ಭಾರತೀಯ ಆಹಾರ ನಿಗಮದಲ್ಲಿ 330 ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

0
314

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಭಾರತೀಯ ಆಹಾರ ನಿಗಮದಲ್ಲಿ ಭಾರತದೆಲ್ಲೆಡೆ ಡಿಪೋಗಳು ಮತ್ತು ಕಛೇರಿಗಳಿಗೆ ಖಾಲಿ ಇರುವ 330 ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ನೋಡಿ ಆನ್‌ಲೈನ್ ಮೂಲಕ ಅಕ್ಟೋಬರ್ 27,2019ರ ಒಳಗೆ ಅರ್ಜಿ ಸಲ್ಲಿಸಬೇಕು.

Also read: ಕೇಂದ್ರ ಲೋಕ ಸೇವಾ ಆಯೋಗ 495 ಇಂಜಿನಿಯರಿಂಗ್ ಸರ್ವೀಸಸ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಮ್ಯಾನೇಜರ್

ಸಂಸ್ಥೆ (Organisation): ಭಾರತೀಯ ಆಹಾರ ನಿಗಮ (ಎಫ್‌ಸಿಐ)

ವಿದ್ಯಾರ್ಹತೆ (Educational Qualification): ಪದವಿ,ಬಿ.ಎಸ್ಸಿ, ಬಿ.ಇ ಮತ್ತು ಸ್ನಾತಕೋತ್ತರ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ
ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ: ಸೆಪ್ಟೆಂಬರ್ 1,2019ರ ಅನ್ವಯ ಗರಿಷ್ಟ 28 ಮತ್ತು 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, 800/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಭಾರತೀಯ ಆಹಾರ ನಿಗಮ (ಎಫ್‌ಸಿಐ)ದ ಅಧಿಕೃತ ವೆಬ್‌ಸೈಟ್‌ http://www.fci.gov.in/ ಗೆ ಭೇಟಿ ನೀಡಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅಕ್ಟೋಬರ್ 27,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ: http://www.fci.gov.in/ ಕ್ಲಿಕ್ ಮಾಡಿ.