ಬಿಗ್ ಬ್ರೇಕಿಂಗ್; ನಾಳೆಯಿಂದ ಎಲ್ಲಾ ಥಿಯೇಟರ್, ಮಾಲ್, ಬಾರ್, ಪಬ್, ಕಾಲೇಜುಗಳು ಒಂದು ವಾರಗಳ ಕಾಲ ಬಂದ್; ಸಿಎಂ ಯಡಿಯೂರಪ್ಪ ಘೋಷಣೆ.!

0
133

ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು ಹೆಚ್ಚಾದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಆರೋಗ್ಯ ಸಚಿವರ, ವೈದ್ಯರು ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆ ನಡೆಸಿ. ವೈರಸ್ ಸೋಂಕು ಮತ್ತಷ್ಟು ಜನರಿಗೆ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನ ಎಲ್ಲಾ ಥಿಯೇಟರ್, ಮಾಲ್, ಬಾರ್, ಪಬ್ ಒಂದು ವಾರಗಳ ಕಾಲ ಬಂದ್ ಮಾಡುವಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ. ಅಷ್ಟೇ ಅಲ್ಲದೆ ಎಲ್ಲ ಸಮಾರಂಭಗಳು ರಾಜ್ಯದ ಎಲ್ಲ ವಿವಿಗಳು, ಕಾಲೇಜುಗಳು ಬಂದ್ ಆಗಲಿದೆ.

ಒಂದು ವಾರ ಎಲ್ಲಾ ಬಂದ್?

ಹೌದು ರಾಜ್ಯದಲ್ಲಿ ಕೊರೊನಾ ವೈರಸ್ ವ್ಯಕ್ತಿ ಬಲಿಯಾದ ನಂತರ ಮತ್ತಷ್ಟು ಎಚ್ಚರಗೊಂಡ ರಾಜ್ಯ ಸರ್ಕಾರ. ತುರ್ತು ಸಭೆ ನಡೆಸಿ. ಸಭೆಯ ಬಳಿಕ ಮಾಲ್, ಚಿತ್ರ ಮಂದಿರ, ಮದುವೆ, ಸಮ್ಮರ್, ನೈಟ್ ಕ್ಲಬ್, ಸ್ವಿಮ್ಮಿಂಗ್ ಫುಲ್, ನಿಶ್ಚಿತಾರ್ಥ, ನಾಮಕರಣ, ಸಭೆ ಸಮಾರಂಭ ಜಾತ್ರೆ ಎಲ್ಲ ಒಂದು ವಾರ ಕಾಲ ನಿಲ್ಲಿಸಲು ಸೂಚನೆ ನೀಡಲಾಗಿದೆ. ಎಲ್ಲ ವಿವಿಗಳು ಬಂದ್ ಆಗಲಿದ್ದು, ಸಾಧ್ಯವಾದಷ್ಟು ಪ್ರವಾಸ ಮಾಡುವುದನ್ನು ರದ್ದು ಮಾಡಬೇಕೆಂದು ಸರ್ಕಾರ ಕೇಳಿಕೊಂಡಿದೆ. ಈ ಸಭೆಯ ಬಳಿಕ ಮಾತನಾಡಿದ ಅವರು, ನಿಗಧಿಯಂತೆ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯಲಿದೆ. ಕೊರೊನಾ ತಡೆಯಲು ಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದರು.

ವಿಶ್ವ ವಿದ್ಯಾಲಯಗಳಿಗೆ 1 ವಾರ ರಜೆ?

ಇನ್ನೂ ಬೆಂಗಳೂರಿನಲ್ಲಿ ನಾಳೆಯಿಂದ ಥಿಯೇಟರ್, ಮಾಲ್, ಬಾರ್, ಪಬ್ ಒಂದು ವಾರಗಳ ಮಟ್ಟಿಗೆ ಕ್ಲೋಸ್ ಮಾಡಲು ಆದೇಶಿಸಲಾಗಿದೆ. ರಾಜ್ಯದ ವಿಶ್ವ ವಿದ್ಯಾಲಯಗಳಿಗೆ 1 ವಾರ ವಿಶ್ವವಿದ್ಯಾಲಯಗಳಿಗೆ ರಜೆ. ಮದುವೆ, ಜಾತ್ರೆ, ಎಲ್ಲ ರೀತಿಯ ಸಾರ್ವಜನಿಕ ಸಮಾರಂಭಗಳನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ. ಅಷ್ಟೇ ಅಲ್ಲದೆ ಎಲ್ಲಾ ಮಾದರಿಯ ಕ್ರೀಢೆಗಳಿಗೂ ನಿಷಿದ್ಧ ಮಾಡಲಾಗಿದೆ. ರಾಜ್ಯಾಧ್ಯಂತ ಮದುವೆ ಕಾರ್ಯಕ್ರಮ ಬಂದ್ ಮಾಡಲಾಗಿದ್ದು, ವಿದೇಶ ಪ್ರವಾಸಕ್ಕೆ ತೆರಳದಂತೆ ಸೂಚನೆ ನೀಡಿದರು. ಇದೇ ಸಂದರ್ಭದಲ್ಲಿ ಕಲಬುರ್ಗಿಯಲ್ಲಿ 24 ಮಂದಿಗೆ ತಪಾಸಣೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಮತ್ತಷ್ಟು ಕೊರೊನಾ ವೈರಸ್ ಸೋಂಕು ಹರಡದಂತೆ ಕಟ್ಟೆಚ್ಚರ ವಹಿಸಲಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಕ್ರಮಗಳನ್ನು ರಾಜ್ಯ ಸರ್ಕಾರ ಕೈಗೊಂಡಿದೆ ಎಂಬುದಾಗಿ ಸ್ಪಷ್ಟ ಪಡಿಸಿದರು.

ಕರ್ನಾಟಕದಲ್ಲೂ ಐಪಿಎಲ್ ಪಂದ್ಯ ರದ್ದು?

ದೆಹಲಿಯಲ್ಲಿ ಆಯೋಜನೆಗೊಂಡಿದ್ದ ಎಲ್ಲ ಐಪಿಎಲ್ ಪಂದ್ಯವನ್ನು ರದ್ದುಗೊಳಿಸಲಾಗಿದೆ. ಕೊರೊನಾ ಭೀತಿ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ಮುಂಜಾಗೃತಾ ಕ್ರಮವಾಗಿ ಈ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ತಿಳಿಸಿದ್ದಾರೆ. ಸದ್ಯ ಕರ್ನಾಟಕದಲ್ಲೂ ಐಪಿಎಲ್ ಪಂದ್ಯ ರದ್ದಾಗುತ್ತಾ? ಎಂಬ ಅನುಮಾನ ಮೂಡಿದೆ. ಈ ಬಗ್ಗೆ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದು, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳನ್ನು ನಡೆಸಲು ಅನಿವಾರ್ಯ ಕಾರಣಗಳಿಂದ ಸಾಧ್ಯವಾಗುವುದಿಲ್ಲ ಎಂದು ತಿಳಿಸಲಾಗಿದೆ ಎಂದು ವರದಿಯಲ್ಲಿ ಹೇಳಿದೆ. ಮಾರಕ ಕೊರೋನಾ ವೈರಸ್ ಭಾರತಕ್ಕೆ ಕಾಲಿಟ್ಟ ಕಾರಣ ಈಗಾಗಲೇ ಅನೇಕ ಸಭೆ ಸಮಾರಂಭಗಳನ್ನು ಈಗಾಗಲೇ ರದ್ದು ಮಾಡಲಾಗಿದೆ. ಅಲ್ಲದೆ, ಸದ್ಯ ದೆಹಲಿ ಸರ್ಕಾರ ಹೊರಡಿಸಿರುವ ಹೊಸ ಆದೇಶದ ಪ್ರಕಾರ ಐಪಿಎಲ್ ಅಭಿಮಾನಿಗಳಿಗೂ ಶಾಕ್ ನೀಡಿದೆ.

Also read: ಕೊರೊನಾ, ಕಾಲರಾ ಭೀತಿ; ಬೆಂಗಳೂರಿನ ರಸ್ತೆ ಬದಿ ಆಹಾರ ಪದಾರ್ಥ ಮಾರಾಟ ಮಾಡುವುದಕ್ಕೆ ನಿರ್ಬಂಧ ಹೇರಿದ ರಾಜ್ಯ ಸರ್ಕಾರ.!