ರಾಜ್ಯಾದ್ಯಂತ ನಾಳೆ ವೈದ್ಯರ ಪ್ರತಿಭಟನೆ; ಆಸ್ಪತ್ರೆಗಳ ಒಪಿಡಿಗಳು ಬಂದ್ ಮುಂದೇನು??

0
107

ಕಳೆದ ಆರು ದಿನಗಳಿಂದ ನಡೆಯುತ್ತಿರುವ ವೈದ್ಯರ ಹೋರಾಟ ನಾಳೆಯು ಮುಂದುವರೆಯಲಿದ್ದು, ರಾಜ್ಯಾದ್ಯಂತ ಆಸ್ಪತ್ರೆಗಳ ಒಪಿಡಿಗಳು ಬಂದ್ ಆಗಲಿವೆ. ಅದರಂತೆ ನಾಳೆ ಬೆಳಗ್ಗೆ 6ಗಂಟೆಯಿಂದ ಶನಿವಾರ ಬೆಳಗ್ಗೆ 6ಗಂಟೆವರೆಗೆ ರಾಜ್ಯಾದ್ಯಂತ ಎಲ್ಲಾ ಖಾಸಗಿ ಆಸ್ಪತ್ರೆಯ ಒಪಿಡಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುವುದು. ಎಂದು ರಾಜ್ಯ ಐಎಂಎ ಕಾರ್ಯದರ್ಶಿ ತಿಳಿಸಿದ್ದು, ಸಾರ್ವಜನಿಕರಿಗೆ ನಾಳೆಯಂದು ಚಿಕಿತ್ಸೆ ದೊರೆಯುವುದಿಲ್ಲ. ಆದರೆ ರೋಗಿಗಳಿಗೆ ತುರ್ತು ಚಿಕಿತ್ಸೆ ಲಭ್ಯವಿರಲಿದೆ.

ನಾಳೆ ರಾಜ್ಯಾದ್ಯಂತ ಒಪಿಡಿ ಬಂದ್?

ಹೌದು ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಮಿಂಟೋ ಆಸ್ಪತ್ರೆಯ ವೈದ್ಯರ ಮೇಲೆ ಹಲ್ಲೆ ಹಾಗೂ ಕರ್ತವ್ಯಕ್ಕೆ ಅಡ್ಡಿ ವಿರುದ್ಧ ಬೆಂಗಳೂರಿನಲ್ಲಿ ಕಿರಿಯ ವೈದ್ಯರು ಮಾಡುತ್ತಿರುವ ಪ್ರತಿಭಟನೆ ಆರನೇ ದಿನಕ್ಕೆ ಕಾಲಿಟ್ಟಿದ್ದು, ನಾಳೆ ಅದೂ ತೀವ್ರ ಸ್ವರೂಪ ಪಡೆಯಲಿದೆ, ನವೆಂಬರ್ 8ರ ಶುಕ್ರವಾರದಿಂದ ರಾಜ್ಯಾಧ್ಯಂತ ಸರ್ಕಾರಿ, ಖಾಸಗೀ ಆಸ್ಪತ್ರೆಗಳ ಒಪಿಡಿ ಸೇವೆ ಬಂದ್ ಮಾಡುವ ಎಚ್ಚರಿಕೆ ನೀಡಿದೆ. ಈ ಸಂಬಂಧ ವೈದ್ಯ ಡಾ.ಸತೀಶ್ ಕೂಡ ವಿವಿ ಪುರಂ ಪೋಲೀಸರಿಗೆ ದೂರು ನೀಡಿದ್ದ ಹಿನ್ನಲೆಯಲ್ಲಿ ಎಫ್ ಐ ಆರ್ ಕೂಡ ಕರವೇ ಕಾರ್ಯಕರ್ತರ ಮೇಲೆ ದಾಖಲಾಗಿತ್ತು. ಇದಾದ ಬಳಿಕ ಸರ್ಕಾರ ಕೂರ ಪ್ರತಿಭಟನಾ ನಿರತರನ್ನು ಮನವೊಲಿಸುವ ಪ್ರಯತ್ನ ನಡೆಸಿತಾದರೂ, ವೈದ್ಯರೊಂದಿಗಿನ ಸರ್ಕಾರದ ಸಂಧಾನ ವಿಫಲವಾಗಿತ್ತು. ಈ ಎಲ್ಲಾ ಬೆಳವಣಿಗೆ ನಂತ್ರ, ಇದೀಗ ವೈದ್ಯರ ಪ್ರತಿಭಟನೆ ಮತ್ತಷ್ಟು ತೀವ್ರಗೊಂಡಿದೆ.

ಏನಿದು ಪ್ರಕರಣ?

ಮಿಂಟೋ ಆಸ್ಪತ್ರೆಯಲ್ಲಿ ಕಣ್ಣಿನ ಚಿಕಿತ್ಸೆಗೆ ಒಳಗಾಗಿ ಕೆಲವರು ದೃಷ್ಟಿ ಕಳೆದುಕೊಂಡಿದ್ದರು. ಇದನ್ನು ಪ್ರಶ್ನಿಸಲು ಅಶ್ವಿನಿ ಗೌಡ ನೇತೃತ್ವದಲ್ಲಿ ಕರವೇ ಕಾರ್ಯಕರ್ತರು ಆಸ್ಪತ್ರೆಗೆ ತೆರಳಿದ್ದರು. ಆಗ ಕರವೇ ಕಾರ್ಯಕರ್ತರು ವೈದ್ಯರ ವಾಗ್ವಾದ ಇಂಗ್ಲಿಷ್, ಕನ್ನಡ ಹೋರಾಟದ ರೂಪ ಪಡೆದಿತ್ತು. ಅಲ್ಲದೆ ಕರವೇ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ. ಅವರನ್ನು ಬಂಧಿಸಬೇಕೆಂದು ಆಗ್ರಹಿಸಿ ಮಿಂಟೋ ಆಸ್ಪತ್ರೆ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿದ್ದರು. ಈಗ ಈ ಹೋರಾಟ ಆರನೇ ದಿನಕ್ಕೆ ಕಾಲಿಟ್ಟಿದ್ದು, ವೈದ್ಯರ ಪ್ರತಿಭಟನೆಯಿಂದ ರೋಗಿಗಳಿಗೆ ತೊಂದರೆಯಾಗುತ್ತಿದೆ. ಈ ವಿಚಾರವಾಗಿ ಬುಧವಾರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಬಂದು ಮನವಿ ಮಾಡಿದರು ವೈದ್ಯರು ಪ್ರತಿಭಟನೆಯಲ್ಲಿ ಕೈಬಿಟ್ಟಿಲ್ಲ.

ಮಿಂಟೋ ಆಸ್ಪತ್ರೆ ವೈದ್ಯರು ಮಾಡುತ್ತಿದ್ದ ಪ್ರತಿಭಟನೆಗೆ ನಗರದ ವಿಕ್ಟೋರಿಯಾ, ವಾಣಿ ವಿಲಾಸ್, ಮಿಂಟೋ ಆಸ್ಪತ್ರೆ ಕಿರಿಯ ವೈದ್ಯರು ಮತ್ತು ವಿಧ್ಯಾರ್ಥಿಗಳು ಪ್ರತಿಭಟನೆಗೆ ಸಾಥ್ ನೀಡಿದ್ದು, ರಾಜ್ಯಾದ್ಯಂತ ಒಪಿಡಿ ಬಂದ್ ಮಾಡಲು ತೀರ್ಮಾನಿಸಿದ್ದಾರೆ. ಈ ವಿಚಾರವಾಗಿ ಮಾತನಾಡಿರುವ ಐಎಂಎ ಕಾರ್ಯದರ್ಶಿ ಡಾ.ಶ್ರೀನಿವಾಸ್, ನಾಳೆ ಬೆಳಗ್ಗೆ 6 ರಿಂದ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಯ ಒಪಿಡಿಗಳು ಬಂದ್ ಆಗಲಿವೆ. ನಮ್ಮ ಬೇಡಿಕೆ ಈಡೇರಿಲ್ಲ. ಹಾಗಾಗಿ ನಾವೂ ಮೊನ್ನೆಯೆ ಹೇಳಿದಂತೆ ಶುಕ್ರವಾರದ ವರೆಗೆ ಸರ್ಕಾರಕ್ಕೆ ಸಮಯ ನೀಡುತ್ತೇವೆ. ಅಷ್ಟರಲ್ಲಿ ನಮ್ಮ ಬೇಡಿಕೆ ಈಡೇರಲಿಲ್ಲ ಅಂದರೆ ರಾಜ್ಯಾದ್ಯಂತ ಒಪಿಡಿ ಬಂದ್ ಮಾಡುತ್ತೇವೆ ಎಂದು ಹೇಳಿದ್ದಾರೆ. ಅದರಂತೆ ನಾಳೆ ರಾಜ್ಯದಲ್ಲಿರುವ 23 ಸಾವಿರ ಖಾಸಗಿ ಆಸ್ಪತ್ರೆಗಳು ಹಾಗೂ ಬೆಂಗಳೂರಿನಲ್ಲಿರುವ 5 ಸಾವಿರಕ್ಕೂ ಹೆಚ್ಚು ಆಸ್ಪತ್ರೆ ಬಂದ್ ಆಗಲಿವೆ.

Also read: ಭಾರತದಲ್ಲಿ ವಾಯು ಮಾಲಿನ್ಯ ಹೆಚ್ಚಾಗಲು ಪಾಕಿಸ್ತಾನ, ಚೀನಾ ವಿಷ ಅನಿಲ ಪ್ರಯೋಗ ಮಾಡಿದೆಯೇ??