ಕೆಲವು ಘಟನೆಗಳು ಹುಬ್ಬೇರಿಸುವಂತೆ ಮಾಡುತ್ತೇವೆ, ಏಕೆಂದರೆ ಹಾನಿ ಯಾಗಿದ್ದು ಸಾವಿರ ಲೆಕ್ಕದಲ್ಲಿ ಇದ್ದರು ಕೋಟ್ಯಾಂತರ ನಷ್ಟವನ್ನು ಮಾಡಲು ಕಾರಣವಾಗುತ್ತೇವೆ, ಅದರಲ್ಲಿ ಪ್ರಾಣಿಗಳ ವಿಷದಲಿ ಇಂತಹ ಘಟನೆಗಳು ಹೆಚ್ಚಾಗಿ ಕಂಡು ಬರುತ್ತೇವೆ, ಇಂತಹದೆ ಒಂದು ಘಟನೆ ನಡೆದಿದ್ದು ಅಪಘಾತದಲ್ಲಿ ಮೇಕೆಯೊಂದು ಸಾವನ್ನಪ್ಪಿದ್ದಕ್ಕೆ ವ್ಯಾಪಾರಿಗಳ ಬದಲಾಗಿ ಮಹಾನದಿ ಕೋಲ್ಫೀಲ್ಡ್ಸ್ ಲಿ.(ಎಂಸಿಎಲ್) ಕಂಪನಿ ಗೆ 2.68 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಕಂಪನಿ ತಿಳಿಸಿದೆ. ಪ್ರಾಣಿಗೂ ಕಂಪನಿಗೂ ಹೇಗೆ ಸಂಬಂಧ ಎನ್ನುವುದು ಎಲ್ಲರಲ್ಲಿ ಮೂಡುವ ಪ್ರಶ್ನೆಯಾದರೆ ಅದಕ್ಕೆ ಉತ್ತರ ಇಲ್ಲಿದೆ ನೋಡಿ.
Also read: ನಿಮ್ಮ ಕೈಯಲ್ಲಿ ಸ್ಮಾರ್ಟ್-ಫೋನ್ ಇದ್ದರೆ ಸಾಕು ನೀವೇ ಟ್ರಾಫಿಕ್ ಪೊಲೀಸ್ ಆಗಬಹುದು, ಹೇಗೆ ಅಂತೀರಾ ಮುಂದೆ ಓದಿ!!
ಪ್ರೀತಿಯಿಂದ ಸಾಕುವ ಪ್ರಾಣಿ ಸಾವನ್ನಪ್ಪಿದರೆ ಮಾಲೀಕನಿಗೆ ಮಾತ್ರ ನಷ್ಟವಾಗುತ್ತೆ ಆದರೆ ಕಂಪನಿಗೆ ಕೋಟ್ಯಾಂತರ ಹಣ ನಷ್ಟವಾಗಿದೆ. ಎಂದು ವರದಿಯಲ್ಲಿ ತಿಳಿಸಿದೆ. ಅದು ಹೇಗೆ ಅಂದರೆ ಕಲ್ಲಿದ್ದಲು ಸಾಗಿಸುತ್ತಿದ್ದ ಟಿಪ್ಪರ್ ಗೆ ಸಿಲುಕಿ ಅಪಘಾತದಲ್ಲಿ ಮೇಕೆ ಸಾವನ್ನಪ್ಪಿತ್ತು. ಇದಕ್ಕೆ ಪರಿಹಾರ ರೂಪವಾಗಿ ಸ್ಥಳೀಯರು 60 ಸಾವಿರ ರೂ. ಬೇಡಿಕೆ ಇಟ್ಟಿದ್ದಾರೆ. ಇದಕ್ಕಾಗಿ ಟಾಲ್ಚರ್ ಕಲ್ಲಿದ್ದಲು ಪ್ರದೇಶದಲ್ಲಿ ಸ್ಥಳೀಯರು ಪ್ರತಿಭಟನೆ ನಡೆಸಿ ಕೋಲಾಹಲ ಸೃಷ್ಟಿಸಿದ್ದರಿಂದ ನಷ್ಟ ಉಂಟಾಗಿದೆ ಎಂದು ಎಂಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.
Also read: 120ಕ್ಕೂ ಹೆಚ್ಚು ವರ್ಷ ಬದುಕುವ ಈ ಜನಾಂಗದವರನ್ನು ಕಂಡರೆ ನಿಮಗೆ ಖಂಡಿತ ಆಶ್ಚರ್ಯವಾಗುತ್ತೆ
ಈ ಘಟನೆಯ ಬಗ್ಗೆ ತಿಳಿದ ಪಕ್ಕದ ಹಳ್ಳಿಯ ನಿವಾಸಿಗಳ ಬೆಳಗ್ಗೆ 11 ಗಂಟೆಯಿಂದ ಟಾಲ್ಚರ್ ಕಲ್ಲಿದ್ದಲು ಕ್ಷೇತ್ರಗಳಲ್ಲಿನ ಜಗನ್ನಾಥ ಸಿಡಿಂಗ್ಸ್ ನಂ.1 ಹಾಗೂ 2ರಲ್ಲಿ ಪ್ರತಿಭಟನೆ ನಡೆಸಿ ಕಲ್ಲಿದ್ದಲು ಸಾಗಣೆ ಮತ್ತು ರವಾನೆ ಕೆಲಸವನ್ನು ಸ್ಥಗಿತಗೊಳಿಸಿದ್ದಾರೆ. ಪ್ರತಿಭಟನೆ ಕುರಿತು ಮಾಹಿತಿ ತಿಳಿದು ಹಿರಿಯ ಅಧಿಕಾರಿಗಳು ಹಾಗೂ ಪೊಲೀಸರು ಮಧ್ಯ ಪ್ರವೇಶಿಸಿ, ಪ್ರತಿಭಟನೆ ತಣ್ಣಗಾಗಿಸಲು ಮಧ್ಯಾಹ್ನ 2.30 ಆಗಿದ್ದು, ನಂತರ ಕೆಲಸ ಪುನರಾರಂಭಗೊಂಡಿದೆ ಎಂದು ಸಂಸ್ಥೆ ತಿಳಿಸಿದೆ. ಈ ಮೂರುವರೆ ಗಂಟೆಗಳ ಅಕ್ರಮ ಕೆಲಸ ಸ್ಥಗಿತದಿಂದಾಗಿ ಕಲ್ಲಿದ್ದಲು ಸಾಗಣೆಯಲ್ಲಿ 1.4 ಕೋಟಿ ರೂ. ಹಾಗೂ ರೈಲ್ವೇ ಮೂಲಕ ರವಾನೆಯಾಗುತ್ತಿದ್ದ ಕಲ್ಲಿದ್ದಲು ಸಾಗಣೆಯಲ್ಲಿ ತಡವಾಗಿದ್ದರಿಂದ 1.28 ಕೋಟಿ ರೂ. ನಷ್ಟವಾಗಿದೆ. ಒಟ್ಟು ಅಂದಾಜು 2.68 ಕೋಟಿ ರೂ.ಗಳ ನಷ್ಟದ ಜೊತೆಗೆ ಸರ್ಕಾರದ ಬೊಕ್ಕಸಕ್ಕೆ 46 ಲಕ್ಷ ರೂ. ನಷ್ಟವಾಗಿದೆ ಎಂದು ಕಂಪನಿ ಪ್ರಕಟಣೆಯಲ್ಲಿ ತಿಳಿಸಿದೆ.
ಅಕ್ರಮವಾಗಿ ಕೆಲಸಕ್ಕೆ ಅಡ್ಡಿಯುಂಟುಮಾಡಿದವರ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವಂತೆ ಕಂಪನಿಯೂ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದೆ. ಕಲ್ಲಿದ್ದಲು ಗಣಿಗಾರಿಕೆ ಕಾರ್ಯಾಚರಣೆಗೆ ಇಂತಹ ಅಕ್ರಮ ಅಡೆತಡೆಯಲು ರಾಷ್ಟ್ರದ ಆರ್ಥಿಕ ಬೆಳವಣಿಗೆಗೆ ವಿರುದ್ಧವಾಗಿದೆ. ಅಲ್ಲದೆ, ದೇಶದ ಐದು ಟ್ರಿಲಿಯನ್ ಆರ್ಥಿಕತೆ ಗುರಿಗೆ ಅಡೆತಡೆಗಳನ್ನು ಉಂಟುಮಾಡುತ್ತದೆ ಎಂದು ಎಂಸಿಎಲ್ ವಕ್ತಾರರು ತಿಳಿಸಿದ್ದಾರೆ. ಕಲ್ಲಿದ್ದಲು ಗಣಿಗಾರಿಕೆ ಪ್ರದೇಶವನ್ನು ಕಾರ್ಯನಿರತ ವಲಯವನ್ನಾಗಿ ಗುರುತಿಸಲಾಗಿದೆ.
Also read: ಸಿಗರೇಟ್ ಸೇದಲು ರಸ್ತೆ ಮದ್ಯ ವಾಹನ ನಿಲ್ಲಿಸಿದ ವ್ಯಕ್ತಿಯ ಮೇಲೆ ಐದು ಜನರಿಂದ ಗ್ಯಾಂಗ್-ರೇಪ್.!
ಇಲ್ಲಿ ಅಧಿಕೃತ ಚಲನೆ, ತರಬೇತಿ ಪಡೆದ ಮತ್ತು ಗಣಿಗಾರಿಕೆ ಕುರಿತು ಜ್ಞಾನ ಹೊಂದಿರುವವರಿಗೆ ಮಾತ್ರ ಕಾರ್ಯನಿರ್ವಹಿಸಲು ಅವಕಾಶವಿದೆ. ಜನಸಾಮಾನ್ಯರ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಅದಾಗ್ಯೂ ಅಪರಿಚಿತರು ಹಾಗೂ ಇಲ್ಲಿನ ಸ್ಥಳೀಯರು ಕಲ್ಲಿದ್ದಲು ಪಡೆಯಲು ಹಾಗೂ ಕಟ್ಟಿಗೆ ಆಯ್ದುಕೊಳ್ಳಲು ಅಕ್ರಮವಾಗಿ ಪ್ರವೇಶಿಸುತ್ತಿದ್ದಾರೆ. ತಾವು ಬರುವುದಲ್ಲದೆ ತಮ್ಮ ಜಾನುವಾರುಗಳನ್ನೂ ಮೇಯಿಸಲು ತರುತ್ತಿದ್ದಾರೆ. ಇದು ಆತಂಕಕ್ಕೆ ಕಾರಣವಾಗಿದೆ ಎಂದು ಸಂಸ್ಥೆಯ ವಕ್ತಾರರು ಆರೋಪಿಸಿದ್ದಾರೆ. ಈ ಕುರಿತು ತಡೆ ನೀಡಿದ ಜನರ ಮೇಲೆ ಕೇಸ್ ಕೂಡ ದಾಖಲಿಸಿದ್ದಾರೆ.