ಡಿಫೆನ್ಸ್ ರಿಸರ್ಚ್ ಅಂಡ್ ಡೆವಲಪ್ಮೆಂಟ್ ಆರ್ಗನೈಸೇಶನ್ (DRDO) ಹಲವು ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
180

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಡಿಫೆನ್ಸ್ ರಿಸರ್ಚ್ ಅಂಡ್ ಡೆವಲಪ್ಮೆಂಟ್ ಆರ್ಗನೈಸೇಶನ್ (ಡಿಆರ್‌ಡಿಓ), ಏರೋನಾಟಿಕಲ್ ಡೆವಲಪ್ಮೆಂಟ್ ಎಸ್ಟಾಬ್ಲಿಷ್ಮೆಂಟ್ (ಎಡಿಇ) ಮೂಲಕ ಖಾಲಿ ಇರುವ 80 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 7,2019ರೊಳಗೆ ಅರ್ಜಿ ಸಲ್ಲಿಸಬೇಕು.

Also read: ಇಎಸ್‌ಐಸಿ ಸೀನಿಯರ್ ರೆಸಿಡೆಂಟ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಅಪ್ರೆಂಟಿಸ್

ಸಂಸ್ಥೆ (Organisation): ಡಿಫೆನ್ಸ್ ರಿಸರ್ಚ್ ಮತ್ತು ಡೆವಲಪ್ಮೆಂಟ್ ಆರ್ಗನೈಸೇಶನ್ (ಡಿಆರ್‌ಡಿಓ)

ವಿದ್ಯಾರ್ಹತೆ (Educational Qualification): ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಪದವಿ, ಡಿಪ್ಲೋಮಾ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಡಿಪ್ಲೋಮಾ ಮತ್ತು ಐಟಿಐ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಉದ್ಯೋಗ ಸ್ಥಳ (Job Location): ಬೆಂಗಳೂರು (ಕರ್ನಾಟಕ)

ವಯೋಮಿತಿ: ಸೆಪ್ಟೆಂಬರ್ 7,2019ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡಿಆರ್‌ಡಿಓ ಅಧಿಕೃತ ವೆಬ್‌ಸೈಟ್‌ https://www.drdo.gov.in/drdo/English/index.jsp?pg=homebody.jsp ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಸೆಪ್ಟೆಂಬರ್ 7,2019ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.