ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆತರುವ ಎಲ್ಲಾ ಪ್ರಯತ್ನ ನಡೆಯುತ್ತಿದೆ. ದರ್ಶನ್ ಕಾಂಗ್ರೆಸ್ ಗೆ ಸೇರ್ಪಡೆ ಆಗಬೇಕಾ ನಿಮ್ಮ ಅಭಿಪ್ರಾಯವೇನು..!

1
835

ನಟ ದರ್ಶನ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೆಳೆಯಲು ಗಂಭೀರ ಪ್ರಯತ್ನಗಳು ಆರಂಭವಾಗಿದೆ. ಈ ಪ್ರಯತ್ನದಲ್ಲಿ ಮುಂಚೂಣಿಯಲ್ಲಿರುವುದು ಖುದ್ದು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಹಾಗೂ ರೆಬೆಲ್‌ಸ್ಟಾರ್ ಮತ್ತು ಮಾಜಿ ಸಚಿವ ಅಂಬರೀಶ್ ಹೈಕಮಾಂಡ್ ಮಟ್ಟದಲ್ಲೂ ಒಂದು ಸುತ್ತಿನ ಮಾತುಕತೆ ಮಾಡಿದ್ದಾರೆ ಎನ್ನಲಾಗಿದೆ.

ಎಲ್ಲವೂ ಕಾಂಗ್ರೆಸ್ ನಾಯಕರ ಲೆಕ್ಕಾಚಾರದಂತೆ ನಡೆದರೆ, ದರ್ಶನ್ ಶೀಘ್ರ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಬಹುದು. ಹಾಗಂತ ಅವರು 2018ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಬದಲಾಗಿ, ಅವರನ್ನು ಲೋಕಸಭೆಗೆ ಕಣಕ್ಕಿಳಿಸುವ ಚಿಂತನೆಯಿದೆ.

ಅದು- ರಾಜ್ಯ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಹಾಗೂ ಹಾಲಿ ಸಂಸದ ಪ್ರತಾಪ ಸಿಂಹ ಅವರ ಎದುರು. ದರ್ಶನ್ ಅವರು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಯಾಗುವ ಸಾಧ್ಯತೆ ಹೆಚ್ಚಿದೆ.

ಕರ್ನಾಟಕದ ದೊಡ್ಡ ‘ಸ್ಟಾರ್‌’’ ಚಾಲೆಂಜಿಂಗ್ ಸ್ಟಾರ್ ದರ್ಶನ್. ದರ್ಶನ್ ಅವರನ್ನು ಪಕ್ಷಕ್ಕೆ ತರುವ ಕುರಿತು ಈಗಾಗಲೇ ಪ್ರಯತ್ನ ಆರಂಭವಾಗಿದೆ. ಇದರ ಪರಿಣಾಮವಾಗಿಯೇ ಆರಂಭದಿಂದಲೂ ಕಾಂಗ್ರೆಸ್ ಪಕ್ಷದೊಂದಿಗೆ ಗುರುತಿಸಿಕೊಂಡಿರುವ ದರ್ಶನ್ ಅವರ ತಾಯಿ ಮೀನಾ ದರ್ಶನ್ ಅವರನ್ನು ಕೆಪಿಸಿಸಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ ಎನ್ನುತ್ತವೆ ಮೂಲಗಳು.

ಈ ದಿಸೆಯಲ್ಲಿ ಕಾರ್ಯಪ್ರವೃತ್ತರಾದ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಹಾಗೂ ನಟ ಅಂಬರೀಶ್ ಅವರು ಈಗಾಗಲೇ ದರ್ಶನ್ ಅವರ ಮನವೊಲಿಸುವ ಕಾರ್ಯಕ್ಕೆ ಇಳಿದಿದ್ದಾರೆ. ಇದುವರೆಗೂ ತಮ್ಮ ಸಂಪೂರ್ಣ ಒಪ್ಪಿಗೆಯನ್ನು ದರ್ಶನ್ ನೀಡದಿದ್ದರೂ, ಪಕ್ಷ ಸೇರುವ ಹಾಗೂ ಚುನಾವಣೆಗೆ ನಿಲ್ಲುವ ಕುರಿತು ನಿರಾಕರಣೆ ಮಾಡಿಲ್ಲ ಎಂದು ಕಾಂಗ್ರೆಸ್ ನ ಉನ್ನತ ಮೂಲಗಳು ತಿಳಿಸಿವೆ.