ಇಎಸ್‌ಐಸಿ ಸೀನಿಯರ್ ರೆಸಿಡೆಂಟ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
168

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ರಾಜ್ಯ ನೌಕರರ ವಿಮಾ ನಿಗಮವು ಸೀನಿಯರ್ ರೆಸಿಡೆಂಟ್ ಸ್ಕೀಮ್‌ನ ಅಡಿಯಲ್ಲಿ ಹಲವು ಸೀನಿಯರ್ ರೆಸಿಡೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ವೆಬ್‌ಸೈಟ್ ನಲ್ಲಿ ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು September 3, 2019 ರ ಒಳಗೆ ಅರ್ಜಿ ಸಲ್ಲಿಸಬೇಕು.

Also read: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಸೀನಿಯರ್ ರೆಸಿಡೆಂಟ್

ಸಂಸ್ಥೆ (Organisation): ರಾಜ್ಯ ನೌಕರರ ವಿಮಾ ನಿಗಮ ( ಇಎಸ್‌ಐಸಿ ಕರ್ನಾಟಕ)

ವಿದ್ಯಾರ್ಹತೆ (Educational Qualification): ಪೋಸ್ಟ್ ಗ್ರಾಜುಯೇಟ್‌ ಪದವಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಉದ್ಯೋಗ ಸ್ಥಳ (Job Location): ಬೆಂಗಳೂರು (ಕರ್ನಾಟಕ)

ವಯೋಮಿತಿ: ಸೆಪ್ಟೆಂಬರ್ 3,2019ರ ಅನ್ವಯ ಗರಿಷ್ಠ 37 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ , ಪರಿಶಿಷ್ಟ ಜಾತಿ , ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವೇತನದ ವಿವರ:
ಸೀನಿಯರ್ ರೆಡಿಸೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 67,700/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ವಾಕ್ -ಇನ್ ಇಂಟರ್ವ್ಯೂ: ಅಭ್ಯರ್ಥಿಗಳು ಇಎಸ್‌ಐಸಿಯ ಅಧಿಕೃತ ವೆಬ್‌ಸೈಟ್‌ https://www.esic.nic.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸೆಪ್ಟೆಂಬರ್ 3 ಮತ್ತು 4 ರಂದು ನಡೆಯುವ ವಾಕ್‌-ಇನ್‌ ಇಂಟರ್‌ವ್ಯೂ ನಲ್ಲಿ ಭಾಗವಹಿಸಬಹುದು.

ಸಂದರ್ಶನ ನಡೆಯುವ ಸ್ಥಳ: ಇಎಸ್‌ಐಸಿ ವೈದ್ಯಕೀಯ ಕಾಲೇಜು, ಹೊಸ ಶೈಕ್ಷಣಿಕ ಕಟ್ಟಡ ರಾಜಾಜಿನಗರ, ಬೆಂಗಳೂರು-560010.

ಹೆಚ್ಚಿನ ಮಾಹಿತಿಗಾಗಿ: https://www.esic.nic.in/