ಇಲೆಕ್ಟ್ರಾನಿಕ್ಸ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ ಸೈಂಟಿಫಿಕ್ ಅಸಿಸ್ಟೆಂಟ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
166

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಇಲೆಕ್ಟ್ರಾನಿಕ್ಸ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ (ECIL) ಸೈಂಟಿಫಿಕ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ವೆಬ್‌ಸೈಟ್‌ ಮೂಲಕ ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 3,2019 ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

Also read: ಯುಪಿಎಸ್‌ಸಿ ಅಸಿಸ್ಟೆಂಟ್ ಪ್ರೊಫೆಸರ್ ಮತ್ತು ಡೆಪ್ಯುಟಿ ಡೈರೆಕ್ಟರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಸೈಂಟಿಫಿಕ್ ಅಸಿಸ್ಟೆಂಟ್-ಎ

ಸಂಸ್ಥೆ (Organisation): ಇಲೆಕ್ಟ್ರಾನಿಕ್ಸ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ (ಇಸಿಐಎಲ್‌)

ವಿದ್ಯಾರ್ಹತೆ (Educational Qualification): ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಇಂಜಿನಿಯರಿಂಗ್‌ನಲ್ಲಿ ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಉದ್ಯೋಗ ಸ್ಥಳ (Job Location): ಕೈಗಾ (ಕರ್ನಾಟಕ)

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (Application End Date): August 3, 2019

ವಯೋಮಿತಿ: ಜೂನ್ 30,2019ರ ಅನ್ವಯ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ , ಪ್ರಾಯೋಗಿಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ.

ಸಂದರ್ಶನದ ವಿವರ: ಅಭ್ಯರ್ಥಿಗಳು ಇಸಿಐಎಲ್‌ನ ಅಧಿಕೃತ ವೆಬ್‌ಸೈಟ್‌ http://www.ecil.co.in/ ಗೆ ಹೋಗಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 3,2019 ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಸಂದರ್ಶನ ನಡೆಯುವ ಸ್ಥಳ: ಮಂತ್ರ ರೆಸಿಡೆನ್ಸಿ, ಬಸವ ವನ ಎದುರು, ಹಳೆ ಬಸ್‌ ನಿಲ್ದಾಣದ ಹತ್ತಿರ, ಹುಬ್ಬಳ್ಳಿ, ಕರ್ನಾಟಕ-580020

ಹೆಚ್ಚಿನ ಮಾಹಿತಿಗಾಗಿ: http://www.ecil.co.in/ ಕ್ಲಿಕ್ ಮಾಡಿ.