ಸಾವಿರಾರು ಫೋನ್ ಕಾಲ್ ಟ್ಯಾಪಿಂಗ್ ಮಾಡಿಸಿದ್ರ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ? ಪ್ರಾಥಮಿಕ ತನಿಖೆಯಿಂದ ಬೆಳಕಿಗೆ..

0
218

ಮೈತ್ರಿ ಸರ್ಕಾರದ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ವಿರುದ್ದ ಫೋನ್ ಟ್ಯಾಪಿಂಗ್ ಆರೋಪ ಕೇಳಿಬರುತ್ತಿದ್ದು. ಇದರ ಹಿಂದೆ ದೊಡ್ಡ ಜಾಲವೇ ಅಡಗಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಇದೆಲ್ಲ ಮೈತ್ರಿ ಸರ್ಕಾರ ಬಿಳ್ಳುವ ಮುನ್ನ ಯಡಿಯೂರಪ್ಪ, ಸಿದ್ದರಾಮಯ್ಯ, ಸೇರಿ ಹಲವು ಸಚಿವರ, ಮತ್ತು ಅನರ್ಹ ಶಾಸಕರ ಕರೆಯನ್ನು ಕದ್ದು ಕುಮಾರಸ್ವಾಮಿಯ ತಂಡ ಕೇಳುತ್ತಿತ್ತು ಇದರಲ್ಲಿ ಒಟ್ಟಾರೆ 35 ಜಿಬಿ ಆಡಿಯೋ ರೆಕಾರ್ಡ್, 6 ಸಾವಿರ ಕರೆ ಕದ್ದಾಲಿಕೆಯಾಗಿದೆ ಎನ್ನುವ ಬಗ್ಗೆ ಪ್ರಾಥಮಿಕ ತನಿಖೆಯಿಂದ ಬೆಳಕಿಗೆ ಬಂದಿದ್ದು, ಸರ್ಕಾರ ಇಂದು ಈ ಪ್ರಕರಣವನ್ನು ಸಿಐಡಿಗೆ ನೀಡಲು ನಿರ್ಧರಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Also read: ಕರ್ನಾಟಕದ ಪ್ರವಾಹಕ್ಕೆ ಮಿಡಿಯದ ಮೋದಿ ಸರ್ಕಾರ? ರಾಜ್ಯದ ತುಂಬೆಲ್ಲ ಸರ್ಕಾರ ವಿರುದ್ಧ ಜನರ ಆಕ್ರೋಶ..

ಈ ಬಗ್ಗೆ ಅಧಿಕೃತ ಹೇಳಿಕೆ ನೀಡಿದ ವಿಶ್ವಾನಾಥ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕಾಂಗ್ರಸ್ ಹಾಗೂ ಜೆಡಿಎಸ್ ನ 17 ಜನ ಶಾಸಕರ ದೂರವಾಣಿ ಕರೆಗಳನ್ನು ಕದ್ದಾಲಿಸಲಾಗಿದೆ ಮತ್ತು ಹೀಗೆ ಮಾಡುವುದಕ್ಕೆ ಸ್ವತಃ ಮುಖ್ಯಮಂತ್ರಿಗಳ ಕಛೇರಿಯಿಂದಲೇ ಸೂಚನೆ ಹೋಗಿತ್ತು ಎಂಬ ಸ್ಪೋಟಕ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬಯಿಯಲ್ಲಿದ್ದ ನಮಗೆ ಬೆಂಗಳೂರಿನಿಂದ ಪದೇ ಪದೇ ಕರೆಗಳು ಬರುತ್ತಿದ್ದವು. ಮತ್ತು ನಿಮ್ಮ ದಾಖಲೆಗಳೆಲ್ಲಾ ನಮಗೆ ಸಿಕ್ಕಿವೆ ನೀವು ತಕ್ಷಣ ವಾಪಾಸು ಬರಲೇಬೇಕು ಎಂದು ಬೆದರಿಸುವ ಧ್ವನಿಯಲ್ಲಿ ಮಾತನಾಡುತ್ತಿದ್ದರು. ಹಾಗೆ ಬರುತ್ತಿದ್ದ ಕರೆಗಳು ಮುಖ್ಯಮಂತ್ರಿ ಕಛೇರಿಯಿಂದಲೇ ಬರುತ್ತಿದ್ದವು ಎಂಬ ಗಂಭೀರವಾದ ಆರೋಪವನ್ನು ವಿಶ್ವನಾಥ್ ಅವರು ಮಾಡಿದ್ದಾರೆ.

ಕರೆ ಕದ್ದಾಲಿಕೆ ಹಿಂದೆ ದೊಡ್ಡ ಅಧಿಕಾರಿಗಳು?

Also read: ಸಿಕ್ಕ ಅವಕಾಶವನ್ನು ಕಳೆದುಕೊಳ್ಳುವ ಭಯದಲ್ಲಿ ಪ್ರವಾಹಕ್ಕೆ ಸೆಡ್ಡು ಹೊಡೆದು 2.5 ಕಿಮೀ ಈಜಿ, ಬೆಳ್ಳಿ ಪದಕ ಗೆದ್ದ ಬೆಳಗಾವಿಯ ಬಾಕ್ಸರ್!

ದೊಡ್ಡ ದೊಡ್ಡ ಹೆಸರು ಕೇಳಿ ಬಂದ ಹಿನ್ನೆಲೆಯಲ್ಲಿ ಸಿಸಿಬಿಯ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ನೇತೃತ್ವದಲ್ಲಿ ಪ್ರಾಥಮಿಕ ತನಿಖೆ ಈಗಾಗಲೇ ನಡೆದಿದೆ. ಸಂದೀಪ್ ಪಾಟೀಲ್ ಹಿರಿಯ ಪೊಲೀಸ್ ಅಧಿಕಾರಿಯ ಸೂಚನೆಯ ಮೇರೆಗೆ ಫೋನ್ ಕದ್ದಾಲಿಕೆ ನಡೆದಿದೆ ಎಂದು ವರದಿ ನೀಡಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಸರ್ಕಾರ ಬೀಳಿಸುವ ಸಂದರ್ಭದಲ್ಲಿ ಸಿದ್ದರಾಮಯ್ಯ ಮತ್ತು ಯಡಿಯೂರಪ್ಪನವರ ಕರೆಗಳನ್ನು ಕದ್ದಾಲಿಸಲಾಗಿದೆ ಎನ್ನುವ ಗಂಭೀರ ಆರೋಪ ಈಗ ಎಚ್‍ಡಿಕೆಯ ಮೇಲೆ ಬಂದಿದೆ. ಮಾಧ್ಯಮಗಳ ಜೊತೆ ಮಾತನಾಡಿದ್ದ ಬಿಜೆಪಿ ಮುಖಂಡ ಆರ್. ಅಶೋಕ್, ಕುಮಾರಸ್ವಾಮಿ ಅವಧಿಯಲ್ಲಿ ರಾಜ್ಯ ನಾಯಕರ ಫೋನ್ ಕರೆ ಟ್ಯಾಪ್ ಮಾಡಲಾಗುತ್ತಿದೆ ಎಂದು ಹೇಳಿದ್ದೆ. ಅದು ಈಗ ನಿಜವಾಗಿದೆ. ಸಿದ್ದರಾಮಯ್ಯನವರ ಮೇಲೆ ಕುಮಾರಸ್ವಾಮಿ ಅವರಿಗೆ ನಂಬಿಕೆ ಇರಲಿಲ್ಲ. ಹೀಗಾಗಿ ಅವರ ಫೋನನ್ನು ಕದ್ದಾಲಿಸಲಾಗಿದೆ ಎಂದು ಅಶೋಕ್ ಆರೋಪಿಸಿದ್ದಾರೆ.

Also read: ನೆರೆ ಸಂತ್ರಸ್ತರಿಗೆ ಬೇಕಾಬಿಟ್ಟಿ ಹಣ ಕೊಡಲು ನೋಟ್​ ಪ್ರಿಂಟ್​ ಮಾಡಲ್ಲ ಎಂದ ಯಡಿಯೂರಪ್ಪ; ಹಾಗಾದ್ರೆ ಸಂತ್ರಸ್ತರಿಗೆ ಪರಿಹಾರ ಸಿಗುವುದು ನಿಜವಾ??

ಅದರಂತೆ ಕ್ರಿಮಿನಲ್ ಕೃತ್ಯ ಎಸಗಲಿರುವವರನ್ನು, ಎಸಗಿದವರನ್ನು ಎಲ್ಲೇ ಅಡಗಿದ್ದರೂ ಪತ್ತೆ ಹಚ್ಚಿ ಅವರನ್ನು ಪತ್ತೆ ಹಚ್ಚಲು ಫೋನ್ ಕದ್ದಾಲಿಕೆ ಮಾಡಲಾಗುತ್ತದೆ. ಕಾನೂನಿನ ಅನ್ವಯ ಸರ್ಕಾರದ ಕೆಲವೇ ಇಲಾಖೆಗಳಿಗೆ ಮಾತ್ರ ಫೋನ್ ಕದ್ದಾಲಿಕೆ ಮಾಡಲು ಅವಕಾಶವಿದ್ದು, ಈಗ ಕೆಲವು ಸಮಾಜ ಘಾತುಕ ಶಕ್ತಿಗಳು ಫೋನ್ ಟ್ಯಾಪಿಂಗ್ ಮಾಡಲು ಆರಂಭಿಸಿವೆ. ಇಂದು ರಾಜಕಾರಣಿಗಳು, ಗಣ್ಯ ವ್ಯಕ್ತಿಗಳ ಫೋನ್ ಟ್ಯಾಪಿಂಗ್ ಹೆಚ್ಚಾಗುತ್ತಿದ್ದು, ಅಡಳಿತ ಪಕ್ಷದ ವಿರುದ್ಧ ವಿರೋಧಿ ಪಕ್ಷಗಳು ಫೋನ್ ಕದ್ದಾಲಿಕೆ ಆರೋಪ ಮಾಡುತ್ತಿದೆ. ಒಂದು ವೇಳೆ ಕುಮಾರಸ್ವಾಮಿ ಫೋನ್ ಟ್ಯಾಪಿಂಗ್ ಪ್ರಕರಣದಲ್ಲಿ ತಪ್ಪು ಮಾಡಿದ್ದು ಸತ್ಯವಾದರೆ ಯಾವ ಶಿಕ್ಷೆ ನೀಡಲಾಗುತ್ತೆ ಎನ್ನುವುದು ಕಾದು ನೋಡಬೇಕಿದೆ.