ಪ್ರಧಾನಿ ನರೇಂದ್ರ ಮೋದಿ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಭರ್ಜರಿ ಗಿಫ್ಟ್, ಪ್ರತಿ ತಿಂಗಳು 75000 ಸ್ಕಾಲರ್ಶಿಪ್..!

0
2072

ಪ್ರಧಾನ ಮಂತ್ರಿ ವಿದ್ಯಾರ್ಥಿ ವೇತನ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರ ಬುದ್ಧಿವಂತ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ಸ್ಕಾಲರ್ಶಿಪ್ ನೀಡಲು ನಿರ್ಧರಿಸಿದೆ.

ಪ್ರತಿ ತಿಂಗಳು 1000 ಬುದ್ಧಿವಂತ ವಿದ್ಯಾರ್ಥಿಗಳಿಗೆ 75,000 ರು. ನೀಡುವುದಾಗಿ ಮಾನವ ಸಂಪನ್ಮೂಲ ಅಭಿವೃದ್ಧಿ ಖಾತೆ ಸಚಿವ ಪ್ರಕಾಶ್ ಜಾವ್ಡೇಕರ್ ಇದನ್ನು ಪ್ರಕಟಿಸಿದ್ದಾರೆ. ಇದಕ್ಕಾಗಿ ಕೇಂದ್ರ ಸರ್ಕಾರ 20,000 ಕೋಟಿ ರು. ಮೀಸಲಿರಿಸಿದೆ. ದೇಶದಲ್ಲಿ ಸಂಶೋಧನಾ ಮೂಲ ಸೌಕರ್ಯ ನಿರ್ಮಾಣದ ಉದ್ದೇಶದಿಂದ ಈ ಯೋಜನೆ ಹಮ್ಮಿಕೊಂಡಿರುವುದಾಗಿ ಸಚಿವರು ತಿಳಿಸಿದ್ದಾರೆ.

ಐಐಟಿಯಲ್ಲಿ ಸ್ಥಳೀಯ ವಿದ್ಯಾರ್ಥಿಗಳಿಗೆ ಶೇ 25ರಷ್ಟು ಮೀಸಲಾತಿ ಅಷ್ಟೇ ಅಲ್ಲದೇ ವಿಶ್ವವಿದ್ಯಾಲಯಗಳ ಮೇಲೆ ಯುಜಿಸಿ ಮತ್ತು AICTE ನಿಯಂತ್ರಣವನ್ನೂ ಕಡಿಮೆ ಮಾಡುವುದಾಗಿ ಭರವಸೆ ನೀಡಿದ್ದಾರೆ. ಯೂನಿವರ್ಸಿಟಿ ಗ್ರಾಂಟ್ಸ್ ಕಮಿಷನ್ (ಯುಜಿಸಿ) ಮತ್ತು ಯುನಿವರ್ಸಿಟಿಗಳ ಆಲ್ ಇಂಡಿಯಾ ಕೌನ್ಸಿಲ್ ಫಾರ್ ಟೆಕ್ನಿಕಲ್ ಎಜ್ಯುಕೇಷನ್ (ಎಐಸಿಟಿಇ) ನಿಯಂತ್ರಣವನ್ನು ತಗ್ಗಿಸಲು ತನ್ನ ಸಚಿವಾಲಯವು ಕಾರ್ಯನಿರ್ವಹಿಸುತ್ತಿದೆ ಎಂದು ಯೂನಿಯನ್ ಮಾನವ ಸಂಪನ್ಮೂಲ ಸಚಿವರು ಹೇಳಿದರು.

ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಹೆಚ್ಚು ಸ್ವಾಯತ್ತತೆಯನ್ನು ನೀಡುವುದು ಸರ್ಕಾರದ ಉದ್ದೇಶ, ಆದ್ದರಿಂದ ಈ ಸಂಸ್ಥೆಗಳು ಉತ್ತಮ ಶಿಕ್ಷಣ ಮತ್ತು ಸಂಶೋಧನೆಗೆ ಹೆಚ್ಚಿನ ಸ್ವಾತಂತ್ರ್ಯವನ್ನು ಸಿಕ್ಕರೆ ಉತ್ತಮ ಶಿಕ್ಷಣ ಹಾಗೂ ಸಂಶೋಧನೆ ಸಾಧ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.