ಜಯದೇವದಲ್ಲಿ ಅಕ್ಟೋಬರ್‌ 10 ರಿಂದ 11ವರೆಗೆ ಉಚಿತ ಸ್ಟಂಟ್‌ ಅಳವಡಿಸಲಾಗುವುದು..!! ಸಾದ್ಯವಾದಷ್ಟು ಬಡಜನರಿಗೆ ಇ ಸುದ್ದಿಯನ್ನು ತಲುಪಿಸಿ..

0
792

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಬಡ ರೋಗಿಗಳಿಗೆ ಉಚಿತವಾಗಿ ಸ್ಟಂಟ್‌ಗಳನ್ನು ಅಳವಡಿಸುವ  ಕಾರ್ಯಾಗಾರವನ್ನು ಹಮ್ಮಿಕೊಳ್ಳ ಲಾಗಿದೆ. ನಿಮಗೆ ಗೊತ್ತಿರುವ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೆ ತಪ್ಪದೆ ತಿಳಿಸಿ..

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಬಡ ರೋಗಿಗಳಿಗೆ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಆಶ್ರಯದಲ್ಲಿ ಉಚಿತ ಆ್ಯಂಜಿಯೋಪ್ಲಾಸ್ಟಿ ಕಾರ್ಯಾಗಾರ ಅಕ್ಟೋಬರ್‌ 10 ರಿಂದ 11ರವರೆಗೆ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ನಡೆಯಲಿದೆ. ಅಕ್ಟೋಬರ್‌ 12, 13ರಂದು ಮೈಸೂರಿನ ಜಯದೇವ ಆಸ್ಪತ್ರೆ ಶಾಖೆಯಲ್ಲೂ ಈ ಕಾರ್ಯಾಗಾರವನ್ನು ಹಮ್ಮಿಕೊಳ್ಳ ಲಾಗಿದೆ.

ಸಂಸ್ಥೆಯ ನಿರ್ದೇಶಕರಾದ ಡಾ.ಸಿ.ಏನ್.ಮಂಜುನಾಥ ರವರ ಪ್ರಕಾರ ಈ ಕಾರ್ಯಾಗಾರದಲ್ಲಿ 200 ಬಡ ರೋಗಿಗಳು ಹಾಗೂ ಬಡತನ ರೇಖೆಗಿಂತ ಕೆಳಗಿರುವ ಹಿರಿಯ ನಾಗರೀಕರಿಗೆ ಸ್ಟಂಟ್‌ಗಳನ್ನು ಉಚಿತವಾಗಿ ಅಳವಡಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಿಪಿಎಲ್‌ ಕಾರ್ಡ್‌ ಅಥವಾ ಕಡಿಮೆ ಆದಾಯ ಪ್ರಮಾಣ ಪತ್ರವನ್ನು ಹೊಂದಿರುವ ಬಡತನ ರೇಖೆಗಿಂತ ಕೆಳಗಿರುವ ರೋಗಿಗಳು ಸಹ ಈ ಕಾರ್ಯಾಗಾರದ ಪ್ರಯೋಜನ ಪಡೆದುಕೊಳ್ಳಬಹುದು. ಈ ಶಸ್ತ್ರಚಿಕಿತ್ಸೆಯ ಅಗತ್ಯ ಇರುವ ಬಡವರು ಅಕ್ಟೋಬರ್ 8ರೊಳಗೆ ಹೆಸರು ನೋಂದಾಯಿಸಿಕೊಳ್ಳಬೇಕು. ಹೆಸರು ನೋಂದಾಯಿಸಿಕೊಳ್ಳಲು 080–22977433 ಸಂಪರ್ಕಿಸಬಹುದು….

ವಿಳಾಸ:
ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ,
ಬನ್ನೇರುಘಟ್ಟ ರಸ್ತೆ, ಜಯನಗರ 9ನೇ ಬ್ಲಾಕ್‌,
ಬೆಂಗಳೂರು: 560069.