ಗ್ರಾಮ ವಾಸ್ತವ್ಯದಲ್ಲಿ ಸಿಎಂ ದರ್ಪ; ಮೋದಿಗೆ ವೋಟ್‌ ಹಾಕಿ ನಮ್‌ ಹತ್ರ ಸಮಸ್ಯೆ ಹರಿಸಲು ಬರ್ತೀರಾ, ನಿಮಗೆಲ್ಲಾ ಲಾಠಿ ಚಾರ್ಜ್‌ ಮಾಡಿಸ್ಬೇಕಾ ಎಂದ ಕುಮಾರಸ್ವಾಮಿ..

0
295

ಮುಖ್ಯಮಂತ್ರಿ ಕುಮಾರಸ್ವಾಮಿಯವರು ಗ್ರಾಮ ವಾಸ್ತವ್ಯದಲ್ಲಿ ನಿರತರಾಗಿದ್ದಾರೆ, ಈ ಈ ವೇಳೆ ಕರೇಗುಡ್ಡಗೆ ಕೆಎಸ್.ಆರ್.ಟಿ.ಸಿ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಪ್ರತಿಭಟನೆ ಮಾಡುತ್ತಿದ್ದವರ ವಿರುದ್ದ ಸಿಎಂ ಗರಂ ಆಗಿದ್ದು, ವೋಟ್ ಮೋದಿಗೆ ಹಾಕಿ ನನಗೆ ಸಮಸ್ಯೆ ಕೇಳೋಕೆ ಬರುತ್ತಿರಾ? ಲಾಟಿ ಚಾರ್ಜ್ ಮಾಡಿಸಬೇಕಾ ಎಂದು ದರ್ಪ ಮೆರೆದಿದ್ದು ಆ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಬಾರಿ ವೈರಲ್ ಆಗಿದೆ.

@publictv.in

Also read: ನಮ್ಮ ಮಾತ್ ಅಂದ್ರೆ ಮುಖ್ಯಮಂತ್ರಿ ಅಷ್ಟೇ ಅಲ್ಲ, ಅವರಪ್ಪನೂ ಕೇಳಬೇಕು: ಇಲ್ಲ ಮುಖ್ಯಮಂತ್ರಿ ಗೊಟಕ್ ಅಂದುಬಿಡ್ತಾರೆ. ಪ್ರಸನ್ನಾನಂದಪುರಿ ಸ್ವಾಮೀಜಿ..

ಹೌದು ಕುಮಾರಸ್ವಾಮಿ ಪ್ರಯಾಣ ಬೆಳೆಸಿದ ಬಸ್-ಗೆ ಅಡ್ಡಲಾಗಿ ಯರಮರಸ್ ಸರ್ಕೀಟ್ ಹೌಸ್ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ, ವೈಟಿಪಿಎಸ್‍ನ ನೂರಾರು ಜನ ಕಾರ್ಮಿಕರು ಸಿಎಂ ಬಸ್‍ಗೆ ಮುತ್ತಿಗೆ ಹಾಕಿದರು. ಈ ವೇಳೆ ಸಿಟ್ಟಿಗೆದ್ದ ಮುಖ್ಯಮಂತ್ರಿಗಳು, ನರೇಂದ್ರ ಮೋದಿಗೆ ವೋಟ್ ಹಾಕಿ ನಮ್ಮತ್ರ ಸಮಸ್ಯೆ ಬಗೆಹರಿಸಿ ಅಂತೀರಾ? ನಿಮಗೆಲ್ಲಾ ಮರ್ಯಾದೆ ಕೊಡಬೇಕೇ? ಲಾಠಿಚಾರ್ಜ್ ಮಾಡ್ಬೇಕು ನಿಮಗೆ ಎಂದು ಹೇಳಿ ಪ್ರತಿಭಟನಾಕಾರರ ಮೇಲೆ ಕೂಗಾಡಿದರು. ಅಷ್ಟೇ ಅಲ್ಲ ನಾನು ಗ್ರಾಮವಾಸ್ತವ್ಯ ಮಾಡುವುದಿಲ್ಲ ಎಂದು ಹೇಳಿದರು.

ಇದು ಇಷ್ಟಕ್ಕೆ ನಿಲ್ಲದೆ ಪ್ರತಿಭಟನೆ ಮಾಡುತ್ತಿದ್ದ ವ್ಯಕ್ತಿ ಸಿಎಂ ಗೆ ಕೆಳಗಿಳಿದು ನಮ್ಮ ಸಮಸ್ಯೆಯನ್ನು ಕೇಳಿ ಎಂದಾಗ ಸಿಟಿನಿಂದ ಮೇಲೆದ್ದು, ಬಸ್ ನಿಂದ ಕೆಳಗಿಳಿಯಲು ನಡೆದರು ಈ ವೇಳೆ ಸಚಿವರು ತಡೆಯಲು ಹೋದಾಗ ಸಿಟ್ಟನ್ನು ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್ ನಾಡಗೌಡ ಮೇಲೆ ಹೊರ ಹಾಕಿದರು. ಗರಂ ಆಗಿದ್ದ ಸಿಎಂ ಅವರನ್ನು ನಾಡಗೌಡ ಅವರು ಸಮಾಧಾನಪಡಿಸಿ, ಯಾವನ್ರೀ ಅವನು ಎಸ್ಪಿ ಎಂದು ಪೊಲೀಸ್ ಅಧಿಕಾರಿಗಳ ಮೇಲೆ ಕೂಗಾಡಿದರು. ನಂತರ ಬಸ್‍ನಲ್ಲೇ ಕುಳಿತು ಮನವಿ ಸ್ವೀಕಾರ ಮಾಡಿದ ಮುಖ್ಯಮಂತ್ರಿಗಳು, ಮಾನ್ವಿ ತಾಲೂಕಿನ ಕಲ್ಲೂರಿಗೆ ಕುಡಿಯುವ ನೀರಿನ ಸರಬರಾಜು ಯೋಜನೆ ಮತ್ತು ಪದವಿ ಕಾಲೇಜು ತೆರಯುವ ಭರವಸೆ ನೀಡಿದರು. ಇದೇ ವೇಳೆ ಕಿವಿ ಕೇಳದ ಗ್ರಾಮದ ಮಗುವೊಂದರ ಚಿಕಿತ್ಸೆಗೆ ಹಣ ನೀಡುವ ಭರವಸೆ ನೀಡಿ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದುಕೊಂಡು ಬರುವಂತೆ ಸೂಚನೆ ನೀಡಿದರು.

@publictv.in

Also read: ಕರ್ನಾಟಕದಲ್ಲಿರುವ ಕೇಂದ್ರೀಯ ವಿದ್ಯಾಲಯ ಶಾಲೆಗಳು ಕರ್ನಾಟಕದಲ್ಲಿ ಕಡ್ಡಾಯವಾಗಿ ಕನ್ನಡ ಕಲಿಸಬೇಕಾದ ನಿಯಮವನ್ನು ಗಾಳಿಗೆ ತೂರಿವೆ: ಕನ್ನಡ ಅಭಿವೃದ್ದಿ ಪ್ರಾಧಿಕಾರ!!

ಈ ಕೆಲಸವನ್ನು ಮೊದಲೇ ಮಾಡಿದರೆ ಇಷ್ಟೆಲ್ಲಾ ರಾದಾಂತ ನಡೆಯುತ್ತಾನೆ ಇರುತ್ತಿರಲಿಲ್ಲವೇನೋ ಎಂದು ಪ್ರತಿಭಟನಾಗಾರರು ತಿಳಿಸಿದರು. ಜನರ ಸಮಸ್ಯೆಯನ್ನು ಕೇಳಿ ಪರಿಹರಿಸಲು ಹೋರಾಟ ಸಿಎಂ ಯಾಕೆ ಜನರನ್ನು ನೋಡಿ ಕೋಪಗೊಂಡರು ಎನ್ನುವುದು ಜನರ ಪ್ರಶ್ನೆಯಾದರೆ ಮೋದಿಯವರಿಗೆ ವೋಟ್ ಹಾಕೋದಕ್ಕೆ ಇಲ್ಲಿನ ಸಮಸ್ಯೆಗೆ ಏನು ಕಾರಣ ಎನ್ನುವುದು ತಿಳಿಯುತ್ತಿಲ್ಲ, ಆದರೆ ಸಿಎಂ ಅವರ ದರ್ಪ ಮಾತ್ರ ಅಲ್ಲಿನ ಜನರನ್ನು ಮತ್ತಷ್ಟು ಕೆರಳಿಸಲು ಕಾರಣವಾಗಿದೆ.

ರಾಯಚೂರು ಜಿಲ್ಲೆಗೆ 3 ಸಾವಿರ ಕೋಟಿ;

ಕರೇಗುಡ್ಡದಲ್ಲಿ ಗ್ರಾಮವಾಸ್ತವ್ಯ ನಡೆಸಿರುವ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಸ್ವಾಮಿ ರಾಯಚೂರಿನ ವಿವಿಧ ಯೋಜನೆಗಳಿಗೆ 3 ಸಾವಿರ ಕೋಟಿ ರೂ. ಅನುದಾನ ನೀಡುವುದಾಗಿ ಘೋಷಿಸಿದ್ದಾರೆ. ರಾಯಚೂರು ವಿಶ್ವವಿದ್ಯಾಲಯದ ಬಗ್ಗೆಯೂ ಕ್ಯಾಬಿನೆಟ್​ನಲ್ಲಿ ಚರ್ಚೆ ನಡೆಸಲಾಗುವುದು. ನಾನಿಲ್ಲಿ ಕೇವಲ ಗ್ರಾಮವಾಸ್ತವ್ಯಕ್ಕಾಗಿ ಬಂದಿಲ್ಲ. ಯಾವುದೇ ಯೋಜನೆಗೆ ಹಣದ ಕೊರತೆ ಇಲ್ಲ. ಸಾಲಮನ್ನಾದಿಂದಾಗಿ ಹಣದ ಕೊರತೆಯಾಗಿಲ್ಲ. ಯಾವ ಇಲಾಖೆಯ ಹಣವನ್ನೂ ಕಡಿತ ಮಾಡಿಲ್ಲ. ನನ್ನ ವೇಗಕ್ಕೆ ಅಧಿಕಾರಿಗಳು ಬರಬೇಕು. ನೀರಾವರಿ ಇಲಾಖೆಗೆ 19 ಸಾವಿರ ಕೋಟಿ ರೂ. ನೀಡಿದ್ದೇನೆ. ರಾಜ್ಯದ ಆರೂವರೆ ಕೋಟಿ ಜನ ನನಗೆ ಅಣ್ಣತಮ್ಮಂದಿರು ಎಂದು ಹೇಳಿದ್ದಾರೆ.

ವೀಡಿಯೊ ಕೃಪೆ: Public tv