ಬೆಂಗಳೂರಿನಲ್ಲಿ ಸಮುದಾಯ ಮಟ್ಟಕ್ಕೆ ಕೊರೊನಾ ಹಬ್ಬಲು ಶುರುವಾಗಿದೆ ಎಂಬ ಆತಂಕದ ವಿಚಾರದ ಬಗ್ಗೆ ಹೇಳಿದ ಡಾ. ಸಿ.ಎನ್. ಮಂಜುನಾಥ್..

0
129

ಇಡೀ ದೇಶಾದ್ಯಂತ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಇದಕ್ಕೆ ಬೆಂಗಳೂರು ಕೂಡಾ ಹೊರತಾಗಿಲ್ಲ. ಕಳೆದ 10 ದಿನಗಳಲ್ಲಿ ಬೆಂಗಳೂರಿನಲ್ಲಿ ಕೋವಿಡ್ 19 ಪ್ರಕರಣಗಳು ತೀವ್ರಗತಿಯಲ್ಲಿ ಹೆಚ್ಚಾಗುತ್ತಿದೆ. ನಗರದಲ್ಲಿ ILI ಮತ್ತು SARI ಪ್ರಕರಣಗಳು ಹೆಚ್ಚುತ್ತಿರುವುದು ಸಾಕಷ್ಟು ಆತಂಕಕಾರಿಯಾದ ವಿಚಾರವಾಗಿದೆ. ಹೀಗಾಗಿ ರಾಂಡಮ್ ಟೆಸ್ಟ್ ಹೆಚ್ಚೆಚ್ಚು ಮಾಡಬೇಕಿದೆ. ಅಂದರೆ ಸೋಂಕಿನ ಲಕ್ಷಣ ಇರಲಿ, ಇಲ್ಲದೇ ಇರಲಿ ಎಲ್ಲೆಲ್ಲಿ ಸೋಂಕು ಹಬ್ಬುವ ಸಾಧ್ಯತೆಯಿರತ್ತೆ ಅಲ್ಲೆಲ್ಲಾ ಹೆಚ್ಚಾಗಿ ಪರೀಕ್ಷೆ ಮಾಡಬೇಕು ಎಂದು ಕೊರೋನಾ ಟಾಸ್ಕ್ ಫೋರ್ಸ್ ಸದಸ್ಯ ಡಾ. ಸಿ.ಎನ್. ಮಂಜುನಾಥ್ ಹೇಳಿದ್ದಾರೆ. ಯಾರೆಲ್ಲಾ ಸಾರ್ವಜನಿಕರೊಂದಿಗೆ ಸಂಪರ್ಕದಲ್ಲಿರುತ್ತಾರೋ ಅಂತವರನ್ನು ಆದ್ಯತೆಯ ಮೇರೆಗೆ ಕೊರೋನಾ ಟೆಸ್ಟ್ಗೆ ಒಳಪಡಿಸಬೇಕು ಎಂದು ಹೇಳಿದ್ದಾರೆ.

ಸೋಂಕಿತರೊಂದಿಗೆ ಸಂಪರ್ಕ ಹೊಂದಿದವರನ್ನು ಪತ್ತೆ ಹಚ್ಚುವುದು ನಿಜಕ್ಕೂ ಸವಾಲಿನ ಕೆಲಸ. ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಉಪಯೋಗಿಸಿಕೊಂಡು ಕಾರ್ಯನಿರ್ವಹಿಸುತ್ತಿದ್ದೇವೆ. ಸೋಂಕು ಶಂಕಿತರನ್ನು ಬೇಗ ಪತ್ತೆ ಮಾಡಿ, ಚಿಕಿತ್ಸೆ ನೀಡಲಾಗುತ್ತಿದೆ. ಕೋವಿಡ್ ಕೇರ್ ಸೆಂಟರ್ಗಳ ನಿರ್ಮಾಣದ ಜತೆಗೆ ಖಾಸಗಿ ಆಸ್ಪತ್ರೆಗಳನ್ನು ತೊಡಗಿಸಿಕೊಂಡ ಪರಿಣಾಮ ಅಗತ್ಯ ಚಿಕಿತ್ಸೆ ಸಿಗುತ್ತದೆ ಎಂದು ಹೇಳಿದರು. ಇಷ್ಟು ದಿನ ಉತ್ತಮವಾಗಿ ನಿರ್ವಹಿಸಿದ್ದೇವೆ. ರಾಜ್ಯದಲ್ಲಿ ಈಗ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ.ಈ ಸಂದರ್ಭದಲ್ಲಿ ಮಾರುಕಟ್ಟೆ ಸೇರಿದಂತೆ ವಿವಿಧೆಡೆ ರ್ಯಾಂ್ಡಮ್ ಪರೀಕ್ಷೆಗಳನ್ನು ನಡೆಸಬೇಕು ಎಂದು ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ -ಡಾ.ಸಿ.ಎನ್. ಮಂಜುನಾಥ್ ಎಂದರು.

ಕೋವಿಡ್ ಪರೀಕ್ಷಾ ಸಾಮರ್ಥ್ಯವನ್ನು 16 ಸಾವಿರದವರೆಗೂ ಹೆಚ್ಚಿಸಿ, ನೇರ ಹಾಗೂ ಪರೋಕ್ಷ ಸಂಪರ್ಕಿತರು, ಶೀತ ಜ್ವರ ಮಾದರಿಯ ಅನಾರೋಗ್ಯ ಸಮಸ್ಯೆಯಿಂದ (ಐಎಲ್ಐ) ಬಳಲುತ್ತಿರುವವರಿಗೆ, ತೀವ್ರ ಉಸಿರಾಟದ ಸಮಸ್ಯೆ ಎದುರಿಸುತ್ತಿರುವವರಿಗೆ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಹೇಳಿದರು. ಅಲ್ಲದೇ, ಪ್ರಯೋಗಾಲಯಗಳ ಸಂಖ್ಯೆ ಹೆಚ್ಚಳ ಹಾಗೂ ಫೀವರ್ ಕ್ಲಿನಿಕ್ಗಳ ಪ್ರಾರಂಭ ಮಾಡಲಾಗಿದೆ ಎಂದರು.

ಹೊರ ರಾಜ್ಯಗಳ ಪ್ರಯಾಣಿಕರಿಗೆ ಸೇವಾ ಸಿಂಧು ಪೋರ್ಟಲ್‌ನಲ್ಲಿ ನೋಂದಣಿ ಕಡ್ಡಾಯ ಮಾಡಲಾಗಿದೆ. ಇವರನ್ನು ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಪಡಿಸಲಾಗುತ್ತಿದೆ. ಸೋಂಕು ಶಂಕಿತರನ್ನು ಪತ್ತೆ ಮಾಡಿ, ಕ್ವಾರಂಟೈನ್‌ಗೆ ಒಳಪಡಿಸಲು 10 ಸಾವಿರಕ್ಕೂ ಅಧಿಕ ಸಿಬ್ಬಂದಿ ಬಳಸಿಕೊಳ್ಳಲಾಗಿದೆ. 60 ವರ್ಷ ಮೇಲ್ಪಟ್ಟವರು, ಕೋವಿಡ್‌ಯೇತರ ರೋಗಿಗಳು, ಗರ್ಭಿಣಿಯರು, ಶೀತಜ್ವರದಂಥ ಸಮಸ್ಯೆಯಿಂದ ಬಳಲುತ್ತಿರುವವರು (ಐಎಲ್ಐ), ಉಸಿರಾಟದ ಸಮಸ್ಯೆ ಇರುವವರನ್ನು ಗುರುತಿಸಲು ಮನೆ ಮನೆ ಸಮೀಕ್ಷೆ ನಡೆಸಲಾಗಿದೆ. ಆಪ್ತಮಿತ್ರ ಸಹಾಯವಾಣಿ (14410) ಮೂಲಕ ಮಾರ್ಗದರ್ಶನ ನೀಡಲಾಗುತ್ತಿದೆ ಎಂದು ತಿಳಿಸಿದರು.

ವಿದೇಶಗಳಿಂದ ಬಂದವರನ್ನು ವಿಮಾನ ನಿಲ್ದಾಣಗಳಲ್ಲಿಯೇ ತಪಾಸಣೆಗೆ ಒಳಪಡಿಸಿ, 14 ದಿನಗಳ ಸಾಂಸ್ಥಿಕ ಕ್ವಾರಂಟೈನ್ ಹಾಗೂ 14 ದಿನಗಳ ಮನೆ ಕ್ವಾರಂಟೈನ್‌ಗೆ ಒಳಪಡಿಸಲಾಯಿತು. ಅನ್ಯ ರಾಜ್ಯಗಳಿಂದ ಬರುವವರು ಕಡ್ಡಾಯವಾಗಿ ಸೇವಾ ಸಿಂಧು ಪೋರ್ಟಲ್‌ನಲ್ಲಿ ಹೆಸರು ನೋಂದಾಯಿಸಬೇಕೆಂಬ ನಿಯಮ ರೂಪಿಸಿ, ಇಲ್ಲಿಗೆ ಬಂದವರನ್ನು ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಪಡಿಸಲಾಯಿತು. ಕ್ವಾರಂಟೈನ್‌ಗೆ ಒಳಪಟ್ಟವರಿಗೆ ಕೋವಿಡ್ ಪರೀಕ್ಷೆಗಳನ್ನು ನಡೆಸಿ, ಸೋಂಕಿತರಾಗಿಲ್ಲ ಎನ್ನುವುದು ಖಚಿತವಾದ ಬಳಿಕ ಮನೆಗೆ ಕಳುಹಿಸಲಾಯಿತು. ಕ್ವಾರಂಟೈನ್ ಮತ್ತು ನಿಗಾ ಇಟ್ಟಿರುವ ವ್ಯಕ್ತಿಗಳು ಒಂದೇ ಜಾಗದಲ್ಲಿ ಇರಬೇಕಾಗಿದ್ದು, ಅವರನ್ನು ಇರಿಸುವ ಜಾಗದಿಂದ ಬೇರೆಡೆ ತೆರಳುವುದನ್ನು ತಡೆಯಲು ಜಿಯೋ ಫೆನ್ಸಿಂಗ್ ವ್ಯವಸ್ಥೆ ರೂಪಿಸಲಾಗಿದೆ. ರಾಜ್ಯ ಮಟ್ಟದ ಪರಿಣಿತ ವೈದ್ಯರ ಟಾಸ್ಕ್‌ಫೋರ್ಸ್ ತಂಡವನ್ನು ರೂಪಿಸಿದ್ದು, ಈ ತಂಡವು ರಾಜ್ಯದಲ್ಲಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಎಲ್ಲ ಆಸ್ಪತ್ರೆಯೊಂದಿಗೆ ಸಂವಹನ ನಡೆಸುತ್ತಿದ್ದೇವೆ.

ಕೋವಿಡ್ 19 ಸೋಂಕಿತರ ಜತೆಗೆ ಇತರೆ ರೋಗಿಗಳ ಚಿಕಿತ್ಸೆ ನೀಡುವ ಅಗತ್ಯತೆ ಹೆಚ್ಚಿದೆ. ರೋಗ ಲಕ್ಷಣವಿಲ್ಲದ ಸೋಂಕಿತರನ್ನು ಕೋವಿಡ್ 19 ಕೇರ್ ಸೆಂಟರ್ಗೆ ಸ್ಥಳಾಂತರಿಸಿ ಅಲ್ಲಿಯೇ ಐಸೋಲೇಷನ್ ಮಾಡಬಹುದು. ಇದರಿಂದ ಆಸ್ಪತ್ರೆಗಳು, ಅಲ್ಲಿನ ಹಾಸಿಗೆಗಳು ಇತರೆ ರೋಗಿಗಳಿಗೆ ಉಪಯೋಗವಾಗುತ್ತದೆ.