ಡಿಆರ್‌ಡಿಓ ಶೀಘ್ರಲಿಪಿಗಾರ ಮತ್ತು ಆಡಳಿತ ಸಹಾಯಕ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
166

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಡಿಫೆನ್ಸ್ ರಿಸರ್ಚ್ ಅಂಡ್ ಡೆವಲಪ್ಮೆಂಟ್ ಆರ್ಗನೈಸೇಶನ್ (ಡಿಆರ್‌ಡಿಓ), 224 ಶೀಘ್ರಲಿಪಿಗಾರ ಮತ್ತು ಆಡಳಿತ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಗೆ ಹೋಗಿ ಅಕ್ಟೋಬರ್ 15,2019ರೊಳಗೆ ಅರ್ಜಿ ಸಲ್ಲಿಸಬೇಕು.

Also read: ಐಬಿಪಿಎಸ್ 12,075 ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ; ಅರ್ಜಿ ಸಲ್ಲಿಸುವುದು ಹೇಗೆ??

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಶೀಘ್ರಲಿಪಿಗಾರ ಮತ್ತು ಆಡಳಿತ ಸಹಾಯಕ

ಸಂಸ್ಥೆ (Organisation): ಡಿಫೆನ್ಸ್ ರಿಸರ್ಚ್ ಮತ್ತು ಡೆವಲಪ್ಮೆಂಟ್ ಆರ್ಗನೈಸೇಶನ್ (ಡಿಆರ್‌ಡಿಓ)

ವಿದ್ಯಾರ್ಹತೆ (Educational Qualification): 12ನೇ ತರಗತಿ / ದ್ವಿತೀಯ ಪಿಯುಸಿ, ಹತ್ತನೇ ತರಗತಿ / ತತ್ಸಮಾನ

ಉದ್ಯೋಗ ಸ್ಥಳ (Job Location): ಭಾರತದೆಲ್ಲೆಡೆ

ಉದ್ಯೋಗ ಸ್ಥಳ (Job Location): ಈ ಹುದ್ದೆಗಳಿಗೆ ದ್ವಿತೀಯ ಪಿಯುಸಿ / 12 ನೇ ತರಗತಿ ಮತ್ತು ಹತ್ತನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ: ಈ ಹುದ್ದೆಗಳಿಗೆ ದ್ವಿತೀಯ ಪಿಯುಸಿ / 12 ನೇ ತರಗತಿ ಮತ್ತು ಹತ್ತನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ / ಪರಿಶಿಷ್ಟ ಜನಾಂಗದ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡಿಆರ್‌ಡಿಓ ಅಧಿಕೃತ ವೆಬ್‌ಸೈಟ್‌ https://www.drdo.gov.in/drdo/English/index.jsp?pg=homebody.jsp ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅಕ್ಟೋಬರ್ 15,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ: https://kannada.careerindia.com/downloads/2019/9/DRDO-CEPTAM-09-Recruitment-2019.pdf ಕ್ಲಿಕ್ ಮಾಡಿ.