ಉದ್ಯೋಗಿಗಳ ಭವಿಷ್ಯನಿಧಿ ಸಂಸ್ಥೆ 2189 ಸೋಶಿಯಲ್ ಸೆಕ್ಯುರಿಟಿ ಅಸಿಸ್ಟೆಂಟ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
246

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಉದ್ಯೋಗಿಗಳ ಭವಿಷ್ಯನಿಧಿ ಸಂಸ್ಥೆ 2189 ಸೋಶಿಯಲ್ ಸೆಕ್ಯುರಿಟಿ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಮೂಲಕ ಜುಲೈ 21,2019 ರ ಒಳಗೆ ಅರ್ಜಿ ಸಲ್ಲಿಸಬೇಕು.

Also read: ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ IDBI ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಸೋಶಿಯಲ್ ಸೆಕ್ಯುರಿಟಿ ಅಸಿಸ್ಟೆಂಟ್

ಸಂಸ್ಥೆ (Organisation): ಉದ್ಯೋಗಿಗಳ ಭವಿಷ್ಯನಿಧಿ ಸಂಸ್ಥೆ (ಇಪಿಎಫ್‌ಓ)

ವಿದ್ಯಾರ್ಹತೆ (Educational Qualification): ಸೋಶಿಯಲ್ ಸೆಕ್ಯುರಿಟಿ ಅಸಿಸ್ಟೆಂಟ್ ಹುದ್ದೆಗಳಿಗೆ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ: ಕನಿಷ್ಟ 18 ರಿಂದ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ: ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,500/-ರೂ ವೇತನವನ್ನು ನೀಡಲಾಗುವುದು

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಕಂಪ್ಯೂಟರ್ ಕೌಶಲ್ಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪಿಡಬ್ಲ್ಯೂಬಿಡಿ / ಮಹಿಳಾ ಅಭ್ಯರ್ಥಿ/ ಮಾಜಿ ಸೈನಿಕ ಅಭ್ಯರ್ಥಿಗಳು 250/-ರೂ ಮತ್ತು ಸಾಮಾನ್ಯ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬಹುದು.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಉದ್ಯೋಗಿಗಳ ಭವಿಷ್ಯನಿಧಿಯ ಅಧಿಕೃತ ವೆಬ್‌ಸೈಟ್‌ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ 21,2019 ರೋಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ: https://kannada.careerindia.com/downloads/2019/6/epfo-apply-online-for-2189-social-security-assistant-posts-advt-details.pdf ಕ್ಲಿಕ್ ಮಾಡಿ.