ಉದ್ಯೋಗಿಗಳ ಭವಿಷ್ಯನಿಧಿ ಸಂಸ್ಥೆ 280 ಅಸಿಸ್ಟೆಂಟ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
379

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಉದ್ಯೋಗಿಗಳ ಭವಿಷ್ಯನಿಧಿ ಸಂಸ್ಥೆ 280 ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌-ನಲ್ಲಿ ಜೂನ್ 25,2019 ರೊಳಗೆ ಅರ್ಜಿ ಸಲ್ಲಿಸಬೇಕು.

Also read: ಭಾರತೀಯ ಜೀವ ವಿಮಾ ನಿಗಮ (LIC) 8581 ಅಪ್ರೆಂಟಿಸ್ ಡೆವಲಪ್ಮೆಂಟ್ ಆಫೀಸರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಅಸಿಸ್ಟೆಂಟ್

ಸಂಸ್ಥೆ (Organisation): ಉದ್ಯೋಗಿಗಳ ಭವಿಷ್ಯನಿಧಿ ಸಂಸ್ಥೆ

ವಿದ್ಯಾರ್ಹತೆ (Educational Qualification): ಅಸಿಸ್ಟೆಂಟ್ ಹುದ್ದೆಗಳಿಗೆ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಉದ್ಯೋಗ ಸ್ಥಳ (Job Location): ಭಾರತದೆಲ್ಲೆಡೆ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (Application End Date): June 25, 2019

ವಯೋಮಿತಿ: ಅರ್ಜಿದಾರರು ಕನಿಷ್ಟ 20 ಮತ್ತು ಗರಿಷ್ಟ 27 ವರ್ಷ ವಯೋಮಿತಿಯೊಳಗಿನವರಾಗಿರಬೇಕು.ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ಓದಬಹುದು.

ವೇತನದ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 44,900/-ರೂ ವೇತನವನ್ನು ಪಡೆಯಬಹುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 500/-ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪಿಡಬ್ಲ್ಯೂಡಿ , ಮಹಿಳಾ ಅಭ್ಯರ್ಥಿಗಳು ಮತ್ತು ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 250/-ರೂ ಅನ್ನು ಆನ್‌ಲೈನ್‌ ಮೂಲಕ ಪಾವತಿಸಬಹುದು.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಇಪಿಎಫ್‌ಓನ ಅಧಿಕೃತ ವೆಬ್‌ಸೈಟ್‌ https://www.epfindia.gov.in/site_en/index.php ನಲ್ಲಿ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಮಾಹಿತಿಯನ್ನು ಭರ್ತಿ ಮಾಡಿ. ಮೇ 30,2019 ರಿಂದ ಜೂನ್ 25,2019 ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ: https://www.epfindia.gov.in/site_en/index.php ಕ್ಲಿಕ್ ಮಾಡಿ.