ಕರ್ನಾಟಕ ಕಂಡ ನೀಚ ಮುಖ್ಯಮಂತ್ರಿ ಅಂದ್ರೆ ಸಿದ್ದರಾಮಯ್ಯ, ಅವರನ್ನು ರಾಜಕೀಯದಲ್ಲಿ ಬೆಳೆಸಿ ದೊಡ್ಡ ತಪ್ಪು ಮಾಡಿದ್ದೇನೆ: ದೇವೇಗೌಡರು

0
660

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ. ಕೆಂಗೇರಿ ಉಪನಗರದಲ್ಲಿ ಏರ್ಪಡಿಸಿದ್ದ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ದೇವೇಗೌಡ, ಇಂಥ ನೀಚ ಮುಖ್ಯಮಂತ್ರಿಯನ್ನು ಬೆಳೆಸಿದ್ದು ನಾನು ನನ್ನ ಜೀವನದಲ್ಲಿ ಮಾಡಿದ ಮಹಾಪರಾಧ ಎಂದಿದ್ದಾರೆ.

siddaramaiah

ಇಂದು ಕಾಂಗ್ರೆಸ್ ನಲ್ಲಿ ಸೋನಿಯಾ ಗಾಂಧಿ ಬಲ ಕುಗ್ಗಿದೆ. ಇದನ್ನೇ ನೆಪ ಮಾಡಿಕೊಂಡಿರುವ ಮುಖ್ಯಮಂತ್ರಿಗಳು ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ. ಸಿದ್ದರಾಮಯ್ಯ ಕೀಳು ಮಟ್ಟದ ರಾಜಕಾರಣಿ ಎಂದು ಕಿಡಿಕಾರಿದರು. ರಾಜ್ಯದ ಖಜಾನೆಯನ್ನು ನೀವು ಲೂಟಿ ಮಾಡುತ್ತ ಇದ್ದೀರಿ. ನೀವು ಏನೇನು ಮಾಡಿದ್ದೀರಿ ಎಂಬುದನ್ನು ದಾಖಲೆ ಸಮೇತ ಮಾತನಾಡುತ್ತೇನೆ. ಇನ್ನೇನು ನಿಮ್ಮ ಟೈಂ ಮುಗಿಯುತ್ತ ಬಂದಿದೆ ಎಂದರು.

Political parties

ಇದೇ ವೇಳೆ ದೊಡ್ಡ ಸತ್ಯವಂತನ ಹಾಗೆ ವರ್ತಿಸುತ್ತಾರೆ. ಇವರ ಮನೆ ಮುಂದೆಯೇ ಸತ್ಯ ಹರಿಶ್ಚಂದ್ರ ಹಾದು ಹೋಗಿರಬೇಕು’ ಎಂದು ವ್ಯಂಗ್ಯವಾಡಿದ ಅವರು, ಯಾರೂ ಭ್ರಷ್ಟಾಚಾರದ ಆರೋಪ ಮಾಡಲು ಸಾಧ್ಯವಿಲ್ಲ ಎಂದು ಬೀಗುತ್ತಾರಲ್ಲ. ಹಾಗಾದರೆ ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್‌ಗೆ ಸಂಬಂಧಿಸಿದ ಕೆಂಪಣ್ಣ ಆಯೋಗದ ವರದಿ ಏನಾಯಿತು.?  ಇವರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ನಾಚಿಕೆ ಆಗೋದಿಲ್ವೆ’ ಎಂದು ಹರಿಹಾಯ್ದರು.

devegowda2

ಬಳಿಕ ಮಾತನಾಡಿದ ಜೆಡಿಎಸ್‌ ರಾಜ್ಯ ಅಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ, ಕರ್ನಾಟಕವನ್ನು ಲೂಟಿಕೋರರ ರಾಜ್ಯವನ್ನಾಗಿ ಮಾಡಿದ ಕೀರ್ತಿ ಮುಖ್ಯಮಂತ್ರಿಗೆ ಸಲ್ಲುತ್ತದೆ ಎಂದು ಆರೋಪಿಸಿದರು. ಅಲ್ಲದೇ, ಅನ್ನಭಾಗ್ಯ ಯೋಜನೆ ಮೂಲಕ ಸಿದ್ದರಾಮಯ್ಯ ಪುಕ್ಕಟ್ಟೆ ಪ್ರಚಾರ ಪಡೆಯುತ್ತಿದ್ದಾರೆಂದು ದೂರಿದರು.