ಕರ್ನಾಟಕ ಸರ್ಕಾರದಿಂದ ಬಂಪರ್ ಆಫರ್, ಇನ್ಮೇಲಿಂದ ಹಳ್ಳಿಗಳಲ್ಲೂ ಉಚಿತ ವೈ-ಫೈ ಸೌಲಭ್ಯ ದೊರಕಲಿದೆ!!

0
489

ರಾಜ್ಯ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ , ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ಸಾಫ್ಟ್ ವೇರ್ ಟೆಕ್ನಾಲಜಿ ಪಾರ್ಕ್‌ ಆಫ್ ಇಂಡಿಯಾ ಸಹಯೋಗದಲ್ಲಿ ಬೆಂಗಳೂರು ಅರಮನೆಯಲ್ಲಿ ಆಯೋಜಿಸಿರುವ “ಬೆಂಗಳೂರು ಟೆಕ್‌ ಸಮ್ಮಿಟ್‌’ಗೆ ಗುರುವಾರ ವಿದ್ಯುಕ್ತ ಚಾಲನೆ ನೀಡಿದರು.

ನಂತರ ಮಾತನಾಡಿದ ಮುಖ್ಯಮಂತ್ರಿಗಳು ರಾಜ್ಯದ ಎಲ್ಲಾ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ವೈಫೈ ಸೌಲಭ್ಯ ಕಲ್ಪಿಸುವ ಯೋಜನೆ ರೂಪಿಸಲಾಗಿದ್ದು , ಪ್ರಸಕ್ತ ವರ್ಷದಲ್ಲಿ ೨೬೫೦ ಗ್ರಾಮ ಪಂಚಾಯ್ತಿಗಳಲ್ಲಿ ವೈಫೈ ಸೌಲಭ್ಯ ಕಲ್ಪಿಸಲಾಗುವುದು , ಮೊದಲ ಹಂತದಲ್ಲಿ ೫೦೦ ಗ್ರಾಮ ಪಂಚಾಯ್ತಿಗಳಲ್ಲಿ ವೈಫೈ ಸೇವೆ ಕಲ್ಪಿಸಲಾಗಿದೆ , ಹೊಸದಾಗಿ ಬೆಳವಣಿಗೆ ಹೊಂದುತ್ತಿರುವ ತಂತ್ರಜ್ಞಾನ ಆಧಾರಿತ ಕೈಗಾರಿಕೆಗಳ ಸ್ಥಾಪನೆ ಜೊತೆಗೆ ಗ್ರಾಮೀಣ ಪ್ರದೇಶಕ್ಕೂ ತಂತ್ರಜ್ಞಾನ ಪರಿಚಯಿಸುವ ಕಾರ್ಯಕ್ಕೆ ಆದ್ಯತೆ ನೀಡಲಾಗಿದ್ದು ಈ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ ಎಂದರು.

ವೈದ್ಯ ತಂತ್ರಜ್ಞಾನ ಹಾಗೂ ಕೃಷಿ ತಂತ್ರಜ್ಞಾನ ಬಳಕೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಮೈಸೂರು, ಮಂಗಳೂರು, ಕಲಬುರಗಿ, ಹುಬ್ಬಳ್ಳಿ- ಧಾರವಾಡದಲ್ಲಿ ಹೊಸ ಪ್ರತಿಭೆ ಅಭಿವೃದ್ಧಿ ಕೇಂದ್ರಗಳು , ಇನ್‌ಕುಬೇಷನ್‌ ಸೌಲಭ್ಯ ಕಲ್ಪಿಸುವ ಕಾರ್ಯಕ್ಕೆ ಒತ್ತು ನೀಡಲಾಗಿದೆ. ದೇವನಹಳ್ಳಿಯಲ್ಲಿ ಹಾರ್ಡ್‌ವೇರ್‌ ಪಾರ್ಕ್‌ , ಮಂಗಳೂರಿನಲ್ಲಿ ಐಟಿ ವಿಶೇಷ ಆರ್ಥಿಕ ವಲಯ, ಹುಬ್ಬಳ್ಳಿಯಲ್ಲಿ ಆರ್ಯಭಟ ಪಾರ್ಕ್‌ ಸೇರಿದಂತೆ ಸಾರ್ವಜನಿಕ- ಖಾಸಗಿ ಸಹಭಾಗಿತ್ವದಲ್ಲಿ ಹಲವು ಕೇಂದ್ರ ಸ್ಥಾಪಿಸಲಾಗುತ್ತಿದೆ ಎಂದರು.

ರಾಜಧಾನಿ ಬೆಂಗಳೂರು ಭಾರತದಲ್ಲಿ ಮಾತ್ರವಲ್ಲದೆ ವಿಶ್ವದೆಲ್ಲೆಡೆ ತನ್ನ ಛಾಪನ್ನು ಬೀರಿದೆ , ವಿಶ್ವ ಆರ್ಥಿಕ ವೇದಿಕೆ ಮಾಹಿತಿ ಪ್ರಕಾರ ಜಗತ್ತಿನ ೨೫ ಹೈಟೆಕ್‌ ನಗರಗಳಲ್ಲಿ ಸ್ಥಾನ ಪಡೆದಿದೆ. ಕೈಗಾರಿಕೆಗಳ ಸ್ಥಾಪನೆಯಲ್ಲಿ ಮುಂಚೂಣಿ ಸ್ಥಾನ ಕಾಯ್ದುಕೊಳ್ಳುವ ಜತೆಗೆ ಕರ್ನಾಟಕವನ್ನು ಜಾಗತಿಕ ತಂತ್ರಜ್ಞಾನದ ತಾಣವನ್ನಾಗಿ ರೂಪಿಸುವ ಆಶಯವಿದೆ , ಅದರ ಜೊತೆಗೆ ಹೊಸದಾಗಿ ಬೆಳೆಯುತ್ತಿರುವ ತಂತ್ರಜ್ಞಾನ ಆಧಾರಿತ ಕೈಗಾರಿಕೆಗಳ ಸ್ಥಾಪನೆಯಲ್ಲೂ ಮುಂಚೂಣಿ ಸ್ಥಾನ ಪಡೆಯಲು ಬೇಕಾಗಿರುವ ಎಲ್ಲ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.