ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬಹುತೇಕ ಡಿ.ಕೆ.ಶಿವಕುಮಾರ್ ಹೆಸರು ಅಂತಿಮ; ನಾಳೆಯೇ ಅಧಿಕೃತವಾಗಿ ಪ್ರಕಟವಾಗುವ ಸಾಧ್ಯತೆ.!

0
105

ಕಳೆದೆರಡು ದಿನಗಳಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಕುರಿತು ಹಲವು ವಿಚಾರಗಳು ವೈರಲ್ ಆಗಿ ಡಿ.ಕೆ.ಶಿವಕುಮಾರ್ ಅವರಿಗೆ ಕೆಪಿಸಿಸಿ ಪಟ್ಟ ಸಿಗುವುದು ಅನುಮಾನ ಎನ್ನಲಾಗಿತ್ತು, ಇದಕ್ಕೆ ಸಿದ್ದರಾಮಯ್ಯನವರೆ ತಡೆ ಹಿಡಿದಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿದ್ದವು, ಆದರೆ ಈಗ ಡಿ.ಕೆ.ಶಿವಕುಮಾರ್ ಗೆ ಕಾಂಗ್ರೆಸ್ ಹೈಕಮಾಂಡ್ ಬುಲಾವ್ ನೀಡಿದೆ. ನಾಳೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನ ಡಿ.ಕೆ.ಶಿವಕುಮಾರ್ ಭೇಟಿಯಾಗಲಿದ್ದಾರೆ. ಜನವರಿ 15 ರಿಂದ 10 ದಿನಗಳ ಕಾಲ ಸೋನಿಯಾ ಗಾಂಧಿ ಇಟಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ನಲ್ಲಿ ಖಾಲಿ ಇರುವ ಕೆಪಿಸಿಸಿ ಅಧ್ಯಕ್ಷ ಸ್ಥಾನ, ವಿಪಕ್ಷ ನಾಯಕನ ಸ್ಥಾನ ಹಾಗೂ ಸಿಎಲ್ ಪಿ ನಾಯಕನ ಸ್ಥಾನ ಅಷ್ಟಕ್ಕು ಹೆಸರುಗಳನ್ನ ಆಂತಿಮ ಪಡಿಸಲಿದ್ದಾರೆ.


Also read: ಬೆಂಗಳೂರು ರಸ್ತೆಗುಂಡಿ ಅಪಘಾತಕ್ಕೆ ಬಿಬಿಎಂಪಿ ನೇರ ಹೊಣೆ ಸುಪ್ರೀಂಕೋರ್ಟ್ ಆದೇಶ.!

ಹೌದು ಕೆಪಿಸಿಸಿ ಅಧ್ಯಕ್ಷ ಸ್ಥಾನದ ನಿರೀಕ್ಷೆಯಲ್ಲಿದ್ದ ಡಿಕೆಶಿಗೆ ಹೈಕಮಾಂಡ್ ಬುಲಾವ್ ನೀಡಿದ್ದು ಕೆಪಿಸಿಸಿ ಪಟ್ಟದ ಕನಸು ಚಿಗುರುವಂತೆ ಮಾಡಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ದಿನೇಶ್​​ ಗುಂಡೂರಾವ್​​ ರಾಜೀನಾಮೆಯಿಂದ ತೆರವಾಗಿದ್ದ ವಿಪಕ್ಷ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಗಳಿಗೆ ಯಾರನ್ನಾದರೂ ಇನ್ನೆರಡು ದಿನಗಳಲ್ಲಿ ಆಯ್ಕೆ ಮಾಡುವ ಸಾಧ್ಯತೆ ಇದೆ. ಜತೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೂ ಪ್ರಭಾವಿ ಮುಖಂಡನೋರ್ವನನ್ನು ನೇಮಿಸಲು ಹೈಕಮಾಂಡ್​​ ಚಿಂತಿಸಿದೆ. ಹಾಗಾಗಿಯೇ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ದೆಹಲಿಗೆ ಪ್ರಯಾಣ ಬೆಳೆಸುತ್ತಿದ್ದಾರೆ.

Also read: ಮಂಗಳೂರು ಗೋಲಿಬಾರ್-ನಲ್ಲಿ ಪೊಲೀಸರ ದೌರ್ಜನ್ಯ ಕುರಿತ 35 ವಿಡಿಯೋ ರಿಲೀಸ್ ಮಾಡಿದ ಕುಮಾರಸ್ವಾಮಿ; ರಾಜ್ಯ ರಾಜಕೀಯವೇ ಅಲ್ಲೋಲ ಕಲ್ಲೋಲ.!

ಕಳೆದ ಉಪ ಚುನಾವಣೆಯಲ್ಲಿ ಪಕ್ಷ ಹೀನಾಯ ಸೋತ ನಂತರ ನೈತಿಕ ಹೊಣೆ ಹೊತ್ತು ರಾಜ್ಯ ವಿಧಾನಸಭೆಯ ಪ್ರತಿಪಕ್ಷ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯನವರು ರಾಜೀನಾಮೆ ನೀಡಿದ್ದರು. ನಂತರ ಬೇರೆ ನಾಯಕರ ನೇಮಕ ಆಗಿರಲಿಲ್ಲ. ಇದೀಗ ಹೈಕಮಾಂಡ್ ಆದೇಶದಂತೆ ಸಿದ್ದರಾಮಯ್ಯನವರು ಇಂದು ಸಂಜೆ ದೆಹಲಿಗೆ ಹೋಗುತ್ತಿದ್ದಾರೆ. ನಾಳೆ ರಾತ್ರಿ ಬೆಂಗಳೂರಿಗೆ ಹಿಂತಿರುಗಲಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯನವರ ಕಚೇರಿಯ ಪತ್ರಿಕಾ ಹೇಳಿಕೆ ತಿಳಿಸಿದೆ.
ಡಿ ಕೆ ಶಿವಕುಮಾರ್ ಅವರು ದೆಹಲಿಗೆ ಹೋಗಿ ಬಂದ ನಂತರ ಸಿದ್ದರಾಮಯ್ಯ ಹೋಗುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ ಕೆ ಶಿವಕುಮಾರ್ ಮುಂಚೂಣಿಯಲ್ಲಿದ್ದಾರೆ. ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸಿದ್ದರಾಮಯ್ಯನವರಲ್ಲಿ ಮಾತುಕತೆ ನಡೆಸಿ ರಾಜಿನಾಮೆಯನ್ನು ಹಿಂಪಡೆಯುವಂತೆ ಹೇಳಿದ್ದರು. ಇದೀಗ ಸೋನಿಯಾ ಗಾಂಧಿಯವರು ಸಿದ್ದರಾಮಯ್ಯನವರ ಮನವೊಲಿಸುವ ಸಾಧ್ಯತೆಯಿದೆ. ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ನಡುವಿನ ಶೀತಲ ಸಮರದ ಮಧ್ಯೆ ಇಂದಿನ ಭೇಟಿ ಮೂಲಕ ಉಭಯ ನಾಯಕರ ನಡುವಿನ ಭಿನ್ನಾಭಿಪ್ರಾಯವನ್ನು ಹೈಕಮಾಂಡ್ ಬಗೆಹರಿಸಲು ಪ್ರಯತ್ನಿಸುವ ಸಾಧ್ಯತೆಯಿದೆ.ಸಿದ್ದರಾಮಯ್ಯನವರನ್ನು ವಿರೋಧ ಪಕ್ಷದ ನಾಯಕನಾಗಿ ಮುಂದುವರಿಯುವಂತೆ ಮತ್ತು ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರಾಗಿ ನೇಮಿಸುವ ಸಾಧ್ಯತೆಯಿದೆ.


Also read: ರಾಜ್ಯ ಕಾಂಗ್ರೆಸ್-ನಲ್ಲಿ ಮತ್ತೆ ಬಿರುಗಾಳಿ; ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ ಶಿವಕುಮಾರ್ ಬದಲು ಬೇರೆ ನಾಯಕರಿಗೆ ಮಣೆ ಹಾಕಲು ಸಿದ್ದವಾದ ​ಹೈ ಕಮಾಂಡ್.!

ಅದರಂತೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬಹುತೇಕ ಡಿ.ಕೆ.ಶಿವಕುಮಾರ್ ಹೆಸರು ಅಂತಿಮವಾಗಿದ್ದು, ನಾಳೆ ಸೋನಿಯ ಗಾಂಧಿ ಜೊತೆಗಿನ ಮಾತುಕತೆ ನಂತರ ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ ಹೆಸರು ಅಧಿಕೃತವಾಗಿ ಪ್ರಕಟವಾಗುವ ಸಾಧ್ಯತೆ ಇದೆ. ಮತ್ತೊಂದೆಡೆ ಮಾಜಿ ಸಚಿವ ಡಿಕೆ ಶಿವಕುಮಾರ್ ನಿವಾಸ ಮತ್ತೊಮ್ಮೆ ಚಟುವಟಿಕೆಯ ಕೇಂದ್ರವಾಗುತ್ತಿದೆ. ಕೆಪಿಸಿಸಿ ಅಧ್ಯಕ್ಷ ಗಾದಿಗೇರುವ ಪ್ರಮುಖರಾಗುತ್ತಿದ್ದಂತೆಯೇ ಸಾಕಷ್ಟು ಕಾಂಗ್ರೆಸ್ ನಾಯಕರ ಸ್ಪರ್ಧೆಯ ನಡುವೆಯೂ ತಮ್ಮ ಹೆಸರನ್ನು ಮುಂಚೂಣಿಯಲ್ಲಿ ಉಳಿಸಿಕೊಂಡಿದ್ದಾರೆ. ಈ ಎಲ್ಲ ಬೆಳವಣಿಗೆಗಳನ್ನು ನೋಡಿದರೆ ಡಿಕೆಶಿ ಅವರಿಗೆ ಕೆಪಿಸಿಸಿ ಪಟ್ಟ ಅಂತಿಮ ಎನ್ನಲಾಗುತ್ತಿದೆ.