ಪರಿಹಾರ ನೀಡದ ಕೇಂದ್ರದ ವಿರುದ್ಧ ಸಿಎಂ ಯಡಿಯೂರಪ್ಪ ಆಕ್ರೋಶ, ರಷ್ಯಾ ದೇಶಕ್ಕೆ ಸಾಲ ನೀಡಲು ಹಣವಿದೆ ರಾಜ್ಯದ ಪರಿಹಾರಕ್ಕೆ ಹಣ ಇಲ್ಲವೆಂದ ಬಿಎಸ್ ವೈ.!

0
388

ಪ್ರವಾಹದಿಂದ ಉತ್ತರ ಕರ್ನಾಟಕ, ಮಲೆನಾಡು ಸೇರಿ ಹಲವು ಜಿಲ್ಲೆಗಳಲ್ಲಿ ಜನರು ಇನ್ನೂ ಬೀದಿಯಲ್ಲಿ ಜೀವನ ಮಾಡುತ್ತಾ ಗಂಜಿ ಕೇಂದ್ರಗಳಲ್ಲಿ ಬರುವ ಊಟಕ್ಕಾಗಿ ಕಾಯಿವ ಪರಿಸ್ಥಿತಿ ಬಂದಿದೆ. ಇದರ ನಡುವೆ ಚಿಕ್ಕ ಮಕ್ಕಳು ಅನಾರೋಗ್ಯದಿಂದ ಸಾವನ್ನಪ್ಪುತ್ತಿದ್ದಾರೆ. ಕೆಲವು ಭಾಗಗಳಲ್ಲಿ ಸರಿಯಾದ ಊಟ, ಮಲಗಲು ಜಾಗವಿಲ್ಲದೆ ಜನರು ಪರದಾಡುತ್ತಿದ್ದರು ಸರ್ಕಾರ ಮಾತ್ರ 10 ಸಾವಿರ ನೆರವನ್ನು ನೀಡಿ ಕೈ ಎತ್ತಿ ಕುಳಿತಿದೆ. ಆದರೆ ಕೇಂದ್ರ ಸರ್ಕಾರ ಮಾತ್ರ ಸಂತ್ರಸರ ನೆರವಿಗೆ ಬರದೆ ಇರುವುದು ಜನರಿಗೆ ಬೇಸರ ತಂದು ಮೋದಿಯವರ ಬಗ್ಗೆ ಅಸಮಾಧಾನ ಹೊರಹಾಕುತ್ತಿದ್ದಾರೆ. ಇದು ಬರಿ ಜನರು ಮಾತ್ರವಲ್ಲದೆ ಸಿಎಂ ಯಡಿಯೂರಪ್ಪ ಕೂಡ ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Also read: ಬಿಗ್ ಬ್ರೇಕಿಂಗ್; ಸಂಚಾರಿ ನಿಯಮ ಉಲ್ಲಂಘನೆ ದಂಡಕ್ಕೆ ಮುಕ್ತಿ, ರಾಜ್ಯದಲ್ಲೂ ಟ್ರಾಫಿಕ್ ದಂಡಕ್ಕೆ ಬ್ರೇಕ್’ ಎಷ್ಟೊಂದು ಕಡಿತ ಇಲ್ಲಿದೆ ನೋಡಿ ಮಾಹಿತಿ .!

ಹೌದು ಕರ್ನಾಟಕ ಸಂಪೂರ್ಣವಾಗಿ ನೆರೆಯಲ್ಲಿ ನಿಂತಿದ್ದು ಇದಕ್ಕೆ ನೆರವನ್ನು ನೀಡಲು ಸರ್ಕಾರ ಯಾಕೆ ಮುಂದೆ ಬರುತ್ತಿಲ್ಲ ಎನ್ನುವುದು ಹಲವರ ಪ್ರಶ್ನೆಯಾಗಿದೆ. ಆದರೆ ರಾಜ್ಯ ಸರ್ಕಾರ ಈಗಾಗಲೇ ಕೇಂದ್ರಕ್ಕೆ ನೆರವನ್ನು ಕೇಳಿದರು ಪ್ರತಿಕ್ರಿಯೆ ನೀಡದ ಮೋದಿ ಸರ್ಕಾರ ರಷ್ಯಾ ದೇಶಕ್ಕೆ ಒಂದು ಬಿಲಿಯನ್ ಡಾಲರ್ ಸಾಲ ನೀಡಲು, ಭೂಕಂಪ ಪೀಡಿತ ನೇಪಾಳಕ್ಕೆ ನೆರವು ನೀಡಲು ಮುಂದಾದ ಕೇಂದ್ರ ಸರ್ಕಾರ ಇಪ್ಪತ್ತೈದು ಮಂದಿಯನ್ನು ಗೆಲ್ಲಿಸಿ ಸಂಸತ್ತಿಗೆ ಕಳಿಸಿದ ಕರ್ನಾಟಕ ನೆರೆಯಿಂದ ತತ್ತರಿಸುತ್ತಿದ್ದರೂ ನೆರವಿಗೆ ಧಾವಿಸದ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ತೀವ್ರ ಅಸಮಾಧಾನ ತೋಡಿಕೊಂಡಿರುವ ಅಂಶ ಬೆಳಕಿಗೆ ಬಂದಿದೆ.

ಈ ವಿಚಾರವನ್ನು ತಮ್ಮ ಆಪ್ತರ ಬಳಿ ಚರ್ಚಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಇತಿಹಾಸದಲ್ಲೇ ಮೊದಲ ಬಾರಿ ಕರ್ನಾಟಕ ಬಿಜೆಪಿಯ ಇಪ್ಪತ್ತೈದು ಮಂದಿಯನ್ನು ಗೆಲ್ಲಿಸಿ ಸಂಸತ್ತಿಗೆ ಕಳಿಸಿತು. ಆದರೆ ಗೆಲ್ಲಿಸಿ ಕಳಿಸಿದ ಜನ ಇವತ್ತು ರಾಜ್ಯ ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದಾರೆ. ಅವರಿಗೆ ಉತ್ತರಿಸಲು ನಮಗೆ ಸಾಧ್ಯವಾಗುತ್ತಿಲ್ಲ, ಈ ಬಾರಿಯ ಜಲಪ್ರಳಯದಿಂದ ಕರ್ನಾಟಕದ ಬಹುತೇಕ ಜಿಲ್ಲೆಗಳು ತತ್ತರಿಸಿವೆ. 50 ಸಾವಿರ ಕೋಟಿ ರೂ.ಗಳಿಗಿಂತ ಹೆಚ್ಚಿನ ನಷ್ಟವಾಗಿದೆ. ಆದರೆ ನೆರೆ ಸಂತ್ರಸ್ತರಿಗೆ ತಲಾ ಹತ್ತು ಸಾವಿರ ನೀಡಿದ್ದೇವೆ. ಹೆಚ್ಚು ಹಣ ನೀಡಲು ನಮ್ಮ ಬಳಿ ದುಡ್ಡಿಲ್ಲ. ನೆರವಿಗೆ ಧಾವಿಸಬೇಕಾದ ಕೇಂದ್ರ ಸರ್ಕಾರವೂ ಆ ಕುರಿತು ಯೋಚಿಸುತ್ತಿಲ್ಲ ಎಂದು ಬೇಸರಗೊಂಡಿದ್ದಾರೆ.

Also read: ಮಹಿಳಾ ಪೌರ ಕಾರ್ಮಿಕರೊಂದಿಗೆ ಸೇರಿ ಪ್ಲ್ಯಾಸ್ಟಿಕ್ ಕಸ ಬೇರ್ಪಡಿಸಿದ ಪ್ರಧಾನಿ ಮೋದಿ; ಮುಂದೇನು ಮಾಡಿದರು ನೋಡಿ..!

ಬಿಜೆಪಿಗೆ ಸಂಸತ್ ಚುನಾವಣೆಯಲ್ಲಿ ಅಭೂತ ಪೂರ್ವ ಬೆಂಬಲ ನೀಡಿದ ಕರ್ನಾಟಕದ ಕಡೆ ತಿರುಗಿಯೂ ನೋಡುತ್ತಿಲ್ಲ. ಈಗಾಗಲೇ ಕೇಂದ್ರದ ಅಧ್ಯಯನ ತಂಡ ಬಂದು ಪರಿಶೀಲನೆ ನಡೆಸಿ ಹೋಗಿದೆ. ನಷ್ಟದ ಪ್ರಮಾಣ ಏನೆಂಬುದರ ಕುರಿತು ಕೇಂದ್ರ ಗೃಹ ಸಚಿವಾಲಯಕ್ಕೆ ವಿವರ ನೀಡಿದೆ. ಆದರೆ ಪ್ರಧಾನಿ ಮೋದಿ ಅವರಿಗೆ ಕರ್ನಾಟಕಕ್ಕೆ ನೆರವು ನೀಡಬೇಕು ಎಂದೇ ಅನ್ನಿಸುತ್ತಿಲ್ಲ. ಮೊನ್ನೆ ಮೋದಿ ಬೆಂಗಳೂರಿಗೆ ಬಂದ ಸಂದರ್ಭದಲ್ಲಿ ಅವರಿಗೆ ನೆರೆ ಪರಿಹಾರಕ್ಕೆ ಸಂಬಂಧಿಸಿದಂತೆ ಯಾವುದೇ ಮನವಿ ಸಲ್ಲಿಸಬೇಡಿ ಎಂಬ ಸೂಚನೆ ನಮಗೆ ನೀಡಲಾಯಿತು. ಅದರಿಂದಲೇ ನೆರೆ ಸಂತ್ರಸ್ತರಿಗೆ ದೊಡ್ಡ ಮಟ್ಟದಲ್ಲಿ ಪರಿಹಾರ ಒದಗಿಸಲು ನಮಗೆ ಸಾಧ್ಯವಾಗುತ್ತಿಲ್ಲ.

Also read: ರೈತರು, ಕೂಲಿ ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ಹೊಸ ಯೋಜನೆ; ಇನ್ಮುಂದೆ ಮನೆ ಬಾಗಿಲಿಗೆ ಬರಲಿವೆ ಹಲವು ಸರ್ಕಾರಿ ಸೇವೆಗಳು.!

ವಿಪರ್ಯಾಸವೆಂದರೆ ಪ್ರವಾಹಕ್ಕೆ ತುತ್ತಾದ ಬಹುತೇಕ ಜಿಲ್ಲೆಗಳ ವ್ಯಾಪ್ತಿಯಲ್ಲಿ ಲೋಕಸಭಾ ಕ್ಷೇತ್ರಗಳು ಬಿಜೆಪಿ ಬೆಂಬಲಕ್ಕೆ ನಿಂತಿವೆ. ಈಗ ಕೇಂದ್ರದ ಧೋರಣೆ ಅವರ ಕಣ್ಣು ಕೆಂಪಗಾಗಿಸಿರುವುದು ಮಾತ್ರವಲ್ಲ,ನಿಮ್ಮನ್ನು ನಂಬಿ ಮತ ಹಾಕಿದ ನಮಗೆ ಇಂತಹ ಶಿಕ್ಷೆ ನೀಡಬಾರದಿತ್ತು ಎಂಬ ಮಾತುಗಳು ಕೇಳಿ ಬರುತ್ತಿವೆ. ಇದು ನಿಜಕ್ಕೂ ನಮಗೆ ನುಂಗಲಾರದ ತುತ್ತು ಎಂದು ಯಡಿಯೂರಪ್ಪ ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ. ಇದೇ ಪರಿಸ್ಥಿತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ಪಕ್ಷ ಬಹಳ ಕಷ್ಟವನ್ನು ಎದುರಿಸಬೇಕಾಗುತ್ತದೆ.ಹಾಗೊಂದು ವೇಳೆ ವಿಧಾನಸಭೆಯ ಮಧ್ಯಂತರ ಚುನಾವಣೆಯೇ ಎದುರಾದರೆ ನಿಶ್ಚಿತವಾಗಿ ನಾವು ಕಷ್ಟದ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ. ಎಂದು ಬಿಎಸ್‍ವೈ ಅಸಮಾಧಾನವನ್ನು ಹೊರಹಾಕಿದ್ದಾರೆ.