ಸರ್ಕಾರಿ ನೌಕರರಿಗೆ ಭರ್ಜರಿ ಗಿಫ್ಟ್; ಸಮ್ಮಿಶ್ರ ಸರ್ಕಾರದಿಂದ ದಸರಾ ಹಬ್ಬದ ಉಡುಗೊರೆ ರೂಪದಲ್ಲಿ ತುಟ್ಟಿಭತ್ಯೆ ಹೆಚ್ಚಳ..!

0
972

ಕೇಂದ್ರ ಸರ್ಕಾರ ತನ್ನ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ ಮಾಡಿದ ಬೆನ್ನಲ್ಲೇ ರಾಜ್ಯ ಸರ್ಕಾರವೂ ನೌಕರರ ತುಟ್ಟಿಭತ್ಯೆ ಮಾಡುವ ನಿರೀಕ್ಷೆಯಿತ್ತು. ಆದರೆ, ಕುಮಾರಸ್ವಾಮಿ ಸರ್ಕಾರ ಸ್ವಲ್ಪ ತಡವಾಗಿ ಹೆಚ್ಚಳ ಮಾಡಿದ್ದಾರೆ. ಇದೀಗ 6ನೇ ವೇತನ ಆಯೋಗದ ವರದಿ ಮಂಡನೆ ಬೆನ್ನಲ್ಲೇ ಸರ್ಕಾರ ತುಟ್ಟಿಭತ್ಯೆ ಮೂಲ ವೇತನವನ್ನು ಹೆಚ್ಚಳ ಮಾಡಲು ಹೊರಟಿದೆ. ಸಿಎಂ ಎಚ್​​.ಡಿ ಕುಮಾರಸ್ವಾಮಿ ಅವರು ತುಟ್ಟಿಭತ್ಯೆ ಹೆಚ್ಚಳ ಮಾಡಿ, ಅನುಷ್ಠಾನಗೊಳಿಸುವಂತೆ ಎಲ್ಲಾ ಇಲಾಖೆಗಳಿಗೂ ಸೂಚಿಸಿದ್ದಾರೆ. ಈ ಮೂಲಕ ಸರ್ಕಾರಿ ನೌಕರರಿಗೆ ದಸರಾ ಹಬ್ಬದ ಸಂದರ್ಭದಲ್ಲಿ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದಂತಾಗಿದೆ.

Also read: ಹೆಲೋ ಫ್ರೆಂಡ್ಸ್, ವಿಶ್ವಾದ್ಯಂತ ನೆಟ್’ವರ್ಕ್ ಸ್ಲೋ ಆಗಲಿದೆ; ಎಚ್ಚರ ಎಚ್ಚರ..! ಇದು ನಿಮ್ಮ ಗ್ರಹಚಾರವಲ್ಲ..

ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಜುಲೈ ತಿಂಗಳಿನಿಂದ ಬಾಕಿ ಇರುವ ತುಟ್ಟಿ ಭತ್ಯೆಯನ್ನು ಏರಿಸುವಂತೆ ಮನವಿ ಮಾಡಿದ್ದರು. ಈ ಮನವಿಯನ್ನು ಸಿಎಂ ಪುರಸ್ಕರಿಸಿದ್ದು ಈಗ ತುಟ್ಟಿಭತ್ಯೆ ಏರಿಕೆಯಾಗಿದೆ. ಸರ್ಕಾರಿ ನೌಕರರಿಗೆ ಶೇ.2 ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. 2018ರ ಜುಲೈ 1 ರಿಂದ ಪೂರ್ವಾನ್ವಯವಾಗುವಂತೆ ಮೂಲ ವೇತನದ ಶೇ.1.75ರಿಂದ ಶೇ.3.75ಕ್ಕೆ ತುಟ್ಟಿ ಭತ್ಯೆ ಏರಿಕೆ ಮಾಡಿ ಹಣಕಾಸು ಇಲಾಖೆ ಇಂದು ಅಧಿಕೃತ ಆದೇಶ ಹೊರಡಿಸಿದೆ. ಈ ತುಟ್ಟಿ ಭತ್ಯೆ ಏರಿಕೆಯಿಂದ 8.5 ಲಕ್ಷ ಸರ್ಕಾರಿ ನೌಕರರ ಮಾಸಿಕ ವೇತನ ಹೆಚ್ಚಳವಾಗಲಿದೆ.
ಈ ವಿಷಯಕೆ ಸಂಬಂಧ ಎಂ.ಆರ್. ಶ್ರೀನಿವಾಸ ಮೂರ್ತಿ ಅವರ ಶಿಫಾರಸಿನ ಮೇರೆಗೆ, ಸರ್ಕಾರ 6ನೇ ವೇತನ ಆಯೋಗದ ವರದಿ ಮಂಡನೆಗೆ ಮುಂದಾಯ್ತು. ಅಕ್ಟೋಬರ್ 4ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ವರದಿ ಮಂಡಿಸಿ ಅನುಷ್ಠಾನದ ಬಗ್ಗೆ ಚರ್ಚಿಸಲಾಯ್ತು. ಈ ಮೂಲಕ ಹಲವು ತಿಂಗಳುಗಳಿಂದ ಕಾಯುತ್ತಿದ್ದ ಸರ್ಕಾರಿ ನೌಕರರ ಮೊದಲ ಹೋರಾಟಕ್ಕೆ ಸಿಕ್ಕ ಜಯವಾಗಿದೆ.

Also read: ರಾಜಕೀಯ ತಿರುವು ಪಡೆದ ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ ವಿಚಾರ; ಶಬರಿಮಲೆ ಉಳಸಿ ಘೋಷವಾಕ್ಯದಡಿ ಪಾದಯಾತ್ರೆ..!

ಏನಿದು ತುಟ್ಟಿ ಭತ್ಯೆ:

ತುಟ್ಟಿ ಭತ್ಯೆ(dearness allowance) : ಭಾರತದಲ್ಲಿ, ತುಟ್ಟಿಭತ್ಯೆಯು ಒಬ್ಬ ವ್ಯಕ್ತಿಯ ಸಂಬಳದ ಭಾಗವಾಗಿದೆ. ತುಟ್ಟಿಭತ್ಯೆಯನ್ನು ಮೂಲ ಸಂಬಳದ ಶೇಕಡಾವಾರು ಲೆಕ್ಕ ಆಧಾರಿಸಿ ಲೆಕ್ಕಮಾಡಲಾಗುತ್ತದೆ. ನಂತರ, ಈ ಮೊತ್ತವನ್ನು ಮನೆ ಬಾಡಿಗೆ ಭತ್ಯೆಯ ಜೊತೆಗೆ ಮೂಲ ಸಂಬಳಕ್ಕೆ ಸೇರಿಸಿ ಒಟ್ಟು ಸಂಬಳವನ್ನು ಪಡೆಯಲಾಗುತ್ತದೆ. ದರಗಳು ಗ್ರಾಮೀಣ/ನಗರ ಪ್ರದೇಶಗಳ ಪ್ರಕಾರ ಬದಲಾಗುತ್ತವೆ.

ತುಟ್ಟಿಭತ್ಯೆಯ ಗಿಪ್ಟ್ ಯಾರಿಗೆ ಸಿಗುತ್ತೆ:

Also read: ಇತ್ತೀಚಿನ ದಿನಗಳಲ್ಲಿ ಆತಂಕ ಹೆಚ್ಚಿಸಿದ ಆಕಾಶಯಾನ; ದುಬೈಗೆ ಹೋಗಬೇಕಿದ್ದ ವಿಮಾನ ಗೋಡೆಗೆ ಡಿಕ್ಕಿ ಹೊಡೆದು ತಿರುಗಿದ್ದು ಮುಂಬೈನತ್ತ!!

ಈ ಕೊಡುಗೆಯಿಂದ ಸುಮಾರು 6 ಲಕ್ಷ ಸರ್ಕಾರಿ ನೌಕರರಿಗೆ ಅನುಕೂಲವಾಗಲಿದೆ. ರಾಜ್ಯ ಸರ್ಕಾರಿ ನೌಕರರು, ಜಿಲ್ಲಾ ಪಂಚಾಯತ್ ಗಳ ಪೂರ್ಣಾವಧಿ ನೌಕರರು, ಕಾಲಿಕ ವೇತನ ಶ್ರೇಣಿಗಳಲ್ಲಿ ಪೂರ್ಣಾವಧಿ ವರ್ಕ್ ಚಾರ್ಜ್ ನೌಕರರು, ಸರ್ಕಾರದ ಸಹಾಯಾನುದಾನ ಪಡೆಯುವ ಶಿಕ್ಷಣ ಸಂಸ್ಥೆಗಳ, ವಿಶ್ವವಿದ್ಯಾಲಯಗಳ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರಿಗೂ, ಸರ್ಕಾರಿ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರು, ರಾಜ್ಯ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನ ಪಡೆಯುವವರು ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರಿಗೂ ಈ ಹೆಚ್ಚಳ ಅನ್ವಯವಾಗಲಿದೆ ಮತ್ತು ತುಟ್ಟಿಭತ್ಯೆ ಹೆಚ್ಚಳದ ಲಾಭ ದೊರೆಯಲಿದೆ.