ಇಲೆಕ್ಟ್ರಾನಿಕ್ ಕಾರ್ಪೋರೇಶನ್ ಆಫ್ ಇಂಡಿಯಾ 200 ಜ್ಯೂನಿಯರ್ ಟೆಕ್ನಿಕಲ್ ಅಧಿಕಾರಿ ಹುದ್ದೆಗಳ ನೇಮಕಾತಿ

0
49

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಇಲೆಕ್ಟ್ರಾನಿಕ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ( ECIL) 200 ಜ್ಯೂನಿಯರ್ ಟೆಕ್ನಿಕಲ್ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಅಕ್ಟೋಬರ್ 11,2019ರೊಳಗೆ ಅರ್ಜಿ ಸಲ್ಲಿಸಬೇಕು.

Also read: 10 ನೇ ತರಗತಿ ಪಾಸದವರಿಗೆ ವೆಸ್ಟ್​ ಸೆಂಟ್ರಲ್ ರೈಲ್ವೆಯ ವಿವಿಧ ವಿಭಾಗಗಳಲ್ಲಿ ಹುದ್ದೆಗಳು.!

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಜ್ಯೂನಿಯರ್ ಟೆಕ್ನಿಕಲ್ ಅಧಿಕಾರಿ

ಸಂಸ್ಥೆ (Organisation): ಇಲೆಕ್ಟ್ರಾನಿಕ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ( ECIL)

ವಿದ್ಯಾರ್ಹತೆ (Educational Qualification): ಜ್ಯೂನಿಯರ್ ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಂಜಿನಿಯರಿಂಗ್‌ನಲ್ಲಿ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಹೊಂದಿರಬೇಕು.

ಉದ್ಯೋಗ ಸ್ಥಳ (Job Location): ಭಾರತದೆಲ್ಲೆಡೆ

ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸೆಪ್ಟೆಂಬರ್ 30,1989ರ ನಂತರ ಜನಿಸಿರಬೇಕು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಕಿರುಪಟ್ಟಿಯನ್ನು ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ದಾಖಲೆಗಳ ಪರಿಶೀಲನೆಗೆ ಕರೆಯಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಇಲೆಕ್ಟ್ರಾನಿಕ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ( ECIL)ನ ಅಧಿಕೃತ ವೆಬ್‌ಸೈಟ್‌ http://www.ecil.co.in/ ಗೆ ಭೇಟಿ ನೀಡಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅಕ್ಟೋಬರ್ 11,2019ರೊಳಗೆ ಅರ್ಜಿ ಸಲ್ಲಿಸಬೇಕು.

ನ ಮಾಹಿತಿಗಾಗಿ: http://www.ecil.co.in/ ಕ್ಲಿಕ್ ಮಾಡಿ.