ಉಪಚುನಾವಣೆಗೆ ಕಾಂಗ್ರೆಸ್​ನಿಂದ ಅಖಾಡಕ್ಕಿಳಿಯುವ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟ; ಭಾರಿ ಸಂಚು ನಡೆಸಿ ಚುನಾವಣೆಗೆ ಸಜ್ಜಾದ ಕಾಂಗ್ರೆಸ್.!

0
141

ರಾಜ್ಯದಲ್ಲಿ ಮತ್ತೆ ರಂಗೇರುತ್ತಿರುವ ಉಪ ಚುನಾವಣೆಗೆ ಕಾಂಗ್ರೆಸ್ ಬಿಜೆಪಿ ಸಜ್ಜಾಗುತ್ತಿದ್ದು, ಈಗಾಗಲೇ ಕಾಂಗ್ರೆಸ್ 10 ಕ್ಷೇತ್ರಗಳ ಕುಸ್ತಿ ಪಟುಗಳನ್ನು ತಯಾರಿ ಮಾಡಿ ಅಂತಿಮ ಪಟ್ಟಿಯನ್ನು ಹೊರಡಿಸಿದ್ದು, ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಯಾವಾಗ ಎನ್ನುವ ಕೂತುಹಲ ಮೂಡಿಸಿದೆ, ಆದರೆ ಅನರ್ಹ ಶಾಸಕರ ಅರ್ಜಿ ವಿಚಾರಣೆಯ ಫಲಿತಾಂಶವನ್ನು ನೋಡಿಕೊಂಡು ಟಿಕೆಟ್ ಹಂಚಿಕೆ ಮಾಡುವ ಬಗ್ಗೆ ಯೋಚಿಸುತ್ತಿರುವ ಬಿಜೆಪಿಯಲ್ಲೇ ಇದೀಗ ಭಿನ್ನಮತ ಭುಗಿಲೇಳುತ್ತಿದೆ. ಅನರ್ಹರಿಗೆ ಮೀಸಲಿಟ್ಟಿದ್ದ ಕ್ಷೇತ್ರಗಳಲ್ಲಿ ಬಿಜೆಪಿ ನಾಯಕರು ಟಿಕೆಟ್​ಗಾಗಿ ಲಾಬಿ ನಡೆಸುತ್ತಿರುವುದು ಸಿಎಂ ಬಿಎಸ್​ ಯಡಿಯೂರಪ್ಪನವರಿಗೆ ತಲೆನೋವಾಗಿ ಪರಿಣಮಿಸಿದೆ.

Also read: ಮತ್ತೆ 6 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ! ಹಿಂದೆ ಇದ್ದ ಕಾನೂನನ್ನು ಮತ್ತೆ ಜಾರಿಗೆ ತರಲು ಮುಂದಾದ ಸರ್ಕಾರ.!

ಕಾಂಗ್ರೆಸ್ ಅಂತಿಮ ಪಟ್ಟಿ?

ಹೌದು ರಾಜ್ಯದ 15 ಕ್ಷೇತ್ರಗಳಿಗೆ ಉಪಚುನಾವಣೆ ಹಿನ್ನೆಲೆ ರಾಜ್ಯ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ನಡೆಸಿದ್ದು, 15 ಕ್ಷೇತ್ರಗಳಲ್ಲಿ 10 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದೆ ಉಳಿದ 5 ಕ್ಷೇತ್ರಗಳಲ್ಲಿ 2 ರಿಂದ 3 ಟಿಕೆಟ್ ಅಭ್ಯರ್ಥಿಗಳು ಟಿಕೆಟ್ ಪಡೆಯುವ ರೇಸ್‍ನಲ್ಲಿದ್ದಾರೆ. ಅದರಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷಯ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸೇರಿದಂತೆ ಹಲವು ಹಿರಿಯ ಮುಖಂಡರು ಭಾಗಿಯಾಗಿ ಸಭೆಯಲ್ಲಿ ಚರ್ಚೆ ನಡೆಸಿ 10 ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮಗಳಿಸಿದ್ದಾರೆ. ಅನರ್ಹ ಶಾಸಕರ ಬಗ್ಗೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವುದರಿಂದ ನ್ಯಾಯಾಲಯದ ಬೆಳವಣಿಗೆಗಳ ಬಳಿಕ ಚರ್ಚೆ ನಡೆಸಿ ಪಟ್ಟಿಯನ್ನ ಹೈಕಮಾಂಡ್ ಗೆ ರವಾನಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.

Also read: ನೀವೂ ಬ್ರೂಕ್ ಬಾಂಡ್ ರೆಡ್ ಲೇಬಲ್, ತ್ರೀ ರೋಸಸ್‍ ಬ್ರಾಂಡ್ ಟೀ ಕುಡಿಯುತ್ತಿರಾ? ಹಾಗಾದ್ರೆ ಅದೆಲ್ಲವೂ ನಕಲಿ ಟೀ ಪೌಡರ್ ಅಂತೆ, ಹೇಗೆ ಅಂತ ಮಾಹಿತಿ ನೋಡಿ.!

ಯಾವ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್?

ಉಪಚುನಾವಣೆಗೆ ನಾಮಪತ್ರ ಸಲ್ಲಿಸಲು ಇನ್ನು ನಾಲ್ಕೇ ದಿನಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಕಾಂಗ್ರೆಸ್​​ ಪಕ್ಷದ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಹೊರಬಿದ್ದಿದೆ. ಗೋಕಾಕ್​ ಕ್ಷೇತ್ರ ಮತ್ತೆ ಜಾರಕಿಹೊಳಿ ಅವರ ಪಾಲಿಗೆ ಬಂದಿದೆ. ಈ ಬಾರಿ ಗೋಕಾಕ್​ನಿಂದ ಲಖನ್ ಜಾರಕಿಹೊಳಿ ಸ್ಪರ್ಧೆಗಿಳಿಯುವುದು ಪಕ್ಕಾ ಆಗಿದೆ. ಒಂದುವೇಳೆ ಸುಪ್ರೀಂಕೋರ್ಟ್​ ಅನರ್ಹ ಶಾಸಕರಿಗೆ ಈ ಬಾರಿಯ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಅನುಮತಿ ನೀಡಿದರೆ ಗೋಕಾಕ್​ನಲ್ಲಿ ಅಣ್ಣ-ತಮ್ಮಂದಿರಾದ ರಮೇಶ್ ಜಾರಕಿಹೊಳಿ- ಲಖನ್ ಜಾರಕಿಹೊಳಿ ನಡುವೆ ನೇರ ಸ್ಪರ್ಧೆ ಏರ್ಪಡಲಿದೆ.

Also read: ಮಾಜಿ ರಾಜ್ಯಪಾಲರು, ಸಿಎಂ ಸೇರಿ ಉನ್ನತ ಅಧಿಕಾರಿಗಳ HD ಸೆಕ್ಸ್ ವೀಡಿಯೋ ಹಾರ್ಡ್ ಡಿಸ್ಕ್ ಪತ್ತೆ, ಬಾಲಿವುಡ್ ನಟಿಯರಿಂದ ನಡೆದಿದೆ ದೊಡ್ಡ ಮಟ್ಟದ ಹನಿಟ್ರ್ಯಾಪ್.!

ಕೆಆರ್ ಪೇಟೆ-ಕೆಬಿ ಚಂದ್ರಶೇಖರ್, ಗೋಕಾಕ್-ಲಖನ್ ಜಾರಕಿಹೊಳಿ, ಹೊಸಕೋಟೆ-ಪದ್ಮಾವತಿ ಸುರೇಶ್, ಕೆಆರ್ ಪುರಂ-ನಾರಾಯಣಸ್ವಾಮಿ, ಕಾಗವಾಡ-ಪ್ರಕಾಶ್ ಹುಕ್ಕೇರಿ, ರಾಣಿ ಬೆನ್ನೂರು-ಕೆ.ಬಿ.ಕೋಳಿವಾಡ, ಹೊಸಕೋಟೆ-ಸೂರ್ಯ ನಾರಾಯಣರೆಡ್ಡಿ, ಹಿರೇಕೆರೂರು- ಬನ್ನಿಕೋಡ್, ಮಹಾಲಕ್ಷ್ಮಿ ಲೇಔಟ್-ಶಿವರಾಜ್ ಕಣಕ್ಕೆ ಇಳಿಯುವುದು ಬಹುತೇಕ ಖಚಿತ ಎನ್ನಲಾಗಿದ್ದು, ಉಳಿದಂತಹ ಕ್ಷೇತ್ರಗಳಾದ ಯಶವಂತಪುರ ಸೇರಿ 5 ಸ್ಥಾನಗಳಿಗೆ ಎರಡರಿಂದ, ಮೂವರು ಅಭ್ಯರ್ಥಿಗಳಲ್ಲಿ ಪೈಪೋಟಿ ಇದೆ ಎಂಬ ಮಾಹಿತಿ ಮಾಹಿತಿ ಲಭಿಸಿದೆ. ಸಭೆ ಬಳಿಕ ಮಾತನಾಡಿದ ರಾಜ್ಯ ಉಸ್ತುವಾರಿ ವೇಣುಗೋಪಾಲ್ ಅವರು, ಬಿಜೆಪಿಯನ್ನು ಚುನಾವಣೆಯಲ್ಲಿ ಮಣಿಸಲು ಕಾಂಗ್ರೆಸ್ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಸಭೆ ನಡೆಸಿದ್ದು, ಸಭೆಗೆ ವೈಯಕ್ತಿಕ ಕಾರಣದಿಂದ ಮಾಜಿ ಡಿಸಿಎಂ ಪರಮೇಶ್ವರ್ ಗೈರಾಗಿದ್ದಾರೆ. ಇದನ್ನ ವಿಶೇಷ ಸುದ್ದಿ ಮಾಡುವ ಅಗತ್ಯವಿಲ್ಲ ಎಂದು ಹೇಳಿದರು.