ಕರ್ನಾಟಕ ಉಪ ಚುನಾವಣೆ ದಿನಾಂಕ ಫಿಕ್ಸ್; ಇಂದಿನಿಂದಲೇ ನೀತಿ ಸಂಹಿತೆ ಜಾರಿ, ಹಾಗಾದ್ರೆ ಅನರ್ಹ ಶಾಸಕರ ಗತಿ ಏನು??

0
174

ರಾಜ್ಯದಲ್ಲಿ ಮತ್ತೆ ಚುನಾವಣೆ ಕಾಯು ಇಂದಿನಿಂದ ಶುರುವಾಗಿದ್ದು, ಕರ್ನಾಟಕ ಉಪ ಚುನಾವಣೆ, ಮಹಾರಾಷ್ಟ್ರ, ಹರ್ಯಾಣ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಕರ್ನಾಟಕದ 15 ಕ್ಷೇತ್ರಗಳಲ್ಲಿ ಉಪಚುನಾವಣೆ ಸೇರಿದಂತೆ ಎರಡು ರಾಜ್ಯಗಳಲ್ಲಿ ಅಕ್ಟೋಬರ್ 21 ರಂದು ಚುನಾವಣೆ ನಡೆಯಲಿದ್ದು, 24ಕ್ಕೆ ಮತ ಎಣಿಕೆಗೆ ಮಹೋರ್ತ ಫಿಕ್ಸ್ ಮಾಡಿದ್ದು. ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಿದೆ. ಎಂದು ಚುನಾವಣಾ ಆಯುಕ್ತ ಸುನಿಲ್ ಅರೋರಾ ಹೇಳಿದ್ದಾರೆ.

Also read: ಯಡಿಯೂರಪ್ಪ ಪತ್ನಿ ಅನುಮಾನಾಸ್ಪದ ಸಾವಿನ ಬಗ್ಗೆ ಎಚ್ ಡಿಕೆ ಪ್ರಸ್ತಾಪ; ಇನ್ನು ಎರಡ್ಮೂರು ತಿಂಗಳಲ್ಲಿ ಬಿಎಸ್‌ವೈ ಸರ್ಕಾರ ಪತನ ಕುಮಾರಸ್ವಾಮಿ ಭವಿಷ್ಯ.!

ಮರು ಚುನಾವಣೆಗೆ ದಿನಾಂಕ ಫಿಕ್ಸ್?

ಹೌದು ಕಾಂಗ್ರೆಸ್-ಜೆಡಿಎಸ್ ಶಾಸಕರ ರಾಜೀನಾಮೆಯಿಂದ ತೆರವಾಗಿದ್ದ 17 ವಿಧಾನಸಭೆ ಕ್ಷೇತ್ರದಲ್ಲಿ 15 ಕ್ಷೇತ್ರಕ್ಕೆ ಚುನಾವಣೆ ದಿನಾಂಕ ಪ್ರಕಟವಾಗಿದೆ. ಕೇಂದ್ರ ಚುನಾವಣೆ ಆಯೋಗವು ಇಂದು ಚುನಾವಣಾ ದಿನಾಂಕ ಪ್ರಕಟ ಮಾಡಿದ್ದು, ಎರಡು ಕ್ಷೇತ್ರಗಳಿಗೆ ನ್ಯಾಯಾಲಯದ ತಡೆಯಾಜ್ಞೆ ಇರುವ ಕಾರಣ ಚುನಾವಣಾ ದಿನಾಂಕ ಪ್ರಕಟವಾಗಿಲ್ಲ. ಅಕ್ಟೋಬರ್ 21 ರಂದು ಮತದಾನ ನಡೆಯಲಿದ್ದು, ಫಲಿತಾಂಶ ಅಕ್ಟೋಬರ್ 24 ಕ್ಕೆ ಪ್ರಕಟವಾಗಲಿದೆ. ಸೆಪ್ಟೆಂಬರ್ 23 ಕ್ಕೆ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಸೆಪ್ಟೆಂಬರ್ 30 ನಾಮಪತ್ರ ಸಲ್ಲಿಕೆ ಕೊನೆಯ ದಿನ ಆಗಿದೆ. ಆರ್.ಆರ್.ನಗರ ಮತ್ತು ಮಸ್ಕಿ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿಲ್ಲ. ನ್ಯಾಯಾಲಯದ ತಡೆಆಜ್ಞೆ ಇರುವ ಕಾರಣ ಈ ಎರಡು ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿಲ್ಲ.

ಉಪ ಚುನಾವಣೆ ನಡೆಯಲಿರುವ ಕ್ಷೇತ್ರಗಳು

ಗೋಕಾಕ್, ಅಥಣಿ, ಕಾಗವಾಡ, ಹಿರೆಕೆರೂರು, ಯಲ್ಲಾಪುರ, ಯಶವಂತಪುರ್,ವಿಜಯನಗರ, ಶಿವಾಜಿನಗರ, ಹೊಸಕೋಟೆ, ಹುಣಸೂರು, ಕೆಆರ್ ಪೇಟೆ, ಮಹಾಲಕ್ಷ್ಮಿ ಲೇಔಟ್, ಕೆಆರ್ ಪುರ, ರಾಣೇಬೆನ್ನೂರು, ಚಿಕ್ಕಬಳ್ಳಾಪುರದಲ್ಲಿ ಉಪಚುನಾವಣೆ ನಡೆದರೆ ಬೆಂಗಳೂರಿನ ರಾಜರಾಜೇಶ್ವರಿ ನಗರ ಮತ್ತು ರಾಯಚೂರಿನ ಮಸ್ಕಿ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುದಿಲ್ಲ. 2014ರ ಮಹಾರಾಷ್ಟ್ರ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್, ಶಿವಸೇನೆ, ಎನ್‍ಸಿಪಿ ಪ್ರತ್ಯೇಕವಾಗಿ ಸ್ಪರ್ಧೆ ನಡೆಸಿತ್ತು. ಹೀಗಾಗಿ ಯಾವೊಂದು ಪಕ್ಷ ಬಹುಮತ ಸಾಧಿಸಿರಲಿಲ್ಲ. ಬಹುಮತಕ್ಕೆ 145 ಸ್ಥಾನ ಬೇಕಿದ್ದು, ಬಿಜೆಪಿ 122, ಶಿವಸೇನೆ 63, ಕಾಂಗ್ರೆಸ್ 42, ಶರದ್ ಪವಾರ್ ನೇತೃತ್ವದ ಎನ್‍ಸಿಪಿ 41 ರಲ್ಲಿ ಜಯಗಳಿಸಿತ್ತು. ಬಿಜೆಪಿ, ಶಿವಸೇನೆ ಮೈತ್ರಿ ಮಾಡಿಕೊಂಡ ಹಿನ್ನೆಲೆಯಲ್ಲಿ ದೇವೇಂದ್ರ ಫಡ್ನಾವಿಸ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು.

ವಿಧಾನಸಭಾ ಕ್ಷೇತ್ರಗಳ ಪಟ್ಟಿ

ಚಿಕ್ಕಬಳ್ಳಾಪುರ, ಮಹಾಲಕ್ಷ್ಮಿ ಲೇಔಟ್(ಬೆಂಗಳೂರು), ಹೊಸಕೋಟೆ, ಹುಣಸೂರು, ಗೋಕಾಕ, ಯಶವಂತಪುರ, ಅಥಣಿ, ಕಾಗವಾಡ, ಶಿವಾಜಿನಗರ, ಕೆ.ಆರ್.ಪೇಟೆ, ಕೆ.ಆರ್.ಪುರಂ, ಹಿರೇಕೆರೂರು, ರಾಣೆಬೆನ್ನೂರು, ವಿಜಯನಗರ, ಯಲ್ಲಾಪುರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

ಅನರ್ಹ ಶಾಸಕರಿಗೆ ಶುರುವಾದ ನಡುಕ?

ವಿಶೇಷವೆಂದರೆ ಅನರ್ಹಗೊಂಡಿರುವ ಶಾಸಕರ ಅರ್ಜಿ ವಿಚಾರಣೆ ಸೋಮವಾರ ಸುಪ್ರೀಂಕೋರ್ಟ್‍ನಲ್ಲಿ ನಡೆಯಲಿದೆ. ಈ ಬೆಳವಣಿಗೆಗಳ ನಡುವೆಯೇಕೇಂದ್ರ ಚುನಾವಣಾ ಆಯೋಗದ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆಯನ್ನು ಘೋಷಣೆ ಮಾಡಿರುವುದು ಅತಿ ಮಹತ್ವ ಎನಿಸಿದೆ. ಒಂದು ವೇಳೆ ಹಿಂದಿನ ವಿಧಾನಸಭೆ ಸ್ಪೀಕರ್ ಅವರ ಆದೇಶಕ್ಕೆ ಸೋಮವಾರ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದರೆ ಮಾತ್ರ ಅನರ್ಹಗೊಂಡಿರುವ ಶಾಸಕರು ಚುನಾವಣೆಯಲ್ಲಿ ಸ್ಪರ್ಧಿಸಲು ಅರ್ಹತೆ ಪಡೆಯುತ್ತಾರೆ. ಇಲ್ಲದಿದ್ದರೆ ಅವರುಗಳ ರಾಜಕೀಯ ಭವಿಷ್ಯ ಅತಂತ್ರವಾಗಲಿದೆ. ನವದೆಹಲಿಯಲ್ಲಿಂದು ಮಹಾರಾಷ್ಟ್ರ ಮತ್ತು ಹರಿಯಾಣ ರಾಜ್ಯದ ವಿಧಾನಸಭಾ ಕ್ಷೇತ್ರಗಳ ಚುನಾವಣೆ ದಿನಾಂಕವನ್ನು ಘೋಷಣೆ ಮಾಡಿದ ಕೇಂದ್ರಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ, ಕರ್ನಾಟಕದ 17 ವಿಧಾನಸಭಾ ಕ್ಷೇತ್ರಗಳಲ್ಲಿ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ದಿನಾಂಕವನ್ನು ಪ್ರಕಟಿಸಿದರು.

Also read: ಹಲವು ನಿರಾಶೆಗಳ ನಂತರ ಉಕ್ರೇನ್‌ನಲ್ಲಿ ಅರೆ-ಕ್ರಯೋಜೆನಿಕ್ ಎಂಜಿನ್ ಪರೀಕ್ಷೆಗೆ ಮುಂದಾದ ಇಸ್ರೋ; ಏನಿದು ಕ್ರಯೋಜೆನಿಕ್ ಎಂಜಿನ್??