ECIL ಗ್ರಾಜುಯೇಟ್ ಇಂಜಿನಿಯರ್ ಟ್ರೈನಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

0
86

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಇಲೆಕ್ಟ್ರಾನಿಕ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ (ECIL) 64 ಗ್ರಾಜುಯೇಟ್ ಇಂಜಿನಿಯರ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು, ಅಧಿಕೃತ ವೆಬ್‌ಸೈಟ್‌ ಮೂಲಕ ಜನವರಿ 4,2020ರೊಳಗೆ ಅರ್ಜಿ ಸಲ್ಲಿಸಬೇಕು.

Also read: ಬೆಂಗಳೂರು ನಗರ ಜಿಲ್ಲೆಯ ಹೆಬ್ಬಗೋಡಿ, ಅತ್ತಿಬೆಲೆ ಮತ್ತು ಚಂದಾಪುರ ನಗರಸಭೆಯಲ್ಲಿ ಖಾಲಿ ಇರುವ ಪೌರಕಾರ್ಮಿಕ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಗ್ರಾಜುಯೇಟ್ ಇಂಜಿನಿಯರ್ ಟ್ರೈನಿ

ಸಂಸ್ಥೆ (Organisation): ಇಲೆಕ್ಟ್ರಾನಿಕ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ (ECIL)

ವೇತನ (Salary Scale): ತಿಂಗಳಿಗೆ 48,160/- ರೂ ಸ್ಟೈಫೆಂಡ್

ವಿದ್ಯಾರ್ಹತೆ (Educational Qualification): ಗ್ರಾಜುಯೇಟ್ ಇಂಜಿನಿಯರ್ ಟ್ರೈನಿ ಹುದ್ದೆಗಳಿಗೆ ಸಂಬಂಧಪಟ್ಟ ವಿಷಯಗಳಲ್ಲಿ ಇಂಜಿನಿಯರಿಂಗ್ ಪದವಿಯನ್ನು ಎಐಸಿಟಿಇ ಇಂದ ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಉದ್ಯೋಗ ಸ್ಥಳ (Job Location): ಭಾರತದೆಲ್ಲೆಡೆ

ವಯೋಮಿತಿ: ನವೆಂಬರ್ 30,2019ರ ಅನ್ವಯ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಓಬಿಸಿ/ಮಾಜಿ ಸೈನಿಕ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಸರ್ಕಾರದ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು 2018 ಮತ್ತು 2019ರ ಗೇಟ್ ಪರೀಕ್ಷೆಯ ಅಂಕಗಳ ಆಧಾರದ ಮೇಲೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಸಾಮಾನ್ಯ/ಓಬಿಸಿ / ಮಾಜಿ ಸೈನಿಕ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಇಲೆಕ್ಟ್ರಾನಿಕ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ( ECIL)ನ ಅಧಿಕೃತ ವೆಬ್‌ಸೈಟ್‌ http://www.ecil.co.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಮಾಡುವ ಮೂಲಕ ಜನವರಿ 4,2020ರ
ಒಳಗೆ ಅರ್ಜಿ ಸಲ್ಲಿಸಬೇಕು.