ಸಿಎಲ್‍ಪಿ, ಕೆಪಿಸಿಸಿ ಸ್ಥಾನಕ್ಕೆ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ರಾಜೀನಾಮೆ; ಮುಂದಿನ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಜನಾರ್ದನ ಪೂಜಾರಿ ಹೇಳಿಕೆ.!

0
254

ಉಪಚುನಾವಣೆಯಲ್ಲಿ ಭಾರಿ ಸೋಲು ಕಂಡ ಕಾಂಗ್ರೆಸ್ ಪಕ್ಷದ ನಾಯಕ ಮಾಜಿ ಮುಖ್ಯಮಂತ್ರಿ, ಸಿದ್ಧರಾಮಯ್ಯ ವಿಧಾನಸಭೆಯ ಪ್ರತಿಪಕ್ಷ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಏಕೆಂದರೆ ಲೋಕಸಭೆ ಚುನಾವಣೆಯಲ್ಲಿ ಭಾರಿ ಸೋಲು ಅನುಭವಿಸಿದ ಕಾಂಗ್ರೆಸ್ ಪಕ್ಷ ಮತ್ತೆ ಉಪಚುನಾವಣೆಯಲ್ಲಿ 15 ಕ್ಷೇತ್ರಗಳಲ್ಲಿ ಬರಿ ಎರಡು ಕ್ಷೇತ್ರ ಗೆದ್ದು ಹೀನಾಯ ಸೋಲಿನ ಹೊಣೆ ಹೊತ್ತು ಮಾಜಿ ಸಿಎಂ ಸಿದ್ದರಾಮಯ್ಯನವರು ಸಿಎಲ್‍ಪಿ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಿದರೆ, ದಿನೇಶ್ ಗುಂಡೂರಾವ್ ಅವರು ಕಾಂಗ್ರೆಸ್​ ಶಾಸಕಾಂಗ ನಾಯಕ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
< img src="http://kannada.thenewsism.com/wp-content/uploads/2019/12/Congress-routed-in-state-Siddu-Dinesh-Gundurao-resign-01.jpg" alt="" width="700" height="350" class="alignnone size-full wp-image-67904" />

Also read: ನಿತ್ಯಾನಂದನಿಗೆ ಪ್ರಧಾನಿ ಮೋದಿ ತಲೆ ಬಾಗಿದ ಫೋಟೋ ವೈರಲ್; ಅತ್ಯಾಚಾರಿಗೆ ತಲೆ ಬಾಗಿಸಿದರೆ ಅವರ ತಲೆಯನ್ನು ಪರೀಕ್ಷಿಸಬೇಕಾಗುತ್ತದೆ. ನಟ ಸಿದ್ಧಾರ್ಥ್.!

ಸಿದ್ದರಾಮಯ್ಯ ರಾಜೀನಾಮೆ?

ಹೌದು ಉಪ ಚುನಾವಣೆಯಲ್ಲಿ ಕಾಂಗ್ರೆಸ್ 15ರಲ್ಲಿ ಕೇವಲ 2 ಕ್ಷೇತ್ರಗಳಲ್ಲಿ ಮಾತ್ರ ಜಯಗಳಿಸಿದ್ದು, ಚುನಾವಣೆಯ ಉಸ್ತುವಾರಿ ಹೊತ್ತಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ವಿಪಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಫಲಿತಾಂಶದಿಂದ ಬೇಸರಗೊಂಡಿರುವ ಅವರು ನಿರಾಶರಾಗಿದ್ದಾರೆ ಜೊತೆಯಲ್ಲೇ ಹತಾಶರೂ ಆಗಿದ್ದಾರೆ. ಹೀಗಾಗಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲು ನಿರ್ಧರಿಸಿದ್ಧಾರೆ. ಉಪ ಚುನಾವಣಾ ಫಲಿತಾಂಶದ ಬಳಿಕ ಸುದ್ದಿಗೋಷ್ಠಿ ನಡೆಸಿದ ಸಿದ್ದರಾಮಯ್ಯ, ಈ ವಿಚಾರ ಪ್ರಕಟಿಸಿ ಮಾತನಾಡಿದ ಅವರು. ಮತದಾರರು ನೀಡಿರುವ ತೀರ್ಪನ್ನು ನಾನು ಒಪ್ಪಿಕೊಂಡಿದ್ದೇನೆ. ಕುದುರೆ ವ್ಯಾಪಾರಕ್ಕೆ ಒಳಗಾಗಿದ್ದವರಿಗೆ ಜನರು ಶಿಕ್ಷೆ ನೀಡುತ್ತಾರೆಂಬ ನಿರೀಕ್ಷೆ ಇತ್ತು.

Also read: ಜನರು ಪಕ್ಷಾಂತರಿಗಳನ್ನು ಒಪ್ಪಿಕೊಂಡಿದ್ದಾರೆ. ನಾವು ಸೋಲನ್ನು ಒಪ್ಪಿಕೊಂಡಿದ್ದೇವೆ, ಆದರೆ, ನಿರಾಸರಾಗುವುದಿಲ್ಲ ಡಿ.ಕೆ ಶಿವಕುಮಾರ್.!

ಇಂದು ನನ್ನ ನಿರೀಕ್ಷೆ ಹುಸಿಯಾಗಿದ್ದು, ಜನಾದೇಶವನ್ನು ಒಪ್ಪಿಕೊಂಡಿದ್ದೇನೆ. ಕಾಂಗ್ರೆಸ್ ಶಾಸಕಾಂಗ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ವಿಪಕ್ಷ ನಾಯಕನಾಗಿ ಮುಂದುವರಿಯುತ್ತಿದ್ದೇನೆ. ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯವರಿಗೆ ರಾಜೀನಾಮೆ ನೀಡಿದ್ದೇನೆ ಎಂದು ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಆದ್ರೆ ಸಿದ್ದರಾಮಯ್ಯನವರು ಸಿಎಲ್ ಪಿ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ವಿಪಕ್ಷ ನಾಯಕರಾಗಿ ಮುಂದುವರಿಯಲಿದ್ದಾರೆ. ಇದರ ಜೊತೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದಾರೆ. ಇವರಿಬ್ಬರೂ ತಮ್ಮ ರಾಜೀನಾಮೆ ಪತ್ರವನ್ನು ಪಕ್ಷದ ಹೈಕಮಾಂಡ್​ಗೆ ಸಲ್ಲಿಸಿದ್ದಾರೆ. ಆದರೆ, ಕಾಂಗ್ರೆಸ್ ಹೈಕಮಾಂಡ್ ಈ ರಾಜೀನಾಮೆಯನ್ನು ಅಂಗೀಕರಿಸಿಲ್ಲ ಎಂಬ ಮಾಹಿತಿ ತಿಳಿದುಬಂದಿದೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆ ಶಿವಕುಮಾರ್​ ಆಯ್ಕೆ?

Also read: 12, ಕ್ಷೇತ್ರಗಳಲ್ಲಿ ಬಿಜೆಪಿಗೆ ಭರ್ಜರಿ ಗೆಲುವು; ಕರ್ನಾಟಕದ ಮತದಾರನ್ನು ಕುರಿತು ಪ್ರಧಾನಿ ಮೋದಿ ಹೇಳಿದ್ದೇನು??

ದಿನೇಶ್​ ಗುಂಡೂರಾವ್​ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ, ಮಂಗಳೂರಿನಲ್ಲಿ ಮಾತನಾಡಿದ ಜನಾರ್ದನ ಪೂಜಾರಿ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಡಿಕೆ ಶಿವಕುಮಾರ್​ ಉತ್ತಮ ಆಯ್ಕೆ ಎಂದು ಹೇಳಿದ್ಧಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ಉತ್ತಮ ಆಯ್ಕೆ. ಡಿಕೆಶಿ ಕೆಪಿಸಿಸಿ ಅಧ್ಯಕ್ಷರಾದರೆ ಪಕ್ಷಕ್ಕೆ ಒಳ್ಳೆಯದಾಗುತ್ತದೆ. ಇದು ನನ್ನ ಅನುಭವದ ಮಾತು. ಡಿಕೆ ಶಿವಕುಮಾರ್​ ಧೈರ್ಯವಂತ. ಯಾರಿಗೂ ಕೂಡ ಹೆದರುವುದಿಲ್ಲ ಎಂದು ಜನಾರ್ದನ ಪೂಜಾರಿ ಡಿಕೆಶಿ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಡಿಕೆಶಿ ವಿರುದ್ಧ ನಾನು ಬೈದಿದ್ದರೂ ತಿದ್ದಿಕೊಂಡಿದ್ದೇನೆ. ಜೈಲಿಗೆ ತುಂಬಾ ಜನ ಹೋಗಿ ಬಂದಿದ್ದಾರೆ, ಅದೊಂದು ಅನುಭವ. ಜೈಲಿಗೆ ಹೋಗಿ ಬಂದ ಬಳಿಕ ಡಿಕೆ ಶಿವಕುಮಾರ್ ಬದಲಾಗಿದ್ದಾರೆ ಎಂದು ಹೇಳಿದ್ದು ಮುಂದಿನ ಡಿಕೆಶಿ ಕೆಪಿಸಿಸಿ ಅಧ್ಯಕ್ಷರಾಗುವುದು ಖಚಿತ ಎನ್ನುವ ಮಾಹಿತಿ ಇದೆ.