ಕೇಂದ್ರೀಯ ವಿಶ್ವವಿದ್ಯಾಲಯ ಬೋಧಕೇತರ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
103

ಉದ್ಯೋಗದ ನಿರೀಕ್ಷೆಯಲ್ಲಿ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯವು ಖಾಲಿ ಇರುವ 59 ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 5,2019ರೊಳಗೆ ಅರ್ಜಿ ಸಲ್ಲಿಸಬೇಕು.

Also read: ಗ್ರಾಮ ಪಂಚಾಯಿತಿ ಗ್ರೇಡ್ 2 ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ವಿದ್ಯಾರ್ಹತೆ: ಅಭ್ಯರ್ಥಿಗಳು ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯಿಂದ ಶೇ 50%ರಷ್ಟು ಅಂಕಗಳೊಂದಿಗೆ ಹೊಂದಿರಬೇಕು ಹಾಗೂ 10+2 / ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌ನಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿಯಲ್ಲಿ ಅನುಭವ ಪಡೆದ ಅಭ್ಯರ್ಥಿಗಳಿಗೆ ಹೆಚ್ಚು ಆದ್ಯತೆ ನೀಡಲಾಗುವುದು.

ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿರಬೇಕು. ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ಓದಿ ತಿಳಿಯಬಹುದು.

ವೇತನ ವಿವರ: ಹುದ್ದೆಗಳಿಗೆ ಅನುಗುಣವಾಗಿ ವೇತನ ನೀಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ /ಓಬಿಸಿ / ಹಿಂದುಳಿದ ಅಭ್ಯರ್ಥಿಗಳು 750/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದಾಗಿದ್ದು, ಅಧಿಕೃತ ವೆಬ್‌ಸೈಟ್‌ https://www.cuk.ac.in/ ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಕ ಅಕ್ಟೋಬರ್ 5,2019ರ ಒಳಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ: https://www.cuk.ac.in/ ಕ್ಲಿಕ್ ಮಾಡಿ.