ದೇವನಹಳ್ಳಿ ಕೋಟೆಯ ರಹಸ್ಯದ ಬಗ್ಗೆ ತಿಳಿದುಕೊಳ್ಳಿ!!

0
1887

ಜಗತ್ ಪ್ರಸಿದ್ಧ ದೇವನಹಳ್ಳಿ ಕೋಟೆ…

ರಾಜ್ಯ ರಾಜಧಾನಿ ಬೆಂಗಳೂರಿಗೆ ಕೇವಲ 35 ಕಿಲೋ ಮೀಟರ್ ದೂರದಲ್ಲಿರುವ ಊರು ದೇವನಹಳ್ಳಿ. ದೇವನಹಳ್ಳಿ ಇತಿಹಾಸ ಪ್ರಸಿದ್ಧವಾದ ಸ್ಥಳವಾದರೂ, ಜಗತ್ ಪ್ರಸಿದ್ದಿಯಾಗಿದ್ದು ಕೇವಲ ಐದಾರು ವರ್ಷದಿಂದೀಚೆಗೆ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ದೇವನಹಳ್ಳಿ ಒಂದು ಪುಟ್ಟ ಊರು. ಈ ಊರಿಗೆ ಖ್ಯಾತಿ ಬಂದಿದ್ದು ಮೈಸೂರು ಹುಲಿ ಟಿಪ್ಪು ಸುಲ್ತಾನರಿಂದ. 1,750ರ ನವೆಂಬರ್ 10ರಂದು ಟಿಪ್ಪು ಹುಟ್ಟಿದ್ದೇ ಈ ಪುಟ್ಟ ಊರಿನ ಚಿಕ್ಕದೊಂದು ಗುಡಿಸಿಲಿನಲ್ಲಿ.

source: oneindia.com

ದೇವನಹಳ್ಳಿ ಅತ್ಯಂತ ಪುರಾತನವಾದ ಊರಾಗಿದ್ದು, 14ನೇ ಶತಮಾನದಲ್ಲೇ ಇಲ್ಲಿ ಊರಿತ್ತು ಎಂದು ಶಾಸನಗಳು ಸಾರುತ್ತವೆ. ಈ ಊರಿನ ಹಿಂದಿನ ಹೆಸರು ದೇವನದೊಡ್ಡಿ. ಇಲ್ಲಿ 500 ವರ್ಷಗಳಷ್ಟು ಪುರಾತನವಾದ ಭದ್ರವಾದ ಹಾಗೂ ಆಮೆಯಾಕಾರದ ಸುಂದರ ಕೋಟೆ ಇದೆ. ಕಂಚಿಯಿಂದ ವಲಸೆ ಬಂದ ಆವತಿ ರಾಜವಂಶದ ಮಲ್ಲಭೈರೇಗೌಡ 1,501ರಲ್ಲಿ ಈ ಕೋಟೆ ಕಟ್ಟಿದ ಎನ್ನುತ್ತದೆ ಇತಿಹಾಸ.

 

13 ವೃತ್ತಾಕಾರದ ಕೊತ್ತಲ ಹೈದರಾಲಿ ರಾಜನಾದ ಬಳಿಕ ಈ ಕೋಟೆಯನ್ನು ದುರಸ್ತಿ ಮಾಡಿಸಿ ಮತ್ತೆ ಕಟ್ಟಿಸಿದ ಎಂಬ ಉಲ್ಲೇಖಗಳೂ ಇವೆ. ನಂತರ ದೇವನಹಳ್ಳಿಗೆ ಟಿಪ್ಪು ಯೂಸಫಾಬಾದ್ ಎಂದು ಕರೆದರೂ ಆ ಹೆಸರು ಸ್ಥಿರವಾಗಲಿಲ್ಲ. 1,791ರಲ್ಲಿ ಈ ಕೋಟೆ ಕಾರ್ನವಾಲೀಸ್ ಪಾಲಾಯಿತು. ಕಲ್ಲು, ಇಟ್ಟಿಗೆ, ಗಾರೆಯಿಂದ ನಿರ್ಮಿಸಿರುವ ಈ ಕೋಟೆಯಲ್ಲಿ 13 ವೃತ್ತಾಕಾರದ ಕೊತ್ತಲಗಳಿವೆ. ಎರಡು ಚೌಕಾಕಾರದ ಬತೇರಿಗಳಿವೆ. ಪ್ರತಿ ಹೊರ ಭಿತ್ತಿಯ ಒಳಗಡೆ ಚಿಕ್ಕ ಚಿಕ್ಕ ರಂದ್ರಗಳಿವೆ. ಈ ರಂಧ್ರಗಳು ವಿ ಆಕಾರದಲ್ಲಿದ್ದು ದೂರದರ್ಶಕದಂತೆ ಕೆಲಸ ಮಾಡುತ್ತವೆ.

source: tripadvisor.com

ಈ ಕಿಂಡಿಗಳಲ್ಲಿ ನೋಡಿದರೆ ಕೋಟೆಯ ಹೊರಗಿನ ಚಿತ್ರಣ ಸಂಪೂರ್ಣ ಕಾಣುತ್ತದೆ. ಶತ್ರುಗಳಿಂದ ರಕ್ಷಣೆ ಪಡೆಯಲು ಇದು ಅದ್ಭುತವಾದ ಕಾರ್ಯವಾಗಿದೆ. ಕಾವಲು ಗೋಪುರ ಕೋಟೆಯ ಪೂರ್ವದ ಬಾಗಿಲು ಬಿದ್ದು ಹೋಗಿದೆಯಾದರೂ, ಪಶ್ಚಿಮದ ಬಾಗಿಲು ಸುಭದ್ರವಾಗಿದೆ. ಶತ್ರುಗಳ ದಾಳಿಯಿಂದ ರಕ್ಷಿಸಲು ಬೇಕಾದ ಸಕಲ ವ್ಯವಸ್ಥೆಯನ್ನೂ ಈ ಕೋಟೆಯಲ್ಲಿ ಮಾಡಲಾಗಿದೆ. ಕೋಟೆಯ ಒಳಗೆ ನಿಂತು ಹೊರಗಿನಿಂದ ಆಕ್ರಮಣ ಮಾಡುವ ಶತ್ರುಗಳನ್ನು ನಿಗ್ರಹಿಸಲು ಸಕಲ ಅನುಕೂಲತೆಗಳನ್ನು ಕಲ್ಪಿಸಲಾಗಿದೆ.

source: karnatakatravel.blogspot.in

ಅನಿವಾರ್ಯ ಪರಿಸ್ಥಿತಿಯಲ್ಲಿ ತಪ್ಪಿಸಿಕೊಳ್ಳಲು ತುರ್ತು ಮಾರ್ಗವೂ ಇದೆ. ಕೋಟೆಯ ಮೇಲೆ ಕಾವಲು ಗೋಪುರಗಳಿದ್ದು, ಇಲ್ಲಿ ಕಾವಲುಗಾರರ ನಿವಾಸಗಳೂ ಇವೆ. ಕೋಟೆಯ ಸುತ್ತ ರಕ್ಷಣೆಗಾಗಿ ಕಂದಕ ತೋಡಿ ಅದರಲ್ಲಿ ನೀರು ತುಂಬಿಸಿ ದೊಡ್ಡ ದೊಡ್ಡ ಮೊಸಳೆಗಳನ್ನು ಬಿಟ್ಟಿದ್ದರು ಎಂದು ಊರಿನ ಹಿರಿಯರು ಹೇಳುತ್ತಾರೆ. ಪ್ರವಾಸಿಗರ ತಾಣ ಇಲ್ಲಿ ಕಂದಕ ಇತ್ತು ಎಂಬುದಕ್ಕೆ ಕುರುಹುಗಳೂ ಇವೆ. ಹಳೆಯ ನಂಜುಂಡೇಶ್ವರ ದೇವಾಲಯ, ವೇಣುಗೋಪಾಲಸ್ವಾಮಿ ದೇಗುಲ, ಸುಲ್ತಾನ್ಪೇಕಟೆ, ಪೂರ್ಣಯ್ಯನವರ ಸರೋವರ, ವೇಣುಗೋಪಾಲಸ್ವಾಮಿ ದೇವಾಲಯ, ಆವತಿಯಲ್ಲಿ ಚೆನ್ನಕೇಶವ ದೇವಾಲಯವಿದೆ.

source: 3.bp.blogspot.com

ಬ್ರಿಟಿಷರ ವಿರುದ್ಧ ಹೋರಾಡಿ ಕರ್ನಾಟಕ ಕೀರ್ತಿ ಪತಾಕೆಯನ್ನು ಬಾನೆತ್ತರ ಹಾರಿಸಿದ ಮೈಸೂರು ಹುಲಿ ಟಿಪ್ಪು ಸುಲ್ತಾನರ ಗೌರವಾರ್ಥ 1997ರಲ್ಲಿ ನಡೆದ ದೇವನಹಳ್ಳಿ ವಿಜಯಪುರ ಟಿಪ್ಪೂ ಉತ್ಸವ ಕಾಲದಲ್ಲಿ ಇಲ್ಲಿ ಟಿಪ್ಪೂ ಪ್ರತಿಮೆಯನ್ನು ಅಂದಿನ ಮುಖ್ಯಮಂತ್ರಿ ಜೆಎಚ್ ಪಟೇಲ್ ಉದ್ಘಾಟಿಸಿದ್ದರು. ಇಂದು ಪ್ರತಿ ದಿನ ನೂರಾರು ಪ್ರವಾಸಿಗರ ತಾಣವಾಗಿ ಮಾರ್ಪಟ್ಟಿದೆ.