ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದಿತ ವಿಷಯಗಳನ್ನು ಹರುಡುವವರೆ ಹುಷಾರ್, ಇನ್ಮೇಲೆ ಹೀಗೆ ಮಾಡಿದರೆ ಒಂದು ವರ್ಷ ಜಾಮೀನು ರಹಿತ ಶಿಕ್ಷೆ ಖಂಡಿತ!!!

0
338

ಇತ್ತೀಚಿನ ಕೆಲವು ತಿಂಗಳುಗಳಿಂದ ಕರ್ನಾಟಕದ, ಕರಾವಳಿ ಭಾಗಗಳಲ್ಲಿ ನಡೆಯುತ್ತಿರುವ ಸರಣಿ ಹತ್ಯೆಗಳು ಮತ್ತು ಹತ್ಯೆ ಯತ್ನಗಳನ್ನು ಮಟ್ಟ ಹಾಕಲು ರಾಜ್ಯ ಪೊಲೀಸ್ ಇಲಾಖೆ ಮುಂದಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿ, ತಪ್ಪು ಮಾಡುವ ಯಾರೇ ಆಗಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಿ ಎಂಬ ಖಡಕ್ ಸಂದೇಶವನ್ನು ನೀಡಿದ್ದಾರಂತೆ.

ಕರಾವಳಿ ಬಾಗದಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ನಡೆದ ದಾಳಿಯಿಂದ, ಜನರಿಗೆ ಸರ್ಕಾರಾದ ಮತ್ತು ಪೊಲೀಸ್ ಇಲಾಖೆಯ ಮೇಲಿನ ನಂಬಿಕೆಯೇ ಹೊರತು ಹೋಗಿದೆ. ಅದಕ್ಕೆ, ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಸಂದೇಶ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಸೂಚಿಸಿದ್ದಾರೆ.

ಇನ್ನು ದೀಪಕ್ ರಾವ್, ಬಶೀರ್, ಪರೇಶ್ ಮೇಸ್ತಾ ಹತ್ಯೆ ನಂತರ ಎಚ್ಛೆತ್ತುಕೊಂಡ ಸಿಎಂ, ಇದೆ ರೀತಿ ಮುಂದುವರೆದರೆ ಮುಂದೆ ಬರಲಿರುವ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸೋಲಾಗುವುದು ಗ್ಯಾರಂಟಿ ಎಂದು ತಿಳಿದು, ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಪೊಲೀಸ್ ಮಹಾ ನಿರ್ದೇಶಕರ ಕಛೇರಿಯಲ್ಲಿ ಸಭೆ ನಡೆಸಿ, ಕೋಮುವಾದಿಗಳು ಯಾವುದೇ ಸಂಘಟನೆಯವರೇ ಆದರೂ ಮುಲಾಜಿಲ್ಲದೇ ಗೂಂಡಾ ಕಾಯ್ದೆ ಹಾಕಿ ಕ್ರಮ ಕೈಗೊಳ್ಳಿ ಎಂದು ಹೇಳಿದ್ದಾರೆ.

ಇನ್ನು ಗುಂಡಾ ಕಾಯ್ದೆ ವ್ಯಾಪ್ತಿಗೆ ಆಸಿಡ್ ದಾಳಿಕೋರರು, ಅಕ್ರಮ ಮರಳು ಗಣಿಗಾರಿಕೆ ಸೇರಿದಂತೆ ಪರಿಸರಕ್ಕೆ ಹಾನಿ ಮಾಡುವವರು, ಡಿಜಿಟಲ್ ಮೀಡಿಯಾದಲ್ಲಿ ವಂಚಿಸುವವರು, ಮಹಿಳೆ ಮತ್ತು ಮಕ್ಕಳ ಮೇಲೆ ದೌರ್ಜನ್ಯ ಎಸಗುವವರು, ಕಾನೂನು ಬಾಹಿರ ಹಣಕಾಸು ವ್ಯವಹಾರ ನಡೆಸುವವರನ್ನು ಸೇರಿಸಲಾಗಿದೆ. ಈ ಕಾಯ್ದೆ ಅಡಿಯಲ್ಲಿ ಬಂಧನಕ್ಕೆ ಒಳಗಾದರೆ ಒಂದು ವರ್ಷ ಜಾಮೀನು ಸಿಗುವುದಿಲ್ಲ.