ಮಾಜಿ ಸಚಿವ ಡಿಕೆ ಶಿವಕುಮಾರ್‌ ಬಂಧನದ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಹತ್ತಿದ ಹೋರಾಟದ ಬೆಂಕಿ; ಮುಂದೇನಾಗುತ್ತೆ??

0
169

ಕಾಂಗ್ರೆಸಿನ ಟ್ರಬಲ್ ಶೂಟರ್‌ ಡಿಕೆ ಶಿವಕುಮಾರ್‌ ಅವರನ್ನು ಬಂಧಿಸಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ, ಕನಕಪುರ, ನವದೆಹಲಿಯಲ್ಲಿ ಡಿಕೆಶಿ ಬೆಂಬಲಿಗರು ಹೋರಾಟಕ್ಕೆ ಇಳಿದಿದ್ದು. ಹಿನ್ನೆಲೆ ಇಂದು ರಾಮನಗರದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇಡಿ ರಾಜ್ಯವು ಕೆಂಡ ಮುಚ್ಚಿದ ಬೆಂಕಿಯಾಗಿದ್ದು. ksrtc ಬಸ್ ಬೆಂಕಿ ಹಚ್ಚಿದ್ದು, ಹಲವು ಬಸ್-ಗಳಿಗೆ ಕಲ್ಲು ತೂರಾಟ ನಡೆಸಿದ್ದು ರಾಮನಗರ, ಕನಕಪುರದಲ್ಲಿ ಸ್ಥಬ್ದ ವಾತಾವರಣ ಮೂಡಿದ್ದು ಹಾಸನ, ದಾವಣಗೇರಿ, ಬೆಂಗಳೂರು ಸೇರಿದಂತೆ ತೀವ್ರವಾಗಿ ಹೋರಾಟಕ್ಕೆ ಇಳಿದಿದ್ದು ಬಿಜೆಪಿ ಸರ್ಕಾರದ ವಿರುದ್ದ ಘೋಷಣೆಗಳು ಕೇಳಿಬರುತ್ತಿವೆ.

ಹೌದು ದೆಹಲಿ ನಿವಾಸದಲ್ಲಿ ಹಣ ಸಿಕ್ಕ ಪ್ರಕರಣ ಸಂಬಂಧ ಇಡಿ ಪ್ರಶ್ನೆಗೆ ಸರಿಯಾಗಿ ಉತ್ತರಿಸಿದ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿ 8.30ಕ್ಕೆ ಮಾಜಿ ಸಚಿವ, ಕರ್ನಾಟಕ ಕಾಂಗ್ರೆಸ್ ಆಪದ್ಬಾಂಧವ ಡಿಕೆ ಶಿವಕುಮಾರ್ ರನ್ನು ಬಂಧಿಸಿದೆ. ಡಿಕೆ ಶಿವಕುಮಾರ್ ಬಂಧನವಾಗುತ್ತಿದ್ದಂತೆ, ಮಾಜಿ ಸಚಿವರ ಬೆಂಬಲಿಗರು ದೆಹಲಿ ಸೇರಿದಂತೆ ರಾಜ್ಯದಲ್ಲಿ ಕೂಡ ರಾತ್ರಿಯೇ ಪ್ರತಿಭಟನೆ ನಡೆಸಿದರು. ಅಲ್ಲದೇ ಅಭಿಮಾನಿಗಳು ಬೀದಿಗಿಳಿದು ಬೆಂಕಿಹಚ್ಚಿ ಆಕ್ರೋಶ ಹೊರಹಾಕಿದರು. ಈ ವೇಳೆ ಕೆಲವೆಡೆ ಹಿಂಸಾಚಾರ ಕೂಡ ನಡೆಯಿತು. ರಾಮನಗರದಲ್ಲಿ ಡಿಕೆಶಿ ಅಭಿಮಾನಿಗಳಿ ಕೆಎಸ್‍ಆರ್ ಟಿಸಿಯ 1 ಬಸ್‍ಗೆ ಬೆಂಕಿ 4 ಬಸ್‍ಗಳ ಮೇಲೆ ಕಲ್ಲು ತೂರಿ ಆಕ್ರೋಶ ವ್ಯಕ್ತಪಡಿಸಿದರು.

ಈ ಪ್ರತಿಭಟನೆಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಎಂ.ಎಸ್ ಅರ್ಚನಾ ಅವರು ರಾಮನಗರ ಜಿಲ್ಲೆಯ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಿರುವುದಾಗಿ ಆದೇಶ ಹೊರಡಿಸಿದ್ದಾರೆ. ಡಿಕೆಶಿ ಅವರ ಬಂಧನವನ್ನು ಖಂಡಿಸಿ ಅವರ ಬೆಂಬಲಿಗರು, ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ದು, ಹಲವೆಡೆ ಹಿಂಸಾಚಾರ ಕೂಡ ನಡೆದಿದೆ. ಈ ಹಿನ್ನೆಲೆ ಮುಜಾಗೃತ ಕ್ರಮವಾಗಿ ಈ ಘಟನೆಗಳಿಂದ ವಿದ್ಯಾರ್ಥಿಗಳಿಗೆ ತೊಂದರೆ ಆಗಬಾರದೆಂದು ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಡಿಕೆಶಿ ಬಂಧನದ ಬಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ತಮ್ಮ ಹಿತಾಸಕ್ತಿಗಳಿಗೆ ಬಗ್ಗದ ಪ್ರತಿಪಕ್ಷದ ನಾಯಕರನ್ನು ಮಣಿಸಲು ಕೇಂದ್ರ ಸರ್ಕಾರ ವಿವಿಧ ಏಜೆನ್ಸಿಗಳನ್ನು ಅಕ್ರಮವಾಗಿ ಬಳಸುತ್ತಿರುವುದು ದೃಢಪಟ್ಟಿದೆ. ಹಬ್ಬಕ್ಕೂ ರಿಲೀಫ್ ಕೊಡದೇ ಸತತ ವಿಚಾರಣೆ ನಡೆಸಿ ವಿಚಾರಣೆಗೆ ಸಹಕರಿಸುತ್ತಿಲ್ಲ ಎಂಬ ನೆಪ ಹೇಳಿ ಬಂಧಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಟ್ವೀಟ್ ಮಾಡಿದ್ದಾರೆ.

ಸಿದ್ದರಾಮಯ್ಯ:

ಡಿಕೆ ಶಿವಕುಮಾರ್ ಬಂಧನ ಅತ್ಯಂತ ಖಂಡನೀಯ ಕೃತ್ಯ. ರಾಜಕೀಯ ಎದುರಾಳಿಗಳನ್ನು ರಾಜಕೀಯವಾಗಿ ಮುಗಿಸಲು ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಶಿವಕುಮಾರ್ ಗೆ ಕಾಂಗ್ರೆಸ್ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಹದ್ಯೋಗಿ ಡಿ.ಕೆ.ಶಿವಕುಮಾರ್ ಅವರ ಬಂಧನ ಅತ್ಯಂತ ಖಂಡನೀಯ ಕೃತ್ಯ. ರಾಜಕೀಯ ಎದುರಾಳಿಗಳನ್ನು ರಾಜಕೀಯವಾಗಿ ಎದುರಿಸಲಾಗದೆ ಅಧಿಕಾರ ದುರುಪಯೋಗದ ಮೂಲಕ ದಮನಿಸುವ ಯತ್ನ ಹೇಡಿತನದ್ದು. ಇಂತಹ ಕಷ್ಟದ ಕಾಲದಲ್ಲಿ ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ಶಿವಕುಮಾರ್ ಬೆಂಬಲಕ್ಕಿದೆ. ಎಂದು ಹೇಳಿದ್ದಾರೆ.

Also read: ಪ್ರವಾಹದಲ್ಲಿ ಜೀವ ಉಳಿಸಿಕೊಂಡು ಮನೆ ಕಾಗದ ಪತ್ರಗಳನ್ನೆ ಕಳೆದುಕೊಂಡ ಸಂತ್ರಸ್ತರಿಗೆ ಆಧಾರ್ ಇದ್ರೇನೆ ರೇಷನ್, ಪರಿಹಾರ ಚೆಕ್ ಕೊಡ್ತಾರಂತೆ! ಇದ್ಯಾವ ನ್ಯಾಯ??