ದೀಪಾವಳಿಯ ಮೊದಲ ದಿನ ಮನೆಯರೆಲ್ಲರೂ ಎಣ್ಣೆ ಸ್ನಾನ ಮಾಡಲೇಬೇಕು? ಏನಿದರ ಮಹತ್ವ.!

0
601

ಇತಿಹಾಸ ಕಾಲದಿಂದ ನಡೆದುಕೊಂಡು ಬಂದ ದೀಪಾವಳಿ ಹಬ್ಬದಲ್ಲಿ ಹಲವು ವಿಶೇಷತೆಗಳಿವೆ. ಅದರಲ್ಲಿ ಎಣ್ಣೆ ಸ್ಥಾನ ಬಹುಮುಖ್ಯವಾಗಿದ್ದು, ಇದು ನರಕ ಚತುರ್ಥಿಯ ಮುಖ್ಯ ಆಚರಣೆಯೂ ಹೌದು. ಮುಂಜಾನೆ ಸೂರ್ಯ ಉದಯಿಸುವ ಮುನ್ನ ಅಥವಾ ಚಂದ್ರನ ಏರಿಕೆಯ ಸಮಯದಲ್ಲಿಯೇ ಎದ್ದೇಳಬೇಕು. ಎಳ್ಳೆಣ್ಣೆ, ತೆಂಗಿನ ಎಣ್ಣೆಗಳಿಂದ ದೇಹವನ್ನು ಮಸಾಜ್ ಮಾಡಿಕೊಳ್ಳಬೇಕು. ನಂತರ ಸ್ವಲ್ಪ ಸಮಯವನ್ನು ಬಿಟ್ಟು ಸ್ನಾನ ಮಾಡಿದರೆ ಅದು ಅಭ್ಯಂಗ ಸ್ನಾನವಾಗುತ್ತದೆ.

Also read: ದೀಪಾವಳಿ ಹಬ್ಬದ ಚರಿತ್ರೆ

ಪೌರಾಣಿಕ ಕಥೆಯ ಪ್ರಕಾರ ಮಹಾವಿಷ್ಣುಭಕ್ತ, ದಾನಶೂರ ದೈತ್ಯರಾಜ ಬಲಿ ಚಕ್ರವರ್ತಿ ಪ್ರಜೆಗಳನ್ನು ಅತ್ಯಂತ ಯೋಗಕ್ಷೇಮದಿಂದ ನೋಡಿಕೊಳ್ಳುತ್ತಿರುತ್ತಾನೆ. ರಾಕ್ಷಸ ರಾಜನಾದರೂ ದಾನ ಧರ್ಮದಿಂದ ಹೆಸರುವಾಸಿಯಾಗಿದ್ದ ಬಲಿ ಮಹಾರಾಜನಿಗೆ ತನ್ನ ರೀತಿಯಲ್ಲಿ ಬೇರೆ ಯಾರು ಪ್ರಜೆಗಳನ್ನು ನೋಡಿಕೊಳ್ಳುವುದಿಲ್ಲ ಎಂಬ ಅಹಂಕಾರ ಬರುತ್ತದೆ. ಈತನನ್ನು ಹೇಗಾದರೂ ಮಾಡಿ ಸಂಹಾರ ಮಾಡಬೇಕೆಂದು ದೇವತೆಗಳು ವಿಷ್ಣುವಿನ ಮೊರೆ ಹೋಗುತ್ತಾರೆ.ದೇವತೆಗಳಿಗೆ ಅಭಯನ ನೀಡಿದ ವಿಷ್ಣು ವಾಮನನ (ಬಾಲಕ) ರೂಪದಲ್ಲಿ ಬಲಿ ಮಹಾರಾಜನ ಬಳಿ ಬರುತ್ತಾನೆ. ವಾಮನ ಮಹಾರಾಜನ ಬಳಿ,”ತನ್ನ ಮೂರು ಹೆಜ್ಜೆ ಊರುವಷ್ಟು ಭೂಮಿಯನ್ನು ದಾನವಾಗಿ ನೀಡಬೇಹುದೇ?” ಎಂದು ಕೇಳುತ್ತಾನೆ.

ಪ್ರಜಾಪರಿಪಾಲನೆಯಲ್ಲಿ ಯಶಸ್ವಿಕಂಡಿರುವ ನನಗೆ ಈ ಪುಟ್ಟ ಬಾಲಕನ ಬೇಡಿಕೆಯನ್ನು ಈಡೇರಿಸುವ ಯೋಗ್ಯತೆ ನನಗಿಲ್ವಾ ಎಂಬ ಅಹಂಕಾರದಿಂದ ಬಲೀಂದ್ರ ಮಹಾರಾಜ ವಾಮನನಿಗೆ,”ನೀನು ಕೇಳಿದ ಮೂರು ಹೆಜ್ಜೆ ಊರುವಷ್ಟು ಜಾಗ ನೀಡುತ್ತೇನೆ” ಎಂದು ವಚನವನ್ನು ಕೊಡುತ್ತಾನೆ. ಸ್ಥಳವನ್ನು ದಾನ ಪಡೆಯುವಾಗ ವಾಮನಮೂರ್ತಿ ಆಕಾಶದ ಉದ್ದಕ್ಕೂ ಬೆಳೆಯುತ್ತಾನೆ. ಒಂದು ಪಾದವನ್ನು ಭೂಮಿ ಮೇಲೆ, ಮತ್ತೊಂದು ಪಾದವನ್ನು ಆಕಾಶದ ಮೇಲೆ ಇರಿಸುತ್ತಾನೆ. ಇನ್ನೊಂದು ಪಾದ ಇಡಲು ಜಾಗ ಕಾಣುತ್ತಿಲ್ಲ ಎಲ್ಲಿ ಇಡಬೇಕು ಎಂದು ಕೇಳಿದಾಗ ಬಲಿ ಚಕ್ರವರ್ತಿಗೆ ಜ್ಞಾನೋದಯವಾಗಿ ನನ್ನ ತಲೆ ಮೇಲೆ ಇಡು ಎಂದು ಹೇಳುತ್ತಾನೆ.

Also read: ದೀಪಾವಳಿ ಆಚರಣೆ ಹಾಗೂ ಅದರ ಮಹತ್ವ

ನನ್ನ ತಲೆ ಮೇಲೆ ನಿಮ್ಮ ಪಾದ ಇಡುವ ಮೂಲಕ ನನ್ನಲ್ಲಿರುವ ಅಹಂಕಾರವೆಲ್ಲ ನಾಶವಾಗಲಿ ಎಂದು ವಾಮನನ ಬಳಿ ಬಲಿ ಕ್ಷಮೆ ಕೇಳುತ್ತಾನೆ. ಶ್ರೀಮನ್ನಾರಾಯಣ ತನ್ನ ಪಾದವನ್ನು ಬಲೀಂದ್ರ ಮಹಾರಾಜನ ಮೇಲೆ ಇರಿಸಿ ಪಾತಾಳಕ್ಕೆ ಕಳುಹಿಸುತ್ತಾನೆ. ಬಲಿಯ ಭಕ್ತಿಯನ್ನು ಮತ್ತು ದಾನಶೀಲಗುಣವನ್ನು ಮೆಚ್ಚಿದ ವಿಷ್ಣು ಪ್ರತಿವರ್ಷ ಒಂದು ದಿನ ಅವನ ಹೆಸರಿನಲ್ಲಿ ಪೂಜೆ ನಡೆಯುವಂತೆ ವರ ನೀಡುತ್ತಾನೆ. ಅದೇನೆಂದರೆ ಆಶ್ವಯುಜ ಮಾಸದಲ್ಲಿ ಮೂರು ದಿವಸಗಳ ಕಾಲ ನೀನು ಭೂಲೋಕಕ್ಕೆ ಬರಬಹುದು. ಅಲ್ಲಿ ನಿನ್ನನ್ನು ಜನತೆ ಪೂಜೆ ಮಾಡುವರು. ಇದರ ಫಲವಾಗಿಯೇ ದೀಪಾವಳಿ ಸಮಯದಲ್ಲಿ ಎಲ್ಲರೂ ದೀಪ ಹಚ್ಚಿ ಬಲೀಂದ್ರ ಪೂಜೆ ಕೈಗೊಳ್ಳುತ್ತಾರೆ. ಆಶ್ವಯುಜ ಕೃಷ್ಣ ಚತುರ್ದಶಿ, ಅಮಾವಾಸ್ಯೆ ಮತ್ತು ಕಾರ್ತಿಕ ಶುದ್ಧ ಪಾಡ್ಯ. ಇದನ್ನು ಬಲಿರಾಜ್ಯವೆಂದು ಹೇಳುತ್ತಾರೆ.

ಎಣ್ಣೆ ಸ್ನಾನಕ್ಕೆ ಇರುವ ಉದ್ದೇಶ

Also read: ಮಹಾಕಾಳಿ, ಸರಸ್ವತಿ ಮತ್ತು ಲಕ್ಷ್ಮಿ ದೇವತೆಗಳ ಶಕ್ತಿಯ ಅನುಗ್ರಹ ಪಡೆಯುವುದು ಹೇಗೆ ಅಂತ ತಿಳಿದುಕೊಳ್ಳಿ..

ಎಣ್ಣೆ ಸ್ನಾನಕ್ಕೆ ಧಾರ್ಮಿಕ ಹಿನ್ನೆಲೆಯೂ ಇದೆ. ನರಕಾಸುರನನ್ನು ಕೊಂದು, ಜೈಲಿನಲ್ಲಿರುವ 16108 ರಾಜಕುಮಾರಿಯರನ್ನು ಮುಕ್ತ ಗೊಳಿಸಿದನು ಶ್ರೀಕೃಷ್ಣ. ರಾಜಕುಮಾರಿಯರು ಮೂಲತಃ ಅಗ್ನಿ ಪುತ್ರಿಯರು. ಇವರು ಜೈಲಿನಿಂದ ಬಿಡುಗಡೆ ಹೊಂದಿರುವ ಹಿನ್ನೆಲೆಯಲ್ಲಿ ಎಣ್ಣೆಯ ಸ್ನಾನ ಪದ್ಧತಿ ಹುಟ್ಟಿಕೊಂಡಿತು ಎನ್ನಲಾಗುತ್ತದೆ ಅಗ್ನಿಯು ಜ್ಞಾನದ ಸಂಕೇತ, ಎಣ್ಣೆಯು ಲಕ್ಷ್ಮಿಯ ಸಂಕೇತ, ಹೃದಯದ ನಿರ್ಮಲತೆಯನ್ನು ನೀರು ಪ್ರತಿಬಿಂಬಿಸುತ್ತದೆ. ಕೃಷ್ಣ ಬಳಸಿದ ಶಸ್ತ್ರಾಸ್ತಗಳು ಬಂಧವನ್ನು ಪ್ರತಿನಿಧಿಸುತ್ತದೆ. ಹಾಗಾಗಿ ಸ್ನಾನ ಮಾಡುವುದರಿಂದ ಬಂಧನದಿಂದ ವಿಮೋಚನೆ ಸಿಗುತ್ತದೆ ಎಂದು ಹೇಳಲಾಯಿತು.