಿ ಮಾಡಲು ಹೋಗಿ ಶವವಾದ ಬಾಲಕ.!

ಒಂದು ಜೋಡಿಗೆ 25-30 ಸಾವಿರ ಖರ್ಚಾಗಲಿದ್ದು, ಪ್ರತಿ ವರ್ಷ 25-30 ಕೋಟಿ ರೂ. ಈ ಯೋಜನೆಗೆ ಖರ್ಚಾಗಲಿದೆ. ಹಾಗೆಯೇ ವಧು-ವರರಿಗೆ ವಸ್ತ್ರ, ಮಾಂಗಲ್ಯ, ಆರ್ಥಿಕ ಸಹಾಯ ಸರ್ಕಾರವೇ ನೀಡಲಿದೆ. ಚಾಮುಂಡೇಶ್ವರಿ, ಕಟೀಲು ದುರ್ಗೆ, ನಂಜನಗೂಡು ನಂಜುಂಡೇಶ್ವರ, ಕುಕ್ಕೆ ಸುಬ್ರಹ್ಮಣ್ಯ, ಮಲೆ ಮಹದೇಶ್ವರ ಸೇರಿದಂತೆ ಎ ದರ್ಜೆಯ 100 ದೇವಾಲಯಗಳಲ್ಲಿ ಈ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಸಲು ನಿರ್ಧಾರ ಮಾಡಲಾಗಿದೆ. ಪ್ರಾರಂಭಿಕ ಹಂತದಲ್ಲಿ ಸರ್ಕಾರವೇ ಈ ಯೋಜನೆ ನಡೆಸಲಿದೆ. ಮುಂದಿನ ದಿನಗಳಲ್ಲಿ ಇನ್ಫೋಸಿಸ್ ಸೇರಿದಂತೆ ಹಲವು ಸಂಘ-ಸಂಸ್ಥೆಗಳನ್ನ ಭಾಗಿಯಾಗಿಸಿಕೊಂಡು ಯೋಜನೆ ಮುಂದುವರಿಸಲು ಇಲಾಖೆ ತೀರ್ಮಾನ ಮಾಡಿದೆ.

ಹಿಂದಿನ ಕಾಂಗ್ರೆಸ್ ಸರ್ಕಾರ ಮುಸ್ಲೀಂ ಸಮುದಾಯದ ಜನರಿಗಾಗಿ ಶಾದಿ ಭಾಗ್ಯ ಯೋಜನೆ ಜಾರಿಗೆ ತಂದಿತ್ತು. ಇದೀಗ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಸಾಮೂಹಿಕ ವಿವಾಹ ಯೋಜನೆ ಜಾರಿಗಾಗಿ ಸಿದ್ಧತೆಯಲ್ಲಿ ತೊಡಗಿದೆ. ವಧು ಮತ್ತು ವರನಿಗೆ ವಿವಾಹ ವಸ್ತ್ರ, ಎಂಟು ಗ್ರಾಂ ಚಿನ್ನದ ಮಾಂಗಲ್ಯ, ವಿವಾಹವಾದ ಜೋಡಿಗಳಿಗೆ ಆರ್ಥಿಕ ಸಹಾಯಧನ ನೀಡುವ ಜೊತೆಗೆ ವಿವಾಹ ನೋಂದಣಿಯನ್ನು ಮಾಡಿಸಲು ಇಲಾಖೆ ತೀರ್ಮಾನಿಸಿದೆ.

Also read: ಎರಡು ಸಾವಿರ ರೂ. ನೋಟ್ ಮುದ್ರಣ ಸ್ಥಗಿತಕ್ಕೆ ಕಾರಣ ನೀಡಿದ RBI; ಕಪ್ಪುಹಣ ತಡೆಗೆ ನೋಟ್ ಮುದ್ರಣ ಸ್ಥಗಿತಗೊಳಿಸಿದೆ ಅಂತೆ.!

ಮುಂದಿನ ಧಾರ್ಮಿಕ ಪರಿಷತ್‌ ಸಭೆಗಳಿಗೆ ವಿವಿಧ ಸಂಘ ಸಂಸ್ಥೆಗಳು, ದಾನಿಗಳು, ಕೈಗಾರಿಕೋದ್ಯಮಿಗಳನ್ನು ಆಹ್ವಾನಿಸಿ ಚರ್ಚಿಸಿ ಯೋಜನೆಗೆ ಮತ್ತಷ್ಟು ಶಕ್ತಿ ತುಂಬಲು ತೀರ್ಮಾನ ಕೈಗೊಳ್ಳಲಾಗಿದೆ. ಈ ಬಗ್ಗೆ ಯುಎನ್ಐ ಕನ್ನಡ ಸುದ್ದಿ ಸಂಸ್ಥೆ ಜೊತೆ ಮಾತನಾಡಿದ ಮುಜರಾಯಿ ಹಾಗೂ ಬಂದರು, ಒಳನಾಡು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು, ಇನ್ಪೋಸಿಸ್ ಪ್ರತಿಷ್ಠಾನದ ಸುಧಾಮೂರ್ತಿ, ಧರ್ಮಸ್ಥಳದ ಶ್ರೀ ವೀರೇಂದ್ರ ಹೆಗಡೆ, ಮಲೆ ಮಹದೇಶ್ವರ ಬೆಟ್ಟದ ಆಡಳಿತ ಮಂಡಳಿ ಸದಸ್ಯರ ಜೊತೆ ಚೆರ್ಚಿಸಿ ಸಾಮೂಹಿಕ ವಿವಾಹದ ರೂಪು ರೇಷೆಗಳನ್ನು ಸಿದ್ದಪಡಿಸಿ ನಿಯಮಾವಳಿ ರೂಪಿಸಲಾಗುವುದು ಎಂದು ಅವರು ತಿಳಿಸಿದರು.