ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ: 5846 ಕಾನ್ಸ್ಟೇ‍ಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ…

0
275

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಸಿಬ್ಬಂದಿ ನೇಮಕ ಆಯೋಗವು (ಸ್ಟಾಫ್ ಸೆಲೆಕ್ಷನ್ ಕಮಿಷನ್) ದೆಹಲಿ ಪೊಲೀಸ್ ವಿಭಾಗದಲ್ಲಿ ಖಾಲಿ ಇರುವ ಕಾನ್ಸ್ಟೇ4ಬಲ್ (ಎಕ್ಸಿಕ್ಯೂಟಿವ್) ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಮೂಲಕ ಸೆಪ್ಟೆಂಬರ್, 07, 2020ರ ಒಳಗೆ ಅರ್ಜಿ ಸಲ್ಲಿಸಬೇಕು.

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು: ದೆಹಲಿ ಪೊಲೀಸ್ ವಿಭಾಗದಲ್ಲಿ ಖಾಲಿ ಇರುವ ಕಾನ್ಸ್ಟೇಿಬಲ್ (ಎಕ್ಸಿಕ್ಯೂಟಿವ್) ಹುದ್ದೆ. ಪುರುಷ ಮತ್ತು ಮಹಿಳೆ ಸೇರಿ ಒಟ್ಟು ಸುಮಾರು 5846 ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ: ಅಭ್ಯರ್ಥಿಯು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ ದ್ವಿತೀಯ ಪಿಯುಸಿ ತೇರ್ಗಡೆ ಹೊಂದಿರಬೇಕು. (2020 ರ ಸೆಪ್ಟೆಂಬರ್, 07 ಕ್ಕೆ ಅನ್ವಯವಾಗುವಂತೆ), ದೆಹಲಿ ಪೊಲೀಸ್‌ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ, ನಿವೃತ್ತಿ ಹೊಂದಿದ ಸಿಬ್ಬಂದಿಗಳ ಮಕ್ಕಳಿಗೆ ವಿದ್ಯಾರ್ಹತೆಯಲ್ಲಿ ವಿನಾಯಿತಿ ಇದ್ದು, ಪ್ರಥಮ ಪಿಯುಸಿ ತೇರ್ಗಡೆ ಹೊಂದಿರಬೇಕು. ಪುರುಷ ಅಭ್ಯರ್ಥಿಗಳು ದೈಹಿಕ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಯ ದಿನದಂದು ಕಡ್ಡಾಯವಾಗಿ ಚಾಲ್ತಿಯಲ್ಲಿರುವ ಚಾಲನಾ ಪರವಾನಿಗೆ (ಮೋಟಾರ್ ಸೈಕಲ್ ಅಥವಾ ಕಾರು) ಹೊಂದಿರಬೇಕು.

ವಯೋಮಿತಿ: ಅಭ್ಯರ್ಥಿಗಳು ಕನಿಷ್ಠ 18 ರಿಂದ ಗರಿಷ್ಠ 25 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರು. ಹಿಂದುಳಿದ ವರ್ಗದ ಅಭ್ಯರ್ಥಿಗಳು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವಿಧವೆಯರು, ಮಾಜಿ ಸೈನಿಕರು ಹಾಗೂ ದೆಹಲಿ ಪೊಲೀಸ್ ಇಲಾಖಾ ಅಭ್ಯರ್ಥಿಗಳು ಮತ್ತು ದೆಹಲಿ ಪೊಲೀಸ್ ಕರ್ತವ್ಯ ನಿರ್ವಹಿಸುತ್ತಿರುವ, ನಿವೃತ್ತಿ ಹೊಂದಿದ ಸಿಬ್ಬಂದಿಗಳ ಮಕ್ಕಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇದೆ..

ಆಯ್ಕೆ ಪ್ರಕ್ರಿಯೆ: ಅರ್ಹ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್, 07 2020

ಹೆಚ್ಚಿನ ಮಾಹಿತಿಗಾಗಿ:

https://ssc.nic.in ಕ್ಲಿಕ್ ಮಾಡಿ.

ದೂ.ಸಂ:080-25502520/ 9483862020.