ಮೈತ್ರಿ ಸರ್ಕಾರ ಪತನ; ದೋಸ್ತಿ ಸರ್ಕಾರದ 13 ಶಾಸಕರು ರಾಜೀನಾಮೆ? ಸರ್ಕಾರ ಉರುಳಿಸಲು ಕಾರಣವಾಯಿತಾ IMA ಪ್ರಕರಣ?

0
209

ರಾಜ್ಯದಲ್ಲಿ ಮೈತ್ರಿ ಸರ್ಕಾರ ಪತನದ ಕುರಿತು ಹಲವು ಹೊಸ ಬೆಳವಣಿಗೆಗಳು ಕೇಳಿಬರುತ್ತಿದ್ದು ಸಂಜೆವೇಳೆಗೆ ದೋಸ್ತಿ ಮುರಿದು ಬಿಳ್ಳುವುದು ಬಹುತೇಕ ಎನ್ನುವ ಸುದ್ದಿ ಹರಿದಾಡುತ್ತಿದೆ. ಈಗಾಗಲೇ ಕಾಂಗ್ರೆಸ್ ಶಾಸಕ ಆನಂದ ಸಿಂಗ್ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಮತ್ತೆ ರಾಜೀನಾಮೆ ಗಾಳಿ ಎದಿದ್ದು ಸುಮಾರು 13 ಶಾಸಕರು ರಾಜೀನಾಮೆ ನೀಡುವ ಕುರಿತು ಸುದ್ದಿ ಹರಡಿದ್ದು ಸಂಜೆ ವೇಳೆಗೆ ಮೈರ್ತಿ ಬಿಳ್ಳುವ ಲಕ್ಷಣಗಳು ಕಂಡು ಬರುತ್ತಿವೆ. ಬಂಡಾಯಗಾರರ ಪಟ್ಟಿಯಲ್ಲಿ ಬೆಂಗಳೂರಿನ ಐವರು ಶಾಸಕರ ಹೆಸರೂ ಇದೆ ಎಂಬುದಾಗಿ ತಿಳಿದುಬಂದಿದೆ.

13 ಶಾಸಕರು ರಾಜೀನಾಮೆ?

ಹೌದು ರಾಜ್ಯ ರಾಜಕಾರಣದಲ್ಲಿ ಸ್ಫೋಟಕ ತಿರುವು ಕಾಣಿಸಿಕೊಂಡಿದ್ದು, ಬಹುದಿನಗಳಿಂದ ಅಸಮಾಧಾನಗೊಂಡಿದ್ದ ದೋಸ್ತಿ ಪಕ್ಷದ 13 ಮಂದಿ ಭಿನ್ನಮತೀಯ ಅತೃಪ್ತ ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ದೊಡ್ಡ ಅಲೆಯನ್ನೇ ಹಬ್ಬಿಸಿದ್ದು, ಒಂದು ವೇಳೆ ಈ ಎಲ್ಲ ಶಾಸಕರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟರೆ ಮೈತ್ರಿ ಸರ್ಕಾರ ಇಕ್ಕಟ್ಟಿಗೆ ಸಿಲುಕಲಿದೆ. 12ರಂದು ಅಧಿವೇಶನ ಆರಂಭವಾಗುವುದರೊಳಗೆ ರಾಜೀನಾಮೆ ನೀಡಲು 13 ಶಾಸಕರು ಮುಂದಾಗಿದ್ದಾರೆ ಎನ್ನುವುದು ವಿಧಾನಸೌಧದಲ್ಲಿ ಕೇಳಿಬರುತ್ತಿದೆ.

ರಾಜೀನಾಮೆ ಪಟ್ಟಿಯಲ್ಲಿರುವ ಶಾಸಕರು

ಶಾಸಕರಾದ ರಾಮಲಿಂಗಾರೆಡ್ಡಿ(ಬಿಟಿಎಂ ಲೇಔಟ್), ಸೌಮ್ಯರೆಡ್ಡಿ (ಜಯನಗರ), ಮಹೇಶ್ ಕುಮಟಳ್ಳಿ(ಅಥಣಿ), ಬಿ.ಸಿ.ಪಾಟೀಲ್(ಹಿರೇಕೆರೂರು), ಪ್ರತಾಪ್‍ಗೌಡ ಪಾಟೀಲ್(ಮಸ್ಕಿ), ರಮೇಶ್ ಜಾರಕಿಹೊಳಿ(ಗೋಕಾಕ್), ಎಸ್.ಟಿ.ಸೋಮಶೇಖರ್(ಯಶವಂತಪುರ), ಎಚ್.ವಿಶ್ವನಾಥ್(ಹುಣಸೂರು), ನಾರಾಯಣಗೌಡ(ಕೆ.ಆರ್.ಪೇಟೆ), ಶಿವರಾಮ್ ಹೆಬ್ಬಾರ್(ಯಲ್ಲಪುರ), ಸುಬ್ಬಾರೆಡ್ಡಿ (ಬಾಗೇಪಲ್ಲಿ), ರೋಷನ್ ಬೇಗ್( ಶಿವಾಜಿನಗರ), ನಾಗೇಂದ್ರ(ಬಳ್ಳಾರಿ ಗ್ರಾಮಾಂತರ) ಅವರುಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ. ವಿಶೇಷವೆಂದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ಬಹುತೇಕರು ಸಮನ್ವಯ ಸಮಿತಿ ಅಧ್ಯಕ್ಷ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬೆಂಬಲಿಗರು. ಕಳೆದ ರಾತ್ರಿ ಈ ಎಲ್ಲ ಶಾಸಕರು ರಹಸ್ಯ ಸ್ಥಳವೊಂದರಲ್ಲಿ ಸಭೆ ಸೇರಿ ಮುಂದಿನ ರಾಜಕೀಯ ಬೆಳವಣಿಗೆಗಳ ಕುರಿತಂತೆ ಚರ್ಚೆ ನಡೆಸಿದ್ದಾರೆ.

ಸಿಎಂ ಕುರ್ಚಿಯಿಂದ ಇಳಿಸಲು ನಡೆದ ಸಂಚು?

ಈ ಸಾಮೂಹಿಕ ರಾಜೀನಾಮೆಗೂ IMA ಬಹುಕೋಟಿ ವಂಚನೆ ಪ್ರಕರಣಕ್ಕೂ ಗಾಢವಾದ ನಂಟಿದೆ. IMA ವಂಚನೆ ಪ್ರಕರಣದಲ್ಲಿ ಕಾಂಗ್ರೆಸ್‌ನ ಪ್ರಭಾವಿ ಸಚಿವರೊಬ್ಬರ ಬಂಧನಕ್ಕೆ ಸಿಎಂ ಎಚ್.ಡಿ. ಕುಮಾರಸ್ವಾಮಿ ಆದೇಶ ನೀಡಿರುವುದೇ ಕಾರಣ ಎಂದು ಹೇಳಲಾಗುತ್ತಿದೆ. ನಾನು ಅಮೆರಿಕಾದಿಂದ ವಾಪಾಸಾಗುವಾಗ ‘ಆ ಸಚಿವರು’ ಕಂಬಿ ಹಿಂದಿರಬೇಕು ಎಂಬ ಎಚ್ ಡಿಕೆ ಆದೇಶ, ಸಚಿವರನ್ನು ಕೆರಳಿಸಿದೆ. ರಾತೋರಾತ್ರಿ ಸರಣಿ ಸಭೆಗಳನ್ನು ನಡೆಸಿದ ‘ಆ ಸಚಿವರು’ ಕೊನೆಗೆ ಬಿಜೆಪಿ ನಾಯಕರ ನಿವಾಸಕ್ಕೆ ತೆರಳಿ ಸುದೀರ್ಘ ಸಭೆ ನಡೆಸಿದ್ದಾರೆ. ತನ್ನ ಬಂಧನದ ಆದೇಶ ನೀಡಿರುವ ಸಿಎಂ ಅವರನ್ನು ‘ಮಾಜಿ ಸಿಎಂ’ ಮಾಡಿ ಬಿಡ್ಬೇಕು, ಅಮೆರಿಕಾದಿಂದ ವಾಪಾಸಾಗುವ ಮುನ್ನ ಹೇಗಾದರೂ ಸರ್ಕಾರ ಪತನ ಮಾಡಬೇಕು ಎಂದು ಸಂಚು ನಡೆಸಿದ್ದಾರೆ ಎನ್ನುವ ಸುದ್ದಿ ಹರಡಿದೆ.