ದೇಶಬಿಟ್ಟು ತಲೆಮರೆಸಿಕೊಂಡ ನಿತ್ಯಾನಂದ; ಅಮೆರಿಕದಲ್ಲಿ ದ್ವೀಪ ಖರೀದಿಸಿ ಹೊಸ ದೇಶವನ್ನೇ ಕಟ್ಟಿ ಪೌರತ್ವ ಪಡೆಯುವುದು ಸದವಕಾಶ ನೀಡಿದ್ದಾನೆ.!

0
230

ದಿನಕ್ಕೊಂದು ಸುದ್ದಿ ಹರಡಿಸುತ್ತಿರುವ ನಿತ್ಯಾನಂದ ಸ್ವಾಮಿ ಭಾರತ ದೇಶವನ್ನೇ ತೊರೆದು ಸ್ವಂತ ದೇಶವನ್ನೇ ಕಟ್ಟಲು ಮುಂದಾಗಿದ್ದಾರೆ, ದಕ್ಷಿಣ ಅಮೆರಿಕ ಖಂಡದ ಈಕ್ವೆಡಾರ್ ನಲ್ಲಿ ಖಾಸಗಿ ದ್ವೀಪವೊಂದನ್ನು ಖರೀದಿಸಿದ್ದು, ಇದು ತನ್ನ ದೇಶ ಎಂಬಂತೆ ಬಿಂಬಿಸುತ್ತಿದ್ದಾನೆ. ಅಲ್ಲದೆ ಇದಕ್ಕಾಗಿ ಈಗಾಗಲೇ ಧ್ವಜ, ಲಾಂಛನ, ಪಾಸ್‌ಪೋರ್ಟ್‌‌‌‌ಗಳನ್ನು ಸಹ ಸಿದ್ಧಪಡಿಸಿದ್ದು, ಈ ದೇಶಕ್ಕೆ ಕೈಲಾಸ ಎಂದು ಹೆಸರಿಟ್ಟಿದ್ದಾರೆ. ಟ್ರಿನಿಡಾಡ್ ಅಂಡ್ ಟೊಬಾಗೋ ದ್ವೀಪಗಳ ಸಮೀಪ ಇರುವ ಇವರ ಕೈಲಾಸ ದ್ವೀಪವನ್ನು ಹಿಂದೂ ಸಾರ್ವಭೌಮ ದೇಶ ಎಂದು ನಿತ್ಯಾನಂದ ಸ್ವಘೋಷಣೆ ಮಾಡಿದ್ದಾರೆ.

Also read: ಅತ್ಯಾಚಾರ ಆರೋಪ ಹೊತ್ತಿರುವ ಬಿಡದಿ ನಿತ್ಯಾನಂದಸ್ವಾಮಿ ದೇಶ ಬಿಟ್ಟು ಪರಾರಿ; ಪಾಸ್‌ಪೋರ್ಟ್ ಇಲ್ಲದೆ ವಿದೇಶಕ್ಕೆ ಮಾಯವಾಗಿ ಹೋದ್ರಾ??

ಸ್ವಂತ ಸಾಮ್ರಾಜ್ಯ ಕಟ್ಟಿದ ನಿತ್ಯಾನಂದ?

ಹೌದು ಅತ್ಯಾಚಾರ ಆರೋಪ ಹೊತ್ತಿರುವ ಬಿಡದಿಯ ಸ್ವಯಂ ಘೋಷಿತ ದೇವ ಮಾನವ ನಿತ್ಯಾನಂದ ಖಾಸಗಿ ಹಿಮಪ್ರದೇಶವನ್ನು ಖರೀದಿಸಿದ್ದು, ಆ ಪ್ರದೇಶವನ್ನು ಹಿಂದೂ ರಾಷ್ಟ್ರ ಎಂದು ಸ್ವಯಂ ಘೋಷಿತ ದೇವ ಮಾನವ ಕರೆದುಕೊಂಡಿದ್ದಾನೆ. ಪ್ರಧಾನಿ ಸೇರಿದಂತೆ ಸಚಿವ ಸಂಪುಟವನ್ನು ಸಹ ರಚಿಸಿದ್ದಾನೆ. ಅಲ್ಲದೆ ದೇಶಕ್ಕೆ ದೇಣಿಗೆ ನೀಡುವಂತೆ ಸಾರ್ವಜನಿಕ ಪ್ರಕಟಣೆಯನ್ನು ಸಹ ಹೊರಡಿಸಿದ್ದು, ಶ್ರೇಷ್ಠ ಹಿಂದೂ ರಾಷ್ಟ್ರ ಕೈಲಾಸದ ಪೌರತ್ವ ಪಡೆಯುವುದು ಒಂದು ಸದವಕಾಶ ಎಂದು ಹೇಳಿದ್ದಾನೆ. www.kailaasa.org ಹೆಸರಿನಲ್ಲಿ ಪ್ರತ್ಯೇಕ ವೆಬ್ ಸೈಟನ್ನು ಸಹ ತೆರೆಯಲಾಗಿದ್ದು, ಹಿಂದೂಗಳು ಈ ದೇಶದ ಪ್ರಜೆಯಾಗಬಹುದು ಎಂದು ಹೇಳಿದ್ದಾನೆ.

ನಿತ್ಯಾನಂದನ ಹಿಂದೂ ರಾಷ್ಟ್ರಕ್ಕೆ ಪ್ರಧಾನಿ ಸೇರಿದಂತೆ ಸಚಿವ ಸಂಪುಟವನ್ನು ಸಹ ರಚಿಸಿದ್ದಾನೆ. ಅಲ್ಲದೆ ದೇಶಕ್ಕೆ ದೇಣಿಗೆ ನೀಡುವಂತೆ ಸಾರ್ವಜನಿಕ ಪ್ರಕಟಣೆಯನ್ನು ಸಹ ಹೊರಡಿಸಿದ್ದು, ಶ್ರೇಷ್ಠ ಹಿಂದೂ ರಾಷ್ಟ್ರ ಕೈಲಾಸದ ಪೌರತ್ವ ಪಡೆಯುವುದು ಒಂದು ಸದವಕಾಶ ಎಂದು ಹೇಳಿದ್ದಾನೆ. ಕೈಲಾಸದ ಕುರಿತು ವಿವರಿಸಿದ್ದಾನೆ. ಕೈಲಾಸ ಒಂದು ರಾಜಕೀಯೇತರ ದೇಶವಾಗಿದ್ದು, ಎಲ್ಲ ಮಾನವರು ಪ್ರಬುದ್ಧರಾಗಿ ಬದುಕುವುದು ಇದರ ಗುರಿಯಾಗಿದೆ. ಅಧಿಕೃತ ಹಿಂದೂ ಧರ್ಮದ ಆಧಾರದ ಮೇಲೆ ಪ್ರಭುದ್ಧ ನಾಗರಿಕತೆ ಸಂರಕ್ಷಣೆ, ಪುನರುಜ್ಜೀವನ ನಡೆಸುವುದು ಕೈಲಾಸದ ಉದ್ದೇಶವಾಗಿದೆ ಎಂದು ವೆಬ್‍ಸೈಟ್‍ನಲ್ಲಿ ಬರೆದುಕೊಂಡಿದ್ದಾನೆ.

Also read: ಇಬ್ಬರು ಹೆಣ್ಣು ಮಕ್ಕಳನ್ನು ಅಕ್ರಮ ಬಂಧನದಲ್ಲಿಟ್ಟುಕೊಂಡ ಆರೋಪ, ನಿತ್ಯಾನಂದ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ದಂಪತಿಗಳು.!

ಕೈಲಾಸದ ಪಾಸ್‍ಪೋರ್ಟಿನ ಎರಡು ಮಾದರಿಗಳು ಅಂತಿಮವಾಗಿದ್ದು, ಒಂದು ಬಂಗಾರದ ಬಣ್ಣದ್ದಾಗಿದ್ದರೆ, ಇನ್ನೊಂದು ಕೆಂಪು ಬಣ್ಣದ್ದಾಗಿದೆ. ದೇಶದ ಧ್ವಜವು ಮೆರೂನ್ ಬಣ್ಣದ್ದಾಗಿದೆ. ಇದರಲ್ಲಿ ಎರಡು ಲಾಂಚನಗಳಿದ್ದು, ಒಂದು ನಿತ್ಯಾನಂದ ಹಾಗೂ ಇನ್ನೊಂದು ನಂದಿಯ ಚಿತ್ರವಾಗಿದೆ. ನಿತ್ಯಾನಂದ ಸಚಿವ ಸಂಪುಟವನ್ನು ಸಹ ರಚಿಸಿದ್ದು, ಮಾ ಎಂಬ ಹೆಸರಿನವರನ್ನು ಪ್ರಧಾನಿಯನ್ನಾಗಿ ಆಯ್ಕೆ ಮಾಡಿದ್ದಾನೆ. ಅಲ್ಲದೆ ಈ ದೇಶದಲ್ಲಿ ನಿತ್ಯಾನಂದ ಪ್ರತಿ ದಿನ ಸಚಿವ ಸಂಪುಟ ಸಭೆ ನಡೆಸುತ್ತಾನೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಭಾರತದಲ್ಲಿರುವ ಹೆದರಿಕೆಯಿಂದ ವಿಶ್ವಸಂಸ್ಥೆಯಲ್ಲಿ ಅರ್ಜಿ?

Also read: ಶ್ರಮಪಟ್ಟು ನನ್ನನು ಜೈಲಿಗೆ ಕಳುಹಿಸಿದವರ ನೆನಪಿಗಾಗಿ ಈ ಗಡ್ಡ ಬಿಟ್ಟೆ; ತಮ್ಮ ಗಡ್ಡದ ಸಿಕ್ರೆಟ್ ಬಿಚ್ಚಿಟ್ಟ ಡಿ.ಕೆ ಶಿವಕುಮಾರ್

ನಿತ್ಯಾನಂದನ ದೇಶಕ್ಕೆ ವಿಶ್ವದ ಯಾವುದೇ ಮೂಲೆಗಳಿಂದ ಹಿಂದೂಗಳು ಬರಬಹುದಾಗಿದೆ. ಈ ಕೈಲಾಸ ದೇಶದಲ್ಲಿ ಯಾವುದೇ ನಿರ್ಬಂಧಗಳಿಲ್ಲ. ಕೈಲಾಸದ ಸರ್ಕಾರದಲ್ಲಿ 10 ಇಲಾಖೆಗಳಿದ್ದು, ಒಂದು ಈತನ ಕಚೇರಿ ಭಗವಾನ್ ಶ್ರೀ ನಿತ್ಯಾನಂದ ಪರಮಶಿವಂ, ಸರ್ಕಾರದ ಅಂತರಾಷ್ಟ್ರೀಯ ಸಂಬಂಧ, ಡಿಜಿಟಲ್ ಕಾರ್ಯಕ್ರಮಗಳು ಹಾಗೂ ಸಾಮಾಜಿಕ ಜಾಲತಾಣ ಪ್ರಮುಖವಾದವುಗಳು. ಉಳಿದಂತೆ ಗೃಹ, ರಕ್ಷಣೆ, ವಾಣಿಜ್ಯ ಹಾಗೂ ಶಿಕ್ಷಣ ಸೇರಿದಂತೆ ವಿವಿಧ ಬಗೆಯ ಇಲಾಖೆಗಳನ್ನು ರಚಿಸಿಕೊಂಡಿದ್ದಾನೆ. ಕೈಲಾಸದ ಕಾನೂನು ತಂಡ ಈ ಜಾಗವನ್ನು ಪ್ರತ್ಯೇಕ ರಾಷ್ಟ್ರವನ್ನಾಗಿ ಘೋಷಣೆ ಮಾಡಲು ವಿಶ್ವಸಂಸ್ಥೆಯಲ್ಲಿ ಅರ್ಜಿ ಸಲ್ಲಿಸಲಿದೆ. ಈ ಅರ್ಜಿಯಲ್ಲಿ ಭಾರತದಲ್ಲಿ ನನಗೆ ಬೆದರಿಕೆ ಇದೆ. ಹೀಗಾಗಿ ಇಲ್ಲಿ ನೆಲೆಸಲು ಅವಕಾಶ ನೀಡುವಂತೆ ಕೇಳಿಕೊಳ್ಳಲಾಗಿದೆ. ಎಂದು ವರದಿಯಲ್ಲಿ ತಿಳಿದಿದೆ.