ರೈಲ್ವೆ ಇಲಾಖೆಯಲ್ಲಿ ಮಹಿಳೆಯರಿಗೆ ಭರ್ಜರಿ ನೇಮಕಾತಿ; ಮಹಿಳೆಯರಿಗೆ 50% ಮೀಸಲಾತಿ..

0
496

ಉದ್ಯೋಗದ ನಿರೀಕ್ಷೆಯಲ್ಲಿರುವ ಮಹಿಳೆಯರಿಗೆ ರೈಲ್ವೆ ಇಲಾಖೆ ಭರ್ಜರಿ ಉದ್ಯೋಗ ನೀಡಲು ತಯಾರಿ ನಡೆಸಿದೆ. ಅದರಂತೆ ಭಾರತೀಯ ರೈಲ್ವೆ ಶೀಘ್ರದಲ್ಲೇ 4500 ಹುದ್ದೆಗಳಲ್ಲಿ ಮಹಿಳೆಯರಿಗೆ ರೈಲ್ವೆ ಪ್ರೊಟೆಕ್ಷನ್ ಫೋರ್ಸ್ (ಆರ್‌ಪಿಎಫ್) ನಲ್ಲಿ ನೇಮಕಾತಿಗಳನ್ನು ಮಾಡಿಕೊಳ್ಳಲಿದೆ.

Also read: ಉದ್ಯೋಗಿಗಳ ಭವಿಷ್ಯನಿಧಿ ಸಂಸ್ಥೆ 2189 ಸೋಶಿಯಲ್ ಸೆಕ್ಯುರಿಟಿ ಅಸಿಸ್ಟೆಂಟ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಈ ನೇಮಕಾತಿ ಪ್ರಕಟಣೆಯನ್ನು ಇದೆ ತಿಂಗಳ ಹೊರಡಿಸುವ ಸೂಚನೆ ಇದ್ದು, ರೈಲ್ವೆ ಇಲಾಖೆಯಲ್ಲಿ ಒಟ್ಟು 9000 ಹುದ್ದೆಗಳಿಗೆ ನೇಮಕಾತಿ ಮಾಡಲಾಗುವುದು ಎಂದು ರೈಲ್ವೆ ಸಚಿವ ಪಿಯೂಷ್ ಗೋಯಲ್ ತಿಳಿಸಿದ್ದಾರೆ. ಏಕೆಂದರೆ RPF ನಲ್ಲಿ ಮಹಿಳೆಯರು ಕಡಿಮೆ ಸಂಖ್ಯೆಯಲ್ಲಿ ಇರುವುದರಿಂದ ಅವರಿಗೆ ಶೇಕಡಾ 50ರಷ್ಟು ಮೀಸಲಾತಿ ನೀಡಲಾಗುವುದು ಎಂದು ರಾಜ್ಯಸಭೆಯಲ್ಲಿ ಶುಕ್ರವಾರ ಮಾತನಾಡಿದ ಗೋಯಲ್, RPF ನಲ್ಲಿ ಪ್ರಸ್ತುತ 2.25 ರಷ್ಟು ಮಹಿಳೆಯರಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಹೆಚ್ಚಿನ ಮಹಿಳೆಯರನ್ನು ನೇಮಕ ಮಾಡಿಕೊಳ್ಳಬೇಕೆಂದು ಪ್ರಧಾನಿ ವಿಶೇಷ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮಹಿಳೆಯರಿಗಾಗಿ ಶೇ. 50 ಸ್ಥಾನಗಳನ್ನು ಕಾಯ್ದಿರಿಸಲಾಗಿದೆ.

Also read: ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ IDBI ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಅದರಂತೆ ನೇಮಕಾತಿ ಬಗ್ಗೆ ಬಗ್ಗೆ ಟ್ವೀಟ್ ಮಾಡಿರುವ ಗೋಯಲ್, “ರೈಲ್ವೆಯಲ್ಲಿ ಸುಮಾರು 9,000 ಕಾನ್‌ಸ್ಟೆಬಲ್‌ಗಳು ಮತ್ತು ಸಬ್ ಇನ್ಸ್‌ಪೆಕ್ಟರ್‌ಗಳ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುವುದು. ಇದರಲ್ಲಿ 50% ಮಹಿಳೆಯರನ್ನು ತೆಗೆದುಕೊಳ್ಳಲಾಗುವುದು. ಇದು ಮಹಿಳೆಯರ ಸಬಲೀಕರಣವನ್ನು ಖಚಿತಪಡಿಸುತ್ತದೆ, ಜೊತೆಗೆ ರೈಲ್ವೆ ಸಂರಕ್ಷಣಾ ಪಡೆಯಲ್ಲಿ ಅವರ ಪ್ರಾತಿನಿಧ್ಯ ಹೆಚ್ಚಾಗುತ್ತದೆ” ಎಲ್ಲ ಹುದ್ದೆಗಳಲ್ಲಿ ಮಹಿಳೆಯರ ಪಾತ್ರ ಬಹುಮುಖ್ಯವಾಗಿದೆ. ರೈಲ್ವೆ ಇಲಾಖೆಯಲ್ಲಿರುವ ಮಹಿಳೆಯರು ಯಾರ ಸಹಾಯ ವಿಲ್ಲದೆ ಕೆಲಸ ಮಾಡುತ್ತಿದ್ದಾರೆ. ಅದಕ್ಕಾಗಿ ಮಹಿಳೆಯರಿಗೆ ಅರ್ಧದಷ್ಟು ಮಿಸಲಾತಿ ನೀಡುತ್ತಿದೆ ಎಂದು ಹೇಳಿದ್ದಾರೆ.