ಕಾನೂರು ಹೆಗ್ಗಡತಿಯ ಒಡೆಯ ಇನ್ನಿಲ್ಲ; ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ ವಿಧಿವಶ..

0
464

ಕನ್ನಡಕ್ಕೆ 7 ನೇ ಜ್ಞಾನಪೀಠ ಪ್ರಶಸ್ತಿಯನ್ನು ತಂದುಕೊಟ್ಟ ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳುತ್ತಿದ್ದ ಅವರು, ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ನಿವಾಸದಲ್ಲಿ ಕೊನೆಯುಸಿರು ಎಳೆದಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ನಾಡಿನಲ್ಲೆಡೆ ದುಃಖ ಆವರಿಸಿದ್ದು. ಪ್ರಧಾನಿ ನರೇಂದ್ರ ಮೋದಿ ಸೇರಿ ದೇಶದ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಗಿರೀಶ್ ಕಾರ್ನಾಡ್ ನಿಧನ:

ಕಳೆದ ಒಂದು ತಿಂಗಳಿಂದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ಇಂದು ನಿಧನರಾಗಿದ್ದಾರೆ. ಹುಟ್ಟಿನಿಂದ ಇವರದೇ ಸಂಪ್ರದಾಯಲ್ಲಿ ಬದುಕುತ್ತಿದ ಇವರು ಅಂತ್ಯಸಂಸ್ಕಾರದಲ್ಲಿ ಕೂಡ ವಿಭನ್ನವಾಗಿ ಮಾಡುವಂತೆ ಮನೆಯವರಿಗೆ ತಿಳಿಸಿದ್ದು ಅದರಂತೆ ಯಾವುದೇ ವಿಧಿ ವಿಧಾನ ಇಲ್ಲದೆ ಕಾರ್ನಾಡ್ ಅವರ ಅಂತ್ಯಸಂಸ್ಕಾರವನ್ನು ವಿದ್ಯುತ್ ಚಿತಾಗಾರದಲ್ಲಿ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಮಧ್ಯಾಹ್ನದ ಮೇಲೆ ಬೈಯಪ್ಪನಹಳ್ಳಿಯಲ್ಲಿ ಅಂತ್ಯ ಸಂಸ್ಕಾರ ನಡೆಸಲಾಗುತ್ತದೆ. ಸಚಿವರು, ಗಣ್ಯರು ಯಾರು ಬರುವುದು ಬೇಡ. ಸಾರ್ವಜನಿಕ ದರ್ಶನ ಇರುವುದಿಲ್ಲ. ಯಾವುದೇ ವಿಧಿ ವಿಧಾನ ಇರುವುದಿಲ್ಲ ಎಂದು ನಿರ್ದೇಶಕ ಕೆ.ಎಂ ಚೈತನ್ಯ ತಿಳಿಸಿದ್ದಾರೆ.

ಮಧ್ಯಾಹ್ನ ನಾವು ಅಂತ್ಯ ಸಂಸ್ಕಾರದ ಸಮಯದ ನಿಗದಿ ಮಾಡುತ್ತೇವೆ. ಅಪಾರ್ಟ್ ಮೆಂಟ್ ಬಳಿ, ಸಾರ್ವಜನಿಕರು ರಾಜಕಾರಣಿಗಳು ಬರುವುದು ಬೇಡ ಎಂದು ಪತ್ನಿ ಶಾರದಾ ಕಾರ್ನಾಡ್ ಮನವಿ ಮಾಡಿಕೊಂಡಿದ್ದಾರೆ. ಆದರೆ ಸರ್ಕಾರದಿಂದ ನೀಡುವ ಗೌರವವನ್ನು ನೀಡುವುದು ನಮ್ಮ ಕರ್ತ್ಯವ್ಯ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದು ಅವರ ಮನೆಯವರ ಮನವಲಿಸಲು ಸರ್ಕಾರದ ಅಧಿಕಾರಿ ಮನೆಗೆ ತೆರಳಿದ್ದಾರೆ ಒಂದು ವೇಳೆ ಮನೆಯವರು ಒಪ್ಪಿಕೊಂಡರೆ ಮಾತ್ರ ಸರ್ಕಾರೀ ವಿಧಿ ವಿಧಾನ ಮೂಲಕ ಅಂತ್ಯ ಸಂಸ್ಕಾರ ನಡೆಯಲಿದೆ.

ಕಾರ್ನಾಡ್ ಬೆಳೆದು ಬಂದ ಹಾದಿ;

19 ಮೇ 1938ರಂದು ಮಹಾರಾಷ್ಟ್ರದ ಮಾಥೇರಾನದಲ್ಲಿ ಜನಿಸಿದ್ದ ಕಾರ್ನಾಡ್​, ಶಿರಸಿಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಅವರು, ನಂತರ ಧಾರವಾಡ ತೆರಳಿದರು. ಅಲ್ಲಿ ಅವರು ಕಲಾ ಶಾಸ್ತ್ರ ವಿಭಾಗದಲ್ಲಿ ಪದವಿ ಪಡೆದರು. ನಂತರ ಇಂಗ್ಲೆಂಡ್​ಗೆ ತೆರಳಿದ ಅವರು ತತ್ವಶಾಸ್ತ್ರ ಅಧ್ಯಯನ ಮಾಡಿದರು. ಆಕ್ಸ್​ಫರ್ಡ್​ನಲ್ಲಿ ರಾಜಕೀಯ ಹಾಗೂ ಅರ್ಥಶಾಸ್ತ್ರ ಅಧ್ಯಯನ ನಡೆಸಿದರು. ಗಿರೀಶ್ ಕಾರ್ನಾಡ್ ಎಲ್ಲಾ ಸೀಮೆಗಳನ್ನೂ ಮೀರಿದ ಮಹಾನ್ ಪ್ರತಿಭೆ. ಕನ್ನಡದಲ್ಲಿ ನಾಟಕ ಸಾಹಿತ್ಯಕಾರರಾಗಿ, ಪ್ರಸಿದ್ಧ ರಂಗಭೂಮಿ ತಜ್ಞರಾಗಿ, ನಾಟಕಕಾರರಾಗಿ, ಚಲನಚಿತ್ರರಂಗದ ನಟರಾಗಿ, ನಿರ್ದೇಶಕರಾಗಿ, ಪ್ರಾಚಾರ್ಯರಾಗಿ, ಸಂಗೀತ ನಾಟಕ ಅಕಾಡೆಮಿಗಳ ಅಧ್ಯಕ್ಷರಾಗಿ ಹೀಗೆ ಅವರು ಹಲವು ರಂಗಗಳಲ್ಲಿ ರಾಜ್ಯ, ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧರು.

ಜ್ಞಾನ ಪೀಠ ಪ್ರಶಸ್ತಿ;

ಗಿರೀಶ ಕಾರ್ನಾಡರ ಮೊದಲ ಸಾಹಿತ್ಯ ಕೃತಿ’ ಯಯಾತಿ’ ನಾಟಕ ಧಾರವಾಡದ ಮನೋಹರ ಗ್ರಂಥಮಾಲೆಯಲ್ಲಿ ಪ್ರಕಟವಾಯಿತು. ಇಂಗ್ಲೆಂಡಿನಿಂದ ಮರಳಿದ ಬಳಿಕ ತುಘಲಕ್ ಹಾಗೂ ಹಯವದನ ಪ್ರಕಟವಾದವು. ಕಾರ್ನಾಡ್ ಅವರಿಗೆ ಜ್ಞಾನ ಪೀಠ ಪ್ರಶಸ್ತಿ, ಪದ್ಮಶ್ರೀ, ಪದ್ಮ ವಿಭೂಷಣ ಪ್ರಶಸ್ತಿಗಳು ಲಭಿಸಿದ್ದವು, ಅದರಂತೆ ನಾಟಕಗಳಲ್ಲಿ ತಲೆದಂಡ, ನಾಗಮಂಡಲ ಕಾರ್ನಾಡರ ಖ್ಯಾತಿಯನ್ನು ಮತ್ತಷ್ಟು ಹೆಚ್ಚಿಸಿತು. ಈ ಎಲ್ಲ ನಾಟಕಗಳು ವಿವಿಧ ಭಾಷೆಗಳಿಗೆ ತರ್ಜುಮೆಯಾಗಿ ಯಶಸ್ವೀ ಪ್ರಯೋಗ ಕಂಡಿದೆ. ‘ನಾಗಮಂಡಲ’ ಚಲನಚಿತ್ರ ರೂಪದಲ್ಲೂ ಜಯಗಳಿಸಿದೆ. ಕಾರ್ನಾಡರ ‘ಅಗ್ನಿ ಮತ್ತು ಮಳೆ’ ಅವರಿಂದಲೇ ಇಂಗ್ಲಿಷಿಗೆ ‘Fire and Rain’ ಆಗಿ ರೂಪುಗೊಂಡು ಆಂಗ್ಲ ರಂಗ ವಲಯದಲ್ಲಿ ಅಪರಿಮಿತವಾದ ಯಶಸ್ಸನ್ನು ಪಡೆಯಿತು. ‘ಅಂಜುಮಲ್ಲಿಗೆ’ ಹಿಂದಿಯಲ್ಲಿ ಹೆಚ್ಚು ಯಶಸ್ಸನ್ನು ಗಳಿಸಿತು.